ಶನಿವಾರ, 11 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ರಾಯಚೂರು: ಬಿಸಿಯೂಟ ನೌಕರರ ಪ್ರತಿಭಟನೆ

Last Updated 23 ಡಿಸೆಂಬರ್ 2021, 15:16 IST
ಅಕ್ಷರ ಗಾತ್ರ

ರಾಯಚೂರು: ಬಿಸಿಯೂಟ ನೌಕರರಿಗೆ ವೇತನ ಹೆಚ್ಚಳ ಮಾಡಬೇಕು ಹಾಗೂ ವೇತನವನ್ನು ಪ್ರತಿ ತಿಂಗಳು 2ನೇ ತಾರೀಖಿನ ಒಳಗೆ ಪಾವತಿ ಮಾಡಬೇಕು ಎಂದು ದಲಿತ ಸಂಘರ್ಷ ಸಮಿತಿಯ ನೇತೃತ್ವದಲ್ಲಿ ಬಿಸಿಯೂಟ ನೌಕರರ ಕ್ಷೇಮಾಭಿವೃದ್ಧಿ ಸಂಘದ ಪದಾಧಿಕಾರಿಗಳು ಜಿಲ್ಲಾಧಿಕಾರಿ ಕಚೇರಿ ಮುಂದೆ ಗುರುವಾರ ಪ್ರತಿಭಟನೆ ನಡೆಸಿ ಜಿಲ್ಲಾಡಳಿತದ ಮೂಲಕ ಮುಖ್ಯಮಂತ್ರಿಗೆ ಮನವಿ ಸಲ್ಲಿಸಿದರು.

ಜಿಲ್ಲೆಯ ಸರ್ಕಾರಿ ಹಿರಿಯ, ಕಿರಿಯ ಹಾಗೂ ಪ್ರೌಢಶಾಲೆಗಳಲ್ಲಿ ಮುಖ್ಯ ಅಡುಗೆ ಮತ್ತು ಸಹಾಯಕರು ಕೆಲಸ ಮಾಡುತ್ತಿದ್ದು, ಮುಖ್ಯ ಅಡುಗೆಯವರಿಗೆ ₹2700 ಹಾಗೂ ಸಹಾಯಕಿಯರಿಗೆ ₹2600 ವೇತನ ನೀಡಲಾಗುತ್ತಿದೆ. ಬೆಲೆ ಏರಿಕೆ ಹಿನ್ನೆಲೆಯಲ್ಲಿ ಕುಟುಂಬ ನಿರ್ವಹಣೆಗೆ ಸಮಸ್ಯೆಯಾಗಿದೆ.

ಅಡುಗೆ ಮಾಡುವ ಜೊತೆಗೆ ಈಗ ಸರ್ಕಾರ ಪ್ರತಿ ಮಕ್ಕಳಿಗೆ ಮೊಟ್ಟೆಗಳನ್ನು ವಿತರಿಸುವುದು ಸೇರಿದಂತೆ ಇತರೆ ಕೆಲಸದ ಒತ್ತಡ ಹೆಚ್ಚಾಗಿದೆ. ವೇತನವನ್ನು ಪ್ರತಿ ತಿಂಗಳು ಸರಿಯಾಗಿ ಪಾವತಿ ಮಾಡಲಾಗುತ್ತಿಲ್ಲ ಎಂದು ಆರೋಪಿಸಿದರು.

ಅಡುಗೆ ತಯಾರಿಸುವವರಿಗೆ ಹಾಗೂ ಸಹಾಯಕಿಯರಿಗೆ ₹10 ಸಾವಿರಕ್ಕೆ ವೇತನ ಹೆಚ್ಚಳ ಮಾಡಬೇಕು ಹಾಗೂ ಪ್ರತಿ ತಿಂಗಳು 2ನೇ ದಿನಾಂಕದಂದು ವೇತನ ನೀಡಬೇಕು ಎಂದು ಆಗ್ರಹಿಸಿದರು.

ಪ್ರತಿಭಟನೆಯಲ್ಲಿ ಬಿಸಿಯೂಟ ನೌಕರರ ಕ್ಷೇಮಾಭಿವೃದ್ಧಿ ಸಂಘದ ಅಧ್ಯಕ್ಷೆ ಮಹಾಲಕ್ಷ್ಮಿ, ಪದಾಧಿಕಾರಿ ನಾಗವೇಣಿ, ಹುಲಿಗೆಮ್ಮ, ಸರೋಜ, ಮಹಾದೇವಿ, ಈರಮ್ಮ, ಮಹೇಶ್ವರಿ, ಹನುಮಂತ ಸೀಕಲ್, ಸಾಬಣ್ಣ, ಈಶ್ವರ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT