ರಾಯಚೂರು: ಮಧ್ಯಪ್ರಾಚ್ಯದ ಕೆಲವು ದೇಶಗಳಲ್ಲಿ ಪ್ರಚಲಿತದಲ್ಲಿರುವ ಅಸ್ಥಿರ ಪರಿಸ್ಥಿತಿಯಿಂದಾಗಿ ಅಂತರ ರಾಷ್ಟ್ರೀಯ ವಿಮಾನಯಾನ ಸೇವೆಗಳಲ್ಲಿ ವ್ಯತ್ಯಯ ಉಂಟಾಗಿದೆ. ಈ ಹಿನ್ನೆಲೆಯಲ್ಲಿ ರಾಯಚೂರು ಜಿಲ್ಲೆಯ ಸಾರ್ವಜನಿಕರ ಹಿತದೃಷ್ಟಿಯಿಂದ ಜಿಲ್ಲಾಡಳಿತವು ಮಾಹಿತಿಯನ್ನು ಹಂಚಿಕೊಂಡಿದೆ.

ವೈಮಾನಿಕ ನಿರ್ಬಂಧ ಮತ್ತು ಪ್ರಚಲಿತ ಸ್ಥಿತಿ ಇರಾನ್, ಇಸ್ರೇಲ್, ಲೆಬನಾನ್, ಸೌದಿ ಅರೇಬಿಯಾ ಸೇರಿದಂತೆ ಒಟ್ಟು 11 ದೇಶಗಳ ವೈಮಾನಿಕ ಮಾರ್ಗಗಳನ್ನು ಮಾರ್ಚ್ 2ರವರೆಗೆ ಮುಚ್ಚಲಾಗಿದೆ.
ಈ ಅನಿರೀಕ್ಷೀತ ಅಡಚಣೆಯಿಂದಾಗಿ ಹಾಗೂ ಕರ್ನಾಟಕದ ಅನೇಕ ಪ್ರಯಾಣಿಕರು ಯುಎಇ (ದುಬೈ) ಸೇರಿದಂತೆ ವಿವಿಧ ಮಧ್ಯಪ್ರಾಚ್ಯ ರಾಷ್ಟ್ರಗಳಲ್ಲಿ ಸಿಲುಕಿಕೊಂಡಿದ್ದಾರೆ.

ಜಿಲ್ಲಾಡಳಿತದ ಕ್ರಮಗಳು: ಮುಖ್ಯಮಂತ್ರಿ ಹಾಗೂ ಕಂದಾಯ ಸಚಿವರ ನಿರ್ದೇಶನದಂತೆ ರಾಜ್ಯ ಮತ್ತು ಜಿಲ್ಲಾ ತುರ್ತು ಕಾರ್ಯಾಚರಣೆ ಕೇಂದ್ರ 24x7 ಕಾರ್ಯನಿರ್ವಹಿಸುತ್ತಿವೆ. ವಿದೇಶಾಂಗ ವ್ಯವಹಾರಗಳ ಸಚಿವಾಲಯ ಮತ್ತು ಭಾರತೀಯ ರಾಯಭಾರಿ ಕಚೇರಿಗಳು ನೀಡುವ ಸೂಚನೆಗಳನ್ನು ಜಿಲ್ಲಾಡಳಿತವು ನಿರಂತರವಾಗಿ ಗಮನಿಸುತ್ತಿದೆ.

ಜಿಲ್ಲೆಯ ನಿವಾಸಿಗಳು ಅಥವಾ ಅವರ ಸಂಬಂಧಿಕರು ಹೆಚ್ಚಿನ ಮಾಹಿತಿಗಾಗಿ ಮತ್ತು ಸಹಾಯಕ್ಕಾಗಿ ಸಹಾಯವಾಣಿಗೆ ಸಂಪರ್ಕಿಸಬಹುದು.

ರಾಯಚೂರು ಜಿಲ್ಲಾ ತುರ್ತು ಕಾರ್ಯಾಚರಣೆ ಕೇಂದ್ರ 08532-226383 ಅಥವಾ
ರಾಜ್ಯ ತುರ್ತು ಕಾರ್ಯಾಚರಣೆ ಕೇಂದ್ರ 080-22340676, 080-22253707, ಟೋಲ್ ಫ್ರೀ ಸಂಖ್ಯೆ: 1070ಗೆ ಕರೆ ಮಾಡಿ ಮಾಹಿತಿ ಹಾಗೂ ಸಹಾಯ ಪಡೆಯಬಹುದು.

ಸಾರ್ವಜನಿಕರಿಗೆ ಪ್ರಮುಖ ಸೂಚನೆಗಳು: ಮಧ್ಯಪ್ರಾಚ್ಯ ದೇಶಗಳಲ್ಲಿರುವ ಕರ್ನಾಟಕದ ನಿವಾಸಿಗಳು ಅಲ್ಲಿನ ಸ್ಥಳೀಯ ಸರ್ಕಾರಗಳು ನೀಡುವ ಸುರಕ್ಷತಾ ಮಾರ್ಗಸೂಚಿಗಳನ್ನು ಕಡ್ಡಾಯವಾಗಿ ಪಾಲಿಸಬೇಕು.

ಸಂಕಷ್ಟದಲ್ಲಿರುವವರು ಭಾರತೀಯ ರಾಯಭಾರಿ ಕಚೇರಿಯ ಸಹಾಯವಾಣಿಗೆ ಕರೆ ಮಾಡಬೇಕು ಅಥವಾ ‘ಸಾರಥಿ ಸಹಾಯತಾ’ (Sarthi Sahayata) ಪೋರ್ಟಲ್ನಲ್ಲಿ ನೋಂದಾಯಿಸಿಕೊಳ್ಳಬೇಕು.
ವೀಸಾ ಸಂಬಂಧಿತ ಸಮಸ್ಯೆಗಳಿದ್ದಲ್ಲಿ ಹತ್ತಿರದ ಎಫ್.ಆರ್.ಆರ್.ಒ (FRRO) ಕಚೇರಿಯನ್ನು ಸಂಪರ್ಕಿಸಬೇಕೆಂದು ಜಿಲ್ಲಾಧಿಕಾರಿ ನಿತೀಶ್ ಕೆ. ತಿಳಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.