ಭಾನುವಾರ, 14 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಮಾನ್ವಿ | ಶಂಕುಸ್ಥಾಪನೆ ಕಾರ್ಯಕ್ರಮಕ್ಕೆ ಸಚಿವ ಗೈರು: ಆಕ್ಷೇಪ

Published 19 ಮಾರ್ಚ್ 2024, 14:22 IST
Last Updated 19 ಮಾರ್ಚ್ 2024, 14:22 IST
ಅಕ್ಷರ ಗಾತ್ರ

ಮಾನ್ವಿ: ’ವಾಲ್ಮೀಕಿ ಭವನದ‌ ನಿರ್ಮಾಣ ಕಾಮಗಾರಿಯ ಶಂಕುಸ್ಥಾಪನೆ ಕಾರ್ಯಕ್ರಮಕ್ಕೆ ಸಣ್ಣ ನೀರಾವರಿ ಸಚಿವ ಎನ್.ಎಸ್.ಬೋಸರಾಜು ಗೈರಾಗಿರುವುದು ಖಂಡನೀಯ' ಎಂದು ಮಹರ್ಷಿ ವಾಲ್ಮೀಕಿ ನಾಯಕ ಸಂಘದ ತಾಲ್ಲೂಕು ಅಧ್ಯಕ್ಷ ಮೌನೇಶ ನಾಯಕ ಮ್ಯಾಕಲ್ ಹೇಳಿದರು.

ಮಂಗಳವಾರ ಪಟ್ಟಣದಲ್ಲಿ ಸುದ್ದಿ ಗೋಷ್ಠಿಯಲ್ಲಿ ಮಾತನಾಡಿದ ಅವರು, ' ಮಾರ್ಚ್ 16ರಂದು ಮಾನ್ವಿ ಪಟ್ಟಣದಲ್ಲಿ ಹಮ್ಮಿಕೊಳ್ಳಲಾಗಿದ್ದ ಜೋಳ ಖರೀದಿ ಕೇಂದ್ರ ಹಾಗೂ ಸಾರ್ವಜನಿಕ ಆಸ್ಪತ್ರೆಯ ಹೆಚ್ಚುವರಿ ವಾರ್ಡ್ಗಳ ಉದ್ಘಾಟನಾ ಕಾರ್ಯಕ್ರಮಗಳಲ್ಲಿ ಸಚಿವ ಬೋಸರಾಜು ಭಾಗವಹಿಸಿದ್ದರು. ಆದರೆ,ಅದೇ ದಿನ ನಡೆದ ವಾಲ್ಮೀಕಿ ಭವನದ‌ ನಿರ್ಮಾಣ ಕಾಮಗಾರಿಯ ಶಂಕುಸ್ಥಾಪನೆ ಕಾರ್ಯಕ್ರಮಕ್ಕೆ ಹಾಜರಾಗದೇ ಸಮುದಾಯಕ್ಕೆ ಅಪಮಾನ ಮಾಡಿದ್ದಾರೆ' ಎಂದು ದೂರಿದರು.

ಮುಖಂಡರಾದ ಬಸನಗೌಡ ಉಟಕನೂರು, ಚಿದಾನಂದ ಸ್ವಾಮಿ ನಾಯಕ, ವಿಜಯ ನಾಯಕ, ಶಿವಾರ್ಜುನ ನಾಯಕ, ದೇವರಾಜ ನಾಯಕ, ಅಯ್ಯಪ್ಪ ನಾಯಕ, ನಾಗರಾಜ ನಾಯಕ, ಬಸವರಾಜ ನಾಯಕ ಉಪಸ್ಥಿತರಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT