ರಾಯಚೂರು: ರಾಯಚೂರು ಏಮ್ಸ್ ಹೋರಾಟ ಸಮಿತಿಯಿಂದ ನಡೆಯುತ್ತಿರುವ ಅನಿರ್ಧಿಷ್ಟಾವಧಿ ಧರಣಿ ಸತ್ಯಾಗೃಹ ಬುಧವಾರ ಒಂದು ಸಾವಿರ ದಿನಗಳಿಗೆ ಪದಾರ್ಪಣೆ ಮಾಡಿತು. ಕೇಂದ್ರ ಸರ್ಕಾರ ಬಜೆಟ್ನಲ್ಲಿ ರಾಯಚೂರಿಗೆ ಏಮ್ಸ್ ಘೋಷಣೆ ಮಾಡದಿರುವುದನ್ನು ಖಂಡಿಸಿ ಸಮಿತಿ ನೇತೃತ್ವದಲ್ಲಿ ವಿವಿಧ ಸಂಘಟನೆಗಳು ನಗರದಲ್ಲಿ ಬೃಹತ್ ಪ್ರತಿಭಟನೆ ನಡೆಸಿದವು

ನಗರದ ಕರ್ನಾಟಕ ಸಂಘದಿಂದ ಆರಂಭವಾಗಿರುವ ಪ್ರತಿಭಟನಾ ಮೆರವಣಿಗೆಯಲ್ಲಿ ಕನ್ನಡಪರ, ದಲಿತ ಸಂಘಟನೆಗಳು, ವಿದ್ಯಾರ್ಥಿ ಸಂಘಟನೆಗಳು, ಸಂಘ ಸಂಸ್ಥೆಗಳ ಪ್ರಮುಖರು ಪಾಲ್ಗೊಂಡಿದ್ದಾರೆ.

ಹೋರಾಟ ಸಮಿತಿಯ ಪ್ರಧಾನ ಸಂಚಾಲಕ ಬಸವರಾಜ ಕಳಸ ಪ್ರತಿಭಟನಾಕಾರರ ನೇತೃತ್ವ ವಹಿಸಿದ್ದಾರೆ.

‘ಕೇಂದ್ರ ಸರ್ಕಾರ ರಾಯಚೂರು ಜಿಲ್ಲೆಯನ್ನು ನಿರ್ಲಕ್ಷಿಸುತ್ತಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕೇಂದ್ರ ಸರ್ಕಾರಕ್ಕೆ ಐದು ಬಾರಿ ಪತ್ರ ಬರೆದರೂ ಜನರ ಮನವಿಗೆ ಕವಡೆ ಕಾಸಿನ ಬೆಲೆ ಕೊಟ್ಟಿಲ್ಲ. ಕೇಂದ್ರದಲ್ಲಿ ರಾಜ್ಯವನ್ನು ಪ್ರತಿನಿಧಿಸಿರುವ ಸಂಸದರು, ಕೇಂದ್ರ ಸಚಿವರು ಹಾಗೂ ಬಿಜೆಪಿ ಮುಖಂಡರು ಜಿಲ್ಲೆಯ ಪರವಾಗಿ ಕೇಂದ್ರದ ಮೇಲೆ ಒತ್ತಡ ಹಾಕಿಲ್ಲ. ಬಿಜೆಪಿ ಮುಖಂಡರ ಕುತಂತ್ರದಿಂದಾಗಿ ಏಮ್ಸ್ ಮಂಜೂರಾತಿ ವಿಳಂಬವಾಗುತ್ತಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಕೇಂದ್ರ ಸಚಿವರಾದ ನಿರ್ಮಲಾ ಸೀತಾರಾಮನ್, ಪ್ರಹ್ಲಾದ್ ಜೋಶಿ, ರೈಲ್ವೆ ಖಾತೆ ರಾಜ್ಯ ಸಚಿವ ಸೋಮಣ್ಣ, ಶೋಭಾ ಕರಂದ್ಲಾಜೆ, ಪ್ರಹ್ಲಾದ್ ಜೋಶಿ ಕಣ್ಣೊರೆಸುವ ತಂತ್ರ ಅನುಸರಿಸುತ್ತಿದ್ದಾರೆ. ಕೇಂದ್ರ ಸರ್ಕಾರ ಕಲ್ಯಾಣ ಕರ್ನಾಟಕದ ಜನರನ್ನು ಇನ್ನು ಮರಳು ಮಾಡಲು ಸಾಧ್ಯವಿಲ್ಲ. ನಮ್ಮ ಬೇಡಿಕೆ ಈಡೇರಿಸುವವ ವರೆಗೂ ಹೋರಾಟ ಮುಂದುವರಿಯಲಿದೆ. ತಾಲ್ಲೂಕು ಮಟ್ಟದಲ್ಲಿ ಪ್ರತಿಭಟನೆ ನಡೆಯಲಿದೆ ಎಂದು ತಿಳಿಸಿದರು.

ಕಲ್ಯಾಣ ಕರ್ನಾಟಕದ ಹೋರಾಟಗಾರ ಲಕ್ಷ್ಮಣ ದಸ್ತಿ, ಕಲಬುರಗಿಯ ಶರಣಬಸ್ಸಪ್ಪ ಅಪ್ಪ ಶಿಕ್ಷಣ ಸಂಸ್ಥೆಯ ಬಸವರಾಜ , ಹೋರಾಟಗಾರ ಆರ್.ಕೆ. ಹುಡಗಿ, ಏಮ್ಸ್ ಹೋರಾಟ ಸಮಿತಿಯ ಸಹ ಸಂಚಾಲಕ ಅಶೋಕ ಕುಮಾರ ಜೈನ್, ಜಾನ್ ವೆಸ್ಲಿ, ವಿನಯ ಕುಮಾರ ಚಿತ್ರಕಾರ, ಎಂ.ಆರ್. ಬೇರಿ

ಅಶೋಕಕುಮಾರ ಜೈನ್, ಜಾನ್ ವೆಸ್ಲಿ, ನರಸಪ್ಪ ಬಾಡಿಯಲ್, ಎಂ .ಆರ್ ಬೇರಿ, ಆರಿಫ್ ಮಿಯಾ ನೆಲಹಾಳ್, ಮಹಮ್ಮದ್ ಇಸಾಕ್, ವೆಂಕಟರೆಡ್ಡಿ , ವೆಂಕಯ್ಯ ಶೆಟ್ಟಿ ಹೊಸಪೇಟೆ, ಪರಶುರಾಮ, ರಮೇಶ ರಾವ್ ಕಲ್ಲೂರ್, ಗುರುರಾಜ್ ಕುಲಕರ್ಣಿ, ಪ್ರಸನ್ನ ಆಲಂಪಲ್ಲಿ, ವಿನಯಕುಮಾರ ಚಿತ್ರದ, ಬಸವರಾಜ ಮಿಮಿಕ್ರಿ, ಶಾಂತಗೌಡ ಸುಭೇದಾರ್, ಅಮರೇಗೌಡ ಪಾಟೀಲ ಪಾಲ್ಗೊಂಡಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.