ಸಿರವಾರ: ಎಸ್‌ಸಿ, ಎಸ್‌ಟಿ ಸಮುದಾಯಗಳ ಸಾಮಾಜಿಕ ನ್ಯಾಯಕ್ಕಾಗಿ ಸದಾಶಿವ ಆಯೋಗ ವರದಿಯಂತೆ ಒಳ ಮೀಸಲಾತಿ ಜಾರಿಗೊಳಿಸುವಂತೆ ಒತ್ತಾಯಿಸಿ ಗುರುವಾರ (ಸೆ.19) ಮಸ್ಕಿ ಪಟ್ಟಣದಲ್ಲಿ ಬೃಹತ್ ರ್‍ಯಾಲಿಯೊಂದಿಗೆ ಬಹಿರಂಗ ಸಭೆ ಹಮ್ಮಿಕೊಳ್ಳಲಾಗಿದೆ ಎಂದು ಎಂಆರ್‌ಎಚ್‌ಎಸ್ ಜಿಲ್ಲಾ ಘಟಕದ ಅಧ್ಯಕ್ಷ ಜೆ.ಅಬ್ರಾಹಂ ಹೊನ್ನಟಗಿ ಹೇಳಿದರು.
ಪಟ್ಟಣದಲ್ಲಿ ಬುಧವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ‘ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ ಜನರಿಗೆ ಒಳ ಮೀಸಲಾತಿ ನ್ಯಾಯ ಸಮ್ಮತವಾಗಿದೆ. ಕೂಡಲೇ ಆಯಾ ರಾಜ್ಯ ಸರ್ಕಾರ ಒಳ ಮೀಸಲಾತಿ ನೀಡಲು ಅವಕಾಶವಿದೆ ಎಂದು ಸುಪ್ರೀಂಕೋರ್ಟ್ ಪ್ರಕಟಿಸಿದ ತೀರ್ಪಿನಂತೆ ಸರ್ಕಾರಗಳು ನಡೆದುಕೊಳ್ಳಬೇಕು. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಚುನಾವಣೆಗೂ ಮುನ್ನ ಚಿತ್ರದುರ್ಗದಲ್ಲಿ ಮಾಡಿದ ಘೋಷಣೆಯಂತೆ ಶೀಘ್ರದಲ್ಲೇ ಒಳ ಮೀಸಲಾತಿ ಜಾರಿಗೊಳಿಸಬೇಕು’ ಎಂದರು.