ರಾಯಚೂರು: ಕೇಂದ್ರ ಸರ್ಕಾರದ ಕೈಗೊಂಬೆಯಾಗಿ ಕಾರ್ಯನಿರ್ವಹಿಸುತ್ತಿರುವ ಕರ್ನಾಟಕ ರಾಜ್ಯಪಾಲರನ್ನು ರಾಷ್ಟ್ರಪತಿ ವಜಾಗೊಳಿಸಬೇಕು ಎಂದು ಒತ್ತಾಯಿಸಿ ಕುರುಬ ಸಮಾಜದ ವಿವಿಧ ಸಂಘಟನೆಗಳು ನಗರದಲ್ಲಿ ಸೋಮವಾರ ಪ್ರತಿಭಟನೆ ನಡೆಸಿದವು.
ನಗರದ ಡಾ.ಬಿ.ಆರ್. ಅಂಬೇಡ್ಕರ್ ವೃತ್ತದಲ್ಲಿ ಕುರುಬ ಸಮಾಜ ಜಿಲ್ಲಾ, ನಗರ ಘಟಕದ ಹಾಗೂ ಯುವ ಕುರುಬರ ಸಂಘ ಮತ್ತು ಸಂಗೊಳ್ಳಿ ರಾಯಣ್ಣ ಸಂಘದ ಮುಖಂಡರು ಮುಖ್ಯಮಂತ್ರಿ ಸಿದ್ದರಾಮಯ್ಯನವರ ಬ್ಯಾನರ್‌ಗೆ ಹಾಲಿನ ಅಭಿಷೇಕ ಮಾಡಿ ರಾಜ್ಯಪಾಲರ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.
‘ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಪ್ರಾಸಿಕ್ಯೂಷನ್‌ಗೆ ಅನುಮತಿ ನೀಡುವ ಮೂಲಕ ರಾಜ್ಯಪಾಲರು ಸಂವಿಧಾನ ಬಾಹಿರವಾಗಿ ನಡೆದುಕೊಳ್ಳುತ್ತಿದ್ದಾರೆ’ ಎಂದು ದೂರಿದರು.
ಪ್ರತಿಭಟನೆಯಲ್ಲಿ ಕುರುಬ ಸಮಾಜದ ಮುಖಂಡರಾದ ಬಸವಂತಪ್ಪ ಕುರಿ, ಬಸವರಾಜ, ರಮೇಶ ಬಿ, ನೀಲಕಂಠ ಮೊದಲಾದವರು ಪಾಲ್ಗೊಂಡಿದ್ದರು.