ರಾಯಚೂರು: ‘ನೈಸರ್ಗಿಕ ವಿಪತ್ತು ಹಾಗೂ ಅಕಾಲಿಕವಾಗಿ ಮಾನವೀಯ ಸಂಕಷ್ಟಗಳಲ್ಲಿ ಸಿಲುಕಿದವರಿಗೆ ಮನೋಬಲ ತುಂಬಿ ಅವರ ಮಾನಸಿಕ ಆರೋಗ್ಯ ಕಾಪಾಡುವುದು ಪ್ರತಿಯೊಬ್ಬರ ಕರ್ತವ್ಯವಾಗಿದೆ‘ ಎಂದು ಹಿರಿಯ ದಿವಾಣಿ ನ್ಯಾಯಾಧೀಶ ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಹನುಮಂತ ಸಾತ್ವಿಕ್ ತಿಳಿಸಿದರು.

ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿಗಳ ಕಾರ್ಯಾಲಯದ ಸಭಾಂಗಣದಲ್ಲಿ ಅಕ್ಟೋಬರ್ 17ರಂದು ನಡೆದ ವಿಶ್ವ ಮಾನಸಿಕ ಆರೋಗ್ಯ ದಿನಾಚರಣೆ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.

‘ಇತ್ತೀಚಿನ ವರ್ಷಗಳಲ್ಲಿ ನೈಸರ್ಗಿಕ ವಿಪತ್ತುಗಳು, ಯುದ್ದ, ಸಂಘರ್ಷಗಳು ಹಾಗೂ ಎಲ್ಲಡೆ ವ್ಯಾಪಕವಾಗಿ ಕಂಡುಬರುತ್ತಿವೆ. ಇಂತಹ ಸಂದರ್ಭದಲ್ಲಿ ಸಾಂಕ್ರಾಮಿಕ ರೋಗಗಳ ಕಾಣಿಸಿಕೊಂಡು ಜನರ ಮನೋಬಲ ಕುಗ್ಗುವ ಸಾಧ್ಯತೆ ಇರುತ್ತದೆ. ಅವರಿಗೆ ಆತ್ಮಸ್ಥೈರ್ಯ ತುಂಬಬೇಕು‘ ಎಂದು ಹೇಳಿದರು.

ಜಿಲ್ಲಾ ಮಾನಸಿಕ ಕಾರ್ಯಕ್ರಮ ಅನುಷ್ಠಾನ ಅಧಿಕಾರಿ ಡಾ.ನಂದಿತಾ ಎಂ.ಎನ್ ಅವರು ಪ್ರಾಸ್ತಾವಿಕ ಮಾತನಾಡಿ, ‘ಮಾನಸಿಕ ಆರೋಗ್ಯ ಸಮಸ್ಯೆಯನ್ನು ಗಂಭೀರವಾಗಿ ಪರಿಗಣಿಸಿ ಪ್ರಾಥಾಮಿಕ ಆರೋಗ್ಯ ಕೇಂದ್ರಗಳ ಮಟ್ಟದಲ್ಲಿಯೇ ಮಾನಸಿಕ ಆರೋಗ್ಯ ಸೇವೆಗಳನ್ನು ಒದಗಿಸಲಾಗಿದೆ‘ ಎಂದು ತಿಳಿಸಿದರು.

‘ಜಿಲ್ಲಾ ಮಾನಸಿಕ ಆರೋಗ್ಯ ಕಾರ್ಯಕ್ರಮದಡಿಯಲ್ಲಿ ಇದನ್ನು ನಿಯಮಿತ ನಡೆಸಲಾಗುತ್ತಿದೆ.. ಮನೋಚೈತನ್ಯ ಕಾರ್ಯಕ್ರಮ ಮೂಲಕ ತಾಲ್ಲೂಕು ಮಟ್ಟದ ಆಸ್ಪತ್ರೆ, ಸಮುದಾಯ ಆರೋಗ್ಯ ಕೇಂದ್ರಗಳಲ್ಲಿ ಆಪ್ತಸಮಾಲೋಚನೆ, ಸಲಹೆ, ಚಿಕಿತ್ಸೆ ನೀಡುವ ಜೊತೆಗೆ ತುರ್ತು ಪರಿಸ್ಥಿತಿಗಳಿಗೆ ತಕ್ಕಂತೆ ತುರ್ತು ಮಾನಸಿಕ ಆರೈಕೆ ಯೋಜನೆಯ ಕುರಿತು ಶಾಲಾ-ಕಾಲೇಜುಗಳಲ್ಲಿ ಜೀವನ ಕೌಶಲ್ಯ ಶಿಕ್ಷಣ, ಒತ್ತಡ ನಿರ್ವಹಣಾ ತರಬೇತಿ ನೀಡಲಾಗುತ್ತಿದೆ‘ ಎಂದರು.

‘ಪತ್ರಿಕಾ, ಎಲೆಕ್ಟ್ರಾನಿಕ್ ಮಾಧ್ಯಮಗಳ ಮೂಲಕವು ಮಾಹಿತಿಯನ್ನು ಹಂಚಿಕೊಂಡು ಜನರಲ್ಲಿ ಅರಿವು ಮೂಡಿಸಲಾಗುತ್ತಿದೆ’ ಎಂದು ಅವರು ತಿಳಿಸಿದರು.

ಮನೋರೋಗ ತಜ್ಞ ಡಾ.ಮನೋಹರ ಪತ್ತಾರ ಉಪನ್ಯಾಸ ನೀಡಿದರು. ಜಿಲ್ಲಾ ಸರ್ವೆಕ್ಷಣಾಧಿಕಾರಿ ಡಾ ಗಣೇಶ ಅಧ್ಯಕ್ಷತೆ ವಹಿಸಿದ್ದರು. ರಿಮ್ಸ್ನ ಪ್ರಭಾರಿ ಡೀನ್ ಡಾ.ಅರವಿಂದ ಸಂಗಾವಿ, ಜಿಲ್ಲಾ ರೋಗವಾಹಕ ಆಶ್ರೀತ ರೋಗಗಳ ನಿಯಂತ್ರಣಾಧಿಕಾರಿ ಡಾ.ಚಂದ್ರಶೇಖರಯ್ಯ ಸ್ವಾಮಿ, ಜಿಲ್ಲಾ ಕುಟುಂಬ ಕಲ್ಯಾಣ ಕಾರ್ಯಕ್ರಮ ಅನುಷ್ಟಾನ ಅಧಿಕಾರಿ ಡಾ.ಶಿವಕುಮಾರ, ಜಿಲ್ಲಾ ಕ್ಷಯರೋಗ ನಿರ್ಮೂಲನಾಧಿಕಾರಿ ಡಾ.ಮಹಮ್ಮದ್ ಶಾಕೀರ್, ತಾಲ್ಲೂಕು ಅರೋಗ್ಯಾಧಿಕಾರಿಗಳು, ಸಾರ್ವಜನಿಕ ಆಸ್ಪತ್ರೆ ಮುಖ್ಯ ವೈದ್ಯಾಧಿಕಾರಿಗಳು, ಆಡಳಿತ ವೈದ್ಯಾಧಿಕಾರಿಗಳು ಉಪಸ್ಥಿತರಿದ್ದರು.

ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಜಿಲ್ಲಾ ಮಾನಸಿಕ ಆರೋಗ್ಯ ವಿಭಾಗ, ರಿಮ್ಸ್ ಸಂಯೋಗದೊಂದಿಗೆ ಕಾರ್ಯಕ್ರಮ ಏರ್ಪಡಿಸಲಾಗಿತ್ತು. ಜಿಲ್ಲಾ ಆರೋಗ್ಯ ಶಿಕ್ಷಣಾಧಿಕಾರಿ ಈಶ್ವರ ಹೆಚ್ ದಾಸಪ್ಪನವರ ವಂದಿಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.