ಗುರುವಾರ, 25 ಜುಲೈ 2024
×
ADVERTISEMENT
ಈ ಕ್ಷಣ :
ADVERTISEMENT

ಮಸ್ಕಿ | ಮಕ್ಕಳಿಗೆ ಪಾಠ ಮಾಡಿದ ಶಾಸಕ ಬಸನಗೌಡ ತುರವಿಹಾಳ

Published 9 ಜುಲೈ 2024, 14:17 IST
Last Updated 9 ಜುಲೈ 2024, 14:17 IST
ಅಕ್ಷರ ಗಾತ್ರ

ಮಸ್ಕಿ: ತಾಲ್ಲೂಕಿನ ಹಾಲಾಪುರ ವ್ಯಾಪ್ತಿಯ ಶಾಲೆಗಳಿಗೆ ಸೋಮವಾರ ಭೇಟಿ ನೀಡಿದ ಶಾಸಕ ಆರ್.ಬಸನಗೌಡ ತುರುವಿಹಾಳ ಅವರು ಅರ್ಧಗಂಟೆ ಮಕ್ಕಳಿಗೆ ಪಾಠ ಮಾಡಿ ಗಮನ ಸೆಳೆದಿದ್ದಾರೆ.

ಕನ್ನಡ ಅಕ್ಷರ ಮಾಲೆ, ಮಗ್ಗಿ ಹಾಗೂ ಇತರ ಪ್ರಶ್ನೆಗಳನ್ನು ಕೇಳಿ ಮಕ್ಕಳಿಂದ ಉತ್ತರ ಪಡೆದರು. ನಂತರ ವಿದ್ಯಾರ್ಥಿಗಳ ಜೊತೆ ಚರ್ಚೆ ನಡೆಸಿದ ಶಾಸಕರು ಬಿಸಿಯೂಟ, ಸಮವಸ್ತ್ರ ಹಾಗೂ ಶಿಕ್ಷಕರು ಶಾಲೆಗೆ ಸರಿಯಾಗಿ ಬರುತ್ತಾರೆಯೇ?. ಪಾಠ ಸರಿಯಾಗಿ ಮಾಡುತ್ತಾರೆಯೇ ಎಂದು ಪ್ರಶ್ನಿಸಿದ್ದಾರೆ.

ಎಸ್‌ಡಿಎಂಸಿ ಪದಾಧಿಕಾರಿಗಳು, ಶಿಕ್ಷಕರೊಂದಿಗೆ ಸಭೆ ನಡೆಸಿ ಶಾಲೆಗಳ ಅಭಿವೃದ್ಧಿಗೆ ಕೈಗೊಳ್ಳಬೇಕಾದ ಕ್ರಮಗಳ ಕುರಿತು ಚರ್ಚಿಸಿದರು. ಮಲ್ಲಿಕಾರ್ಜುನ ಪಾಟೀಲ ಯದ್ದಲದಿನ್ನಿ ಹಾಗೂ ಇತರರು ಹಾಜರಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT