ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಶೀಘ್ರ ರಿಮ್ಸ್ ಸಮಸ್ಯೆಗಳಿಗೆ ಪರಿಹಾರ: ಸಚಿವ ಹಾಲಪ್ಪ ಆಚಾರ್‌

Last Updated 27 ಸೆಪ್ಟೆಂಬರ್ 2021, 16:10 IST
ಅಕ್ಷರ ಗಾತ್ರ

ರಾಯಚೂರು: ಜಿಲ್ಲೆಯಲ್ಲಿ ಡೆಂಗಿ, ಚಿಕನ್ ಗುನ್ಯಾ ನಿಯಂತ್ರಣಕ್ಕೆ ರಿಮ್ಸ್ ಹಾಗೂ ಓಪೆಕ್ ಆಸ್ಪತ್ರೆಗಳಲ್ಲಿ ಮಕ್ಕಳ ತುರ್ತು ನಿಗಾ ಘಟಕ ಆರಂಭ ಮಾಡಲಾಗಿದೆ. ಹೆಚ್ಚುವರಿಯಾಗಿ ವೈದ್ಯರು ಮತ್ತು ಸಿಬ್ಬಂದಿ ನೇಮಕಾತಿ ಸಮಸ್ಯೆಗೆ ಶೀಘ್ರದಲ್ಲೇ ವೈದ್ಯಕೀಯ ಸಚಿವರೊಂದಿಗೆ ಸೆಭೆ ನಡೆಸಿ ನೇಮಕಾತಿ ಕ್ರಮ ಕೈಗೊಳ್ಳಲಾಗುತ್ತದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಹಾಲಪ್ಪ ಆಚಾರ್‌ ಹೇಳಿದರು.

ರಿಮ್ಸ್ ಆಸ್ಪತ್ರೆಯ ಮೂರನೆಯ ಮಹಡಿಯಲ್ಲಿ ಶಿಲ್ಪಾ ಫೌಂಡೇಶನ್‌ ನೆರವಿನಿಂದ ನಿರ್ಮಿಸಿರುವ ಮಕ್ಕಳ ತುರ್ತು ಚಿಕಿತ್ಸಾ ಘಟಕ ಸೋಮವಾರ ಉದ್ಘಾಟಿಸಿ ಮಾತನಾಡಿದರು.

ಜಿಲ್ಲೆಯಲ್ಲಿ ಕೋವಿಡ್ ನಿಯಂತ್ರಣದಲ್ಲಿದ್ದು, ಡೆಂಗಿ ಮತ್ತು ಚಿಕನ್ ಗುನ್ಯಾ ರೋಗ ನಿಯಂತ್ರಣಕ್ಕೆ ಬೇಕಾದ ಚಿಕಿತ್ಸೆಗೆ ಹೆಚ್ಚುವರಿ 120 ಹಾಸಿಗೆಗಳ ಘಟಕ ನಿರ್ಮಾಣ ಮಾಡಲಾಗಿದೆ. ಸರ್ಕಾರದೊಂದಿಗೆ ಶಿಲ್ಪಾ ಫೌಂಡೇಶನ್ ಕೈಜೋಡಿಸಿ ಉತ್ತಮ ಮಕ್ಕಳ ಚಿಕಿತ್ಸಾ ಘಟಕ ಆರಂಭ ಮಾಡಲಾಗಿದೆ. ಜಿಲ್ಲೆಯ ಆರೋಗ್ಯ ಕ್ಷೇತ್ರದ ಸುಧಾರಣೆಗೆ ಬೇಕಾದ ಕ್ರಮ ಕೈಗೊಳ್ಳಲಾಗಿದೆ ಎಂದರು.

ಸಂಸದ ರಾಜಾ ಅಮರೇಶ್ವರ ನಾಯಕ, ಶಾಸಕರಾದ ಡಾ.ಶಿವರಾಜ ಪಾಟೀಲ, ಬಸನಗೌಡ ದದ್ದಲ್, ಜಿಲ್ಲಾಧಿಕಾರಿ ಡಾ. ಬಿ.ಸಿ ಸತೀಶ್, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಣಾಧಿಕಾರಿ ಶೇಖ್ ತನ್ವೀರ್ ಆಸೀಫ್, ಹೆಚ್ಚುವರಿ ಜಿಲ್ಲಾಧಿಕಾರಿ ಕೆ.ಆರ್. ದುರುಗೇಶ್, ಜಿಲ್ಲಾ ಆರೋಗ್ಯಾಧಿಕಾರಿ ಡಾ. ಕೆ.ನಾಗರಾಜ್, ರಿಮ್ಸ್ ಆಸ್ಪತ್ರೆಯ ನಿರ್ದೇಶಕ ಡಾ. ಬಸವರಾಜ ಪೀರಾಪೂರ, ತಹಶೀಲ್ದಾರ್ ಡಾ. ಹಂಪಣ್ಣ ಸಜ್ಜನ್ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT