ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ರಾಯಚೂರು | ಬೆಂಗಳೂರಿನತ್ತ ಮತ್ತೆ ಕಾರ್ಮಿಕರ ಪಯಣ

Last Updated 20 ಮೇ 2020, 5:39 IST
ಅಕ್ಷರ ಗಾತ್ರ

ರಾಯಚೂರು: ಲಾಕ್‌ಡೌನ್ ಆರಂಭದಲ್ಲಿ ಸ್ವ ಗ್ರಾಮಕ್ಕೆ ಬಂದಿದ್ದ ಕಾರ್ಮಿಕರು ಹಾಗೂ ವಿವಿಧ ಕಂಪೆನಿಗಳಲ್ಲಿ ಕೆಲಸ ಮಾಡುತ್ತಿದ್ದ ಉದ್ಯೋಗಿಗಳು ಬೆಂಗಳೂರಿನತ್ತ ಮರಳಿ ಪ್ರಯಾಣ ಆರಂಭಿಸಿದ್ದಾರೆ. ರಾಯಚೂರು ಕೇಂದ್ರ ಬಸ್ ನಿಲ್ದಾಣದಿಂದ ಬುಧವಾರ ಬೆಳಿಗ್ಗೆ 7 ಗಂಟೆಗೆ ಮೂರು ಬಸ್‌ಗಳು ಬೆಂಗಳೂರಿಗೆ ತೆರಳಿದವು.

ಬೆಂಗಳೂರಿಗೆ ತೆರಳಲು ಬಸ್ ನಿಲ್ದಾಣದತ್ತ ಬರುವವರ ಸಂಖ್ಯೆ ಹೆಚ್ಚುತ್ತಿದ್ದು, ಮತ್ತೆ ಮೂರು ಬಸ್‌ಗಳನ್ನು ಬಿಡಲಾಗುವುದು ಎಂದು ನಿಲ್ದಾಣದ ಅಧಿಕಾರಿಗಳು ತಿಳಿಸಿದರು. ಎಲ್ಲ ಪ್ರಯಾಣಿಕರು ಮಾಸ್ಕ್ ಧರಿಸುವುದು ಕಡ್ಡಾಯ ಹಾಗೂ ಸ್ಯಾನಿಟೈಜರ್ ಬಳಸುವಂತೆ ಸೂಚಿಸಲಾಗುತ್ತಿದೆ.

ಲಾಕ್‌ಡೌನ್ ಆರಂಭದಲ್ಲಿ ಊಟ, ಉಪಹಾರಕ್ಕೆ ಪರದಾಡುವ ದುಃಸ್ಥಿತಿ ಎದುರಿಸಲಾಗದೆ ಬೆಂಗಳೂರಿನಿಂದ ಸಾವಿರಾರು ಜನರು ಜಿಲ್ಲೆಗೆ ವಾಪಸಾಗಿದ್ದಾರೆ. ಈಗ ಲಾಕ್‌ಡೌನ್ ಸಡಿಲಿಕೆ ಮಾಡಿ ಕೈಗಾರಿಕೆಗಳು ಹಾಗೂ ಇತರೆಲ್ಲ ಕಾಮಗಾರಿ ಆರಂಭಿಸಲು ಅನುಮತಿ ನೀಡಿದ್ದರಿಂದ, ಕೆಲಸಕ್ಕೆ ಹಾಜರಾಗಲು ಕಾರ್ಮಿಕರನ್ನು ಆಹ್ವಾನಿಸಲಾಗುತ್ತಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT