ಸೋಮವಾರ, ಮೇ 10, 2021
19 °C

ಅಧಿಕಾರಿಗಳೊಂದಿಗೆ ಡಿಸಿಎಂ ಲಕ್ಷ್ಮಣ‌‌ ಸವದಿ ಆನ್‌ಲೈನ್ ಸಭೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

DH Photo

ರಾಯಚೂರು: ಉಪ ಮುಖ್ಯಮಂತ್ರಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಲಕ್ಷ್ಮಣ ಸವದಿ ಅವರು ಬೆಂಗಳೂರಿನಿಂದ ಆನ್‌ಲೈನ್ ಮೂಲಕ ಜಿಲ್ಲಾಡಳಿತ ಮತ್ತು ಜಿಲ್ಲೆಯ ಜನಪ್ರತಿನಿಧಿಗಳೊಂದಿಗೆ ಶುಕ್ರವಾರ ಸಭೆ ಆರಂಭಿಸಿದ್ದಾರೆ.

ಜಿಲ್ಲೆಯಲ್ಲಿ ಕೋವಿಡ್ ನಿಯಂತ್ರಣಕ್ಕೆ ಸಂಬಂಧಿಸಿದಂತೆ ಕೈಗೊಳ್ಳಲಾದ ಕ್ರಮಗಳ ಕುರಿತು ಮಾಹಿತಿ ಪಡೆದು, ವಿಡಿಯೊ ಸಂವಾದ ಮಾಡುತ್ತಿದ್ದಾರೆ.

ಜಿಲ್ಲಾಧಿಕಾರಿ ಕಚೇರಿಯ ವಿಸಿ ಹಾಲ್‌ನಲ್ಲಿ ಜಿಲ್ಲಾಧಿಕಾರಿ ಆರ್. ವೆಂಕಟೇಶ ಕುಮಾರ್ ಅವರು ಡಿಸಿಎಂ ಅವರಿಗೆ ಕೋವಿಡ್ ನಿಯಂತ್ರಣಕ್ಕೆ ಕೈಗೊಳ್ಳಲಾದ ಕ್ರಮಗಳ ಬಗ್ಗೆ ವಿವರ ಮಾಹಿತಿ ನೀಡಿದರು.

ಜಿಲ್ಲಾ ಪಂಚಾಯಿತಿ ಸಿಇಒ ಶೇಖ್ ತನ್ವೀರ್ ಆಸೀಫ್, ಎಸ್ಪಿ ಪ್ರಕಾಶ್ ನಿಕ್ಕಂ, ಎಡಿಸಿ ದುರುಗೇಶ್, ಡಿಎಚ್ಒ ಡಾ. ರಾಮಕೃಷ್ಣ, ತಹಶಿಲ್ದಾರ್, ಸಂಬಂಧಿಸಿದ ಇಲಾಖೆಗಳ ಮುಖ್ಯಸ್ಥರು ಇದ್ದರು.

ವಿಡಿಯೊ ಸಂವಾದದಲ್ಲಿ ರಾಯಚೂರು ಶಾಸಕರಾದ ಡಾ. ಶಿವರಾಜ ಪಾಟೀಲ್, ರಾಜಾ ವೆಂಕಟಪ್ಪ ನಾಯಕ, ಸಂಸದರಾದ ರಾಜಾ ಅಮರೇಶ್ವರ ನಾಯಕ, ಕರಡಿ ಸಂಗಣ್ಣ, ಜಿಲ್ಲೆ, ಎಲ್ಲಾ ತಾಲ್ಲೂಕುಗಳ ಅಧಿಕಾರಿಗಳು ಭಾಗವಹಿಸಿದ್ದಾರೆ.

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು