ರಾಯಚೂರು: ರಾಜಕೀಯ ಲಾಭಕ್ಕಾಗಿ ವಿಡಿಯೊದಲ್ಲಿಯ ಧ್ವನಿ ತಿದ್ದಿ ಸಾಮಾಜಿಕ ಜಾಲ ತಾಣಗಳಲ್ಲಿ ಹರಿಬಿಟ್ಟ ಕಿಡಿಗೇಡಿಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು ಎಂದು ಕಾಂಗ್ರೆಸ್ ಮುಖಂಡ ರವಿ ಬೋಸರಾಜು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗೆ ದೂರು ನೀಡಿದ್ದಾರೆ.

ಬಿಜೆಪಿಯಲ್ಲಿರುವ ಕಿಡಿಗೇಡಿಗಳು ರಾಜಕೀಯ ಲಾಭಕ್ಕಾಗಿ ಕಾಂಗ್ರೆಸ್ ಪ್ರಚಾರದ ವಿಡಿಯೊ ತಿರುಚಿ ಪಾಕಿಸ್ತಾನ ಪರ ಘೋಷಣೆ ಕೂಗಿದಂತೆ ಬಿಂಬಿಸಿದ್ದಾರೆ. ದೇಶ ವಿರೋಧಿ ಚಟುವಟಿಕೆಯಲ್ಲಿ ತೊಡಗಿದ ಕಿಡಿಗೇಡಿಗಳನ್ನು ಪತ್ತೆ ಮಾಡಿ ಗಲ್ಲಿಗೇರಿಸಬೇಕು ಎಂದು ಮನವಿ ಮಾಡಿದ್ದಾರೆ.

ಕಾಂಗ್ರೆಸ್ ಪ್ರಚಾರದ ಮೂಲ ವಿಡಿಯೊ ಹಾಗೂ ತಿದ್ದಿದ ವಿಡಿಯೊಗಳನ್ನು ಪರಿಶೀಲಿಸಿ ತನಿಖೆ ನಡೆಸಿ ತಪ್ಪಿತಸ್ಥರ ವಿರುದ್ಧ ಕ್ರಮ ಕೈಗೊಳ್ಳುವಂತೆ ಪೊಲೀಸರಿಗೆ ದೂರು ನೀಡಲಾಗಿದೆ ಎಂದು ತಿಳಿಸಿದ್ದಾರೆ.

ನಗರದಲ್ಲಿ ಮಂಗಳವಾರ ಕಾಂಗ್ರೆಸ್ ಅಭ್ಯರ್ಥಿಯ ಪರ ಪ್ರಚಾರದ ಸಂದರ್ಭದಲ್ಲಿ ಕಾರ್ಯಕರ್ತರು ರವಿ ಬೋಸರಾಜು ಅವರನ್ನು ಹೆಗಲ ಮೇಲೆ ಎತ್ತಿಕೊಂಡು ರವಿ ಸಾಬ್ ಜಿಂದಾಬಾದ್ ಎಂದು ಘೋಷಣೆ ಕೂಗುತ್ತ ಮೆರವಣಿಗೆಯಲ್ಲಿ ಸಾಗಿದ್ದರು. ರಾತ್ರಿ ವಿಡಿಯೊ ತಿರುಚಿ ‘ಪಾಕಿಸ್ತಾನ್ ಜಿಂದಾಬಾದ್’ ಎಂದು ಸೇರಿಸಲಾಗಿತ್ತು. ವಾರ್ಡ್ನ ಜನ ಮೊದಲೇ ವಿಡಿಯೊ ವೀಕ್ಷಿಸಿದ್ದರಿಂದ ಸಮಸ್ಯೆ ಆಗಲಿಲ್ಲ.

‘ವಿಡಿಯೊ ತಿರುಚಿರುವುದು ಮೇಲ್ನೋಟಕ್ಕೆ ಕಂಡು ಬಂದಿದೆ. ಪರೀಕ್ಷೆಗೆ ಪ್ರಯೋಗಾಲಯಕ್ಕೆ ಕಳಿಸಿಕೊಡಲಾಗಿದೆ’ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ನಿಖಿಲ್ ಬಿ.ತಿಳಿಸಿದ್ದಾರೆ.

ದೇವರ ಕಾಲೊನಿಯಲ್ಲಿ ಮಂಗಳವಾರ ಕಾಂಗ್ರೆಸ್ ಹಾಗೂ ಬಿಜೆಪಿ ಕಾರ್ಯಕರ್ತರ ಮಧ್ಯೆ ವಾಗ್ವಾದ ನಡೆದು ತ್ವೇಷಮಯ ವಾತಾವರಣ ನಿರ್ಮಾಣವಾಗಿತ್ತು. ಪೊಲೀಸರು ಲಾಠಿ ಬೀಸಿ ಜನರನ್ನು ಚದುರಿಸಿದ್ದರು. ಈ ಘಟನೆ ನಂತರ ಅನುಮತಿ ಪಡೆಯದೇ ಪ್ರಚಾರ ನಡೆಸಿದಕ್ಕಾಗಿ ಎರಡೂ ಪಕ್ಷಗಳ ಮುಖಂಡರ ವಿರುದ್ಧ ಪಶ್ಚಿಮ ಠಾಣೆಯ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.