ಬುಧವಾರ, 21 ಫೆಬ್ರುವರಿ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಸಿಂಧನೂರು | ಫೆ.21 ರಂದು ಸಾಮೂಹಿಕ ವಿವಾಹ: ಬಸವರಾಜ ಗಸ್ತಿ

Published 4 ಜನವರಿ 2024, 15:49 IST
Last Updated 4 ಜನವರಿ 2024, 15:49 IST
ಅಕ್ಷರ ಗಾತ್ರ

ಸಿಂಧನೂರು: ‘ಕರ್ನಾಟಕ ರಕ್ಷಣಾ ವೇದಿಕೆ (ಟಿ.ನಾರಾಯಣಗೌಡ ಬಣ) ತಾಲ್ಲೂಕು ಘಟಕದ ನೇತೃತ್ವದಲ್ಲಿ ಫೆಬ್ರವರಿ 21 ರಂದು ನಗರದ ಕನಕದಾಸ ಕಲ್ಯಾಣ ಮಂಟಪದಲ್ಲಿ 51 ಜೋಡಿ ಸಾಮೂಹಿಕ ವಿವಾಹ ಕಾರ್ಯಕ್ರಮ ಏರ್ಪಡಿಸಲಾಗಿದೆ’ ಎಂದು ಕರವೇ ಕಲಾವಿದರ ಘಟಕ ಅಧ್ಯಕ್ಷ ಬಸವರಾಜ ಗಸ್ತಿ ತಿಳಿಸಿದರು.

ಗುರುವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ‘ನಾಲ್ಕನೇ ವರ್ಷದ ಸಾಮೂಹಿಕ ವಿವಾಹ ಕಾರ್ಯಕ್ರಮ ನಡೆಸಲು ತೀರ್ಮಾನಿಸಿದ್ದು, ರಾಜ್ಯ ಘಟಕದ ಅಧ್ಯಕ್ಷ ಟಿ.ನಾರಾಯಣಗೌಡ ಸೇರಿ ರಾಜ್ಯ ಹಾಗೂ ಜಿಲ್ಲಾ ಪದಾಧಿಕಾರಿಗಳು, ಸ್ಥಳೀಯ ನಾಯಕರು ಆಗಮಿಸಲಿದ್ದಾರೆ. ವಿವಿಧ ಸಮಿತಿ ರಚಿಸಿ ಜವಾಬ್ದಾರಿ ವಹಿಸಲಾಗಿದೆ’ ಎಂದರು.

ನೋಂದಾಯಿಸುವವರು ಮತ್ತು ಹೆಚ್ಚಿನ ಮಾಹಿತಿಗಾಗಿ ವೀರೇಶ ಗೋನವಾರ (9620091050) ಅವರನ್ನು ಸಂಪರ್ಕಿಸಬೇಕು. ಕಾಲುಂಗುರ, ತಾಳಿಯನ್ನು ವೇದಿಕೆಯೇ ನೀಡಲಿದೆ. ಫೆ.10 ಹೆಸರು ನೋಂದಾಯಿಸಿಕೊಳ್ಳಲು ಕೊನೆಯ ದಿನ ಎಂದು ತಿಳಿಸಿದರು.

ಕರವೇ ತಾಲ್ಲೂಕು ಘಟಕದ ಅಧ್ಯಕ್ಷ ಎಚ್.ಗಂಗಣ್ಣ ಡಿಶ್, ಸಾಮಾಜಿಕ ಜಾಲತಾಣದ ಅಧ್ಯಕ್ಷ ರಾಮಕೃಷ್ಣ ಭಜಂತ್ರಿ, ಸದಸ್ಯರಾದ ಎಸ್.ಎಸ್.ಪಾಷಾ, ರಾಜಾಸಾಬ ಗಾಂಧಿನಗರ, ಬಸವರಾಜ ವಿಶ್ವಕರ್ಮ, ರವಿ ಬಸಾಪುರ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT