ಕವಿತಾಳ: ತುರ್ತು ವಾಹನ ಕೊರತೆ ಸೇರಿದಂತೆ ಪಟ್ಟಣದ ಸಮುದಾಯ ಆರೋಗ್ಯ ಕೇಂದ್ರದಲ್ಲಿನ ಸಮಸ್ಯೆಗಳ ಪರಿಹಾರಕ್ಕೆ ಒತ್ತಾಯಿಸಿ ದಲಿತ ಸಂರಕ್ಷ ಸಮಿತಿ ಮುಖಂಡರು ತಾಲ್ಲೂಕು ಆರೋಗ್ಯಾಧಿಕಾರಿ ಡಾ.ಶರಣಬಸವರಾಜಗೌಡ ಅವರಿಗೆ ಬುಧವಾರ ಮನವಿ ಸಲ್ಲಿಸಿದರು.

‘ತುರ್ತು ವಾಹನ ಲಭ್ಯವಾಗದ ಕಾರಣ ಚಿಕಿತ್ಸೆ ಸಿಗದೆ ವ್ಯಕ್ತಿಯೊಬ್ಬರು ಸಾವನ್ನಪ್ಪಿದ್ದು ಈ ಬಗ್ಗೆ ತನಿಖೆ ನಡೆಸಿ ತಪ್ಪಿತಸ್ಥ ಅಧಿಕಾರಿಗಳ ವಿರುದ್ದ ಕ್ರಮ ಕೈಗೊಳ್ಳಬೇಕು, ಎಂಬಿಬಿಎಸ್, ತಜ್ಞ ವೈದ್ಯರು ಮತ್ತು ಸ್ಟಾಫ್ ನರ್ಸ್ಗಳ ನೇಮಕ ಮಾಡಬೇಕು’ ಎಂದು ಒತ್ತಾಯಿಸಿದರು.

ಸಮಸ್ಯೆಗಳ ಕುರಿತು ಕ್ರಮ ಕೈಗೊಳ್ಳದಿದ್ದರೆ ಪ್ರತಿಭಟನೆ ನಡೆಸಲಾಗುವುದು ಎಂದು ಎಚ್ಚರಿಸಿದರು.

ಸಂಘಟನೆ ಅಧ್ಯಕ್ಷ ಹುಚ್ಚಪ್ಪ ಬುಳ್ಳಾಪುರ, ಫಕೀರಪ್ಪ ನವಲಕಲ್, ಮೆಹಬೂಬ್ ಅರಿಕೇರಿ, ನಿಂಗಪ್ಪ ಪೇಂಟರ್, ದೇವರಾಜ ಮ್ಯಾಗಳಮನಿ, ಬಸವರಾಜ ಕೆಳಗೇರಿ , ನಿಂಗಪ್ಪ, ಮೌನೇಶ ಬುಳ್ಳಾಪುರ, ಸುಭಾಷ್, ವೆಂಕಟೇಶ, ಶಿವಕುಮಾರ ಮತ್ತಿತರರು ಉಪಸ್ಥಿತರಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.