ರಾಯಚೂರು: ರಾಜೀವ್ ಗಾಂಧಿ ಆರೋಗ್ಯ ವಿಶ್ವವಿದ್ಯಾಲಯವು ಡಿಸೆಂಬರ್ನಲ್ಲಿ ನಡೆಸಿದ ಎಂಬಿಬಿಎಸ್ ಪ್ರಥಮ ಹಾಗೂ ಎರಡನೇ ವರ್ಷದ ಪರೀಕ್ಷೆಯಲ್ಲಿ ರಾಯಚೂರು ಸರ್ಕಾರಿ ವೈದ್ಯಕೀಯ ವಿಜ್ಞಾನಗಳ ಸಂಸ್ಥೆಯ ವಿದ್ಯಾರ್ಥಿಗಳು ಅತ್ಯುತ್ತಮ ಸಾಧನೆ ತೋರಿದ್ದಾರೆ.

ನಾಲ್ವರಿಗೆ ಡಿಸ್ಟಿಂಕ್ಷನ್: ರಾಯಚೂರಿನ ರಿಮ್ಸ್ ವೈದ್ಯಕೀಯ ಸಂಸ್ಥೆಯಲ್ಲಿ 2023-24ನೇ ಸಾಲಿನ ವೈದ್ಯಕೀಯ ಪ್ರಥಮ ವರ್ಷದ ಪರೀಕ್ಷೆ ಬರೆದ ಎಲ್ಲ 150 ವಿದ್ಯಾರ್ಥಿಗಳೂ ತೇರ್ಗಡೆಯಾಗಿದ್ದಾರೆ. ಈ ಪೈಕಿ 4 ವಿದ್ಯಾರ್ಥಿಗಳು ಡಿಸ್ಟಿಂಕ್ಷನ್, 80 ವಿದ್ಯಾರ್ಥಿಗಳು ಪ್ರಥಮ ದರ್ಜೆ, 57 ವಿದ್ಯಾರ್ಥಿಗಳು ದ್ವಿತೀಯ ಶ್ರೇಣಿಯಲ್ಲಿ ತೇರ್ಗಡೆಯಾಗಿದ್ದಾರೆ.

ಮೊದಲ ವರ್ಷದ ಟಾಪರ್ಗಳು: ಮೊದಲ ವರ್ಷದ ಎಂ.ಬಿ.ಬಿ.ಎಸ್. ಪರೀಕ್ಷೆಯಲ್ಲಿ ಅಭಿಜ್ಞಾರಾವ್ .ವಿ. ಶೇ79.78, ಸುಪ್ರಿಯಾ ಶೇ78.67, ವರ್ಷ.ಜಿ ಶೇ77.78, ಶ್ರುತಿ ಶೇ77.56 ಅಂಕಗಳನ್ನು ಪಡೆದು ಮೊದಲ ವರ್ಷದ ಟಾಪರ್ ಆಗಿ ಹೊರಹೊಮ್ಮಿದ್ದಾರೆ. ಒಟ್ಟು 150 ವಿದ್ಯಾರ್ಥಿಗಳಲ್ಲಿ ಎಲ್ಲರೂ ತೇರ್ಗಡೆಯಾಗಿದ್ದಾರೆ. ಈ ಪೈಕಿ 18 ವಿದ್ಯಾರ್ಥಿಗಳು ಡಿಸ್ಟಿಂಕ್ಷನ್, 107 ವಿದ್ಯಾರ್ಥಿಗಳು ಪ್ರಥಮ ಶ್ರೇಣಿ, 57 ವಿದ್ಯಾರ್ಥಿಗಳು ದ್ವಿತೀಯಲ್ಲಿ ತೇರ್ಗಡೆಯಾಗಿದ್ದಾರೆ.

ಎರಡನೇ ವರ್ಷದ ಟಾಪರ್ಗಳು: ಎರಡನೇ ವರ್ಷದ ಪರೀಕ್ಷೆಯಲ್ಲಿ ಪಾರ್ವತಿ ಪಾಟೀಲ ಶೇ.81, ಲಕ್ಷಿಕಾಂತ ಶೇ.80, ಹರ್ಷಿತಾ ಜಿ.ಎ. ಶೇ80, ರಾಜಶೇಖರ್ ಶೇ80, ಬುಶ್ರಾ ಮೆಹಕ್ ಶೇ79 ಪಡೆದು ಟಾಪರ್ ಆಗಿ ಹೊರಹೊಮ್ಮಿದ್ದಾರೆ.
ವೈದ್ಯಶಾಸ್ತ್ರ ವಿಭಾಗದಲ್ಲಿ ಡಾ.ಮೇರಿ ಪ್ರಿಯಾಗೆ ಡಿಸ್ಟಿಂಕ್ಷನ್: ವೈದ್ಯಶಾಸ್ತ್ರ ವಿಭಾಗದ ಸ್ನಾತಕೋತ್ತರ ವಿಭಾಗದಲ್ಲಿ ಪರೀಕ್ಷೆಗೆ ಹಾಜರಾಗಿದ್ದ ಒಟ್ಟು 4 ವಿದ್ಯಾರ್ಥಿಗಳಲ್ಲಿ ಡಾ.ಮೇರಿ ಪ್ರಿಯಾ ಶೇ77ರಷ್ಟು ಅಂಕಗಳನ್ನು ಪಡೆದು ಡಿಸ್ಟಿಂಕ್ಷನ್ನಲ್ಲಿ ತೇರ್ಗಡೆಯಾಗಿದ್ದಾಳೆ. ಮೂವರು ವಿದ್ಯಾರ್ಥಿಗಳು ಪ್ರಥಮ ದರ್ಜೆಯಲ್ಲಿ ಉತ್ತೀರ್ಣರಾಗಿದ್ದಾರೆ.

ಶಸ್ತ್ರ ಚಿಕಿತ್ಸಾ ಶಾಸ್ತ್ರ ವಿಭಾಗದಲ್ಲಿ ಡಾ.ಐಶ್ವರ್ಯ ಪ್ರಥಮ: ಶಸ್ತ್ರ ಚಿಕಿತ್ಸಾ ಶಾಸ್ತ್ರ ವಿಭಾಗದಲ್ಲಿ ಒಟ್ಟು ನಾಲ್ವರು ವಿದ್ಯಾರ್ಥಿಗಳಲ್ಲಿ ಡಾ.ಐಶ್ವರ್ಯ ಕುಲಕರ್ಣಿ ಅವರು ಪ್ರಥಮ ಸ್ಥಾನ ಪಡೆದಿದ್ದಾರೆ.

ವಿದ್ಯಾರ್ಥಿಗಳ ಸಾಧನೆಗೆ ಸಂಸ್ಥೆಯ ನಿರ್ದೇಶಕ ಡಾ.ರಮೇಶ ಬಿ.ಎಚ್., ಪ್ರಾಂಶುಪಾಲ ಡಾ.ಬಸವರಾಜ್ ಎಂ.ಪಾಟೀಲ, ಮುಖ್ಯ ಆಡಳಿತಾಧಿಕಾರಿ ಡಾ.ಕೆ.ಆರ್.ದುರುಗೇಶ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.