ಶನಿವಾರ, 27 ಜುಲೈ 2024
×
ADVERTISEMENT
ಈ ಕ್ಷಣ :
ADVERTISEMENT

ಡಿ.30ರಂದು ಮುಖ್ಯಮಂತ್ರಿ, ಉಪಮುಖ್ಯಮಂತ್ರಿ ಸಿಂಧನೂರಿಗೆ ಭೇಟಿ: ಶಾಸಕ ಹಂಪನಗೌಡ

Published 26 ಡಿಸೆಂಬರ್ 2023, 16:06 IST
Last Updated 26 ಡಿಸೆಂಬರ್ 2023, 16:06 IST
ಅಕ್ಷರ ಗಾತ್ರ

ಸಿಂಧನೂರು: ಡಿ.30ರಂದು ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ, ಜಿಲ್ಲಾ ಉಸ್ತುವಾರಿ ಸಚಿವ ಶರಣಪ್ರಕಾಶ ಪಾಟೀಲ ಸೇರಿದಂತೆ 6 ಸಚಿವರು ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಶಂಕುಸ್ಥಾಪನೆ ಮತ್ತು ಉದ್ಘಾಟನೆ ನೆರವೇರಿಸಲು ಸಿಂಧನೂರು ಕ್ಷೇತ್ರಕ್ಕೆ ಬರಲಿದ್ದು, ಆ ಸಮಯದಲ್ಲಿ ಈ ಭಾಗದ ಬೇಡಿಕೆ ಈಡೇರಿಕೆಗೆ ಮನವಿ ಪತ್ರ ಸಲ್ಲಿಸುವುದಾಗಿ ಶಾಸಕ ಹಂಪನಗೌಡ ಬಾದರ್ಲಿ ತಿಳಿಸಿದರು.

ಮಂಗಳವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದರು. ಈ ಹಿಂದೆ ಶಿಕ್ಷಣ ಸಂಸ್ಥೆಗಳು ಅಗ್ನಿ ಸುರಕ್ಷತಾ ಪ್ರಮಾಣ ಪತ್ರವನ್ನು ಬೆಂಗಳೂರಿನಿಂದ ತರಬೇಕಾಗಿತ್ತು. ಖಾಸಗಿ ಶಿಕ್ಷಣ ಸಂಸ್ಥೆಗಳ ಆಡಳಿತ ಮಂಡಳಿಗಳ ಒಕ್ಕೂಟದ ಮನವಿಯನ್ನು ಮನ್ನಿಸಿ ರಾಜ್ಯ ಸರ್ಕಾರ ಈಗ ಜಿಲ್ಲಾ ಕೇಂದ್ರದಿಂದ ಅಗ್ನಿ ಸುರಕ್ಷತಾ ಪ್ರಮಾಣ ಪತ್ರ ಪಡೆಯಲು ಅವಕಾಶ ಮಾಡಿಕೊಟ್ಟಿದೆ. ತಾಲ್ಲೂಕು ಮಟ್ಟದ ಅಗ್ನಿಶಾಮಕ ದಳದ ಅಧಿಕಾರಿಗಳು ಕೊಡುವ ಅಗ್ನಿ ಸುರಕ್ಷತಾ ಪ್ರಮಾಣ ಪತ್ರ ಮಾನ್ಯ ಮಾಡಬೇಕು. ಸರ್ಕಾರಿ ಶಿಕ್ಷಣ ಸಂಸ್ಥೆಗಳು ಕಟ್ಟಡ ಕಟ್ಟಬೇಕಾದರೆ ಅನ್ವಯಿಸುವ ನಿಯಮಗಳನ್ನು ಖಾಸಗಿ ಶಿಕ್ಷಣ ಸಂಸ್ಥೆಗಳಿಗೂ ಅನ್ವಯಿಸುವಂತೆ ವಿನಂತಿಸಲಾಗುವುದು ಎಂದು ತಿಳಿಸಿದರು.

’ಕಲ್ಯಾಣ ಕರ್ನಾಟಕ ಅಭಿವೃದ್ಧಿ ಮಂಡಳಿಯಿಂದ ಖಾಸಗಿ ಶಿಕ್ಷಣ ಸಂಸ್ಥೆಗಳ ಮೂಲ ಸೌಕರ್ಯಗಳ ಅಭಿವೃದ್ಧಿಗೆ ಆರ್ಥಿಕ ನೆರವು ನೀಡುವಂತೆ ಕೋರಲಾಗುವುದು. ಆದ್ದರಿಂದ ಖಾಸಗಿ ಶಿಕ್ಷಣ ಸಂಸ್ಥೆಗಳ ಆಡಳಿತ ಮಂಡಳಿಗಳ ಸದಸ್ಯರು ಬೋಧಕ ಮತ್ತು ಬೋಧಕೇತರ ಸಿಬ್ಬಂದಿ ಡಿ.30ರಂದು ನಡೆಯುವ ಕಾರ್ಯಕ್ರಮದಲ್ಲಿ ಭಾಗವಹಿಸುವಂತೆ’ ಖಾಸಗಿ ಶಾಲಾ ಕಾಲೇಜು ಆಡಳಿತ ಮಂಡಳಿಗಳ ಒಕ್ಕೂಟದ ಎಂ.ದೊಡ್ಡಬಸವರಾಜ, ತಾಲ್ಲೂಕು ಘಟಕದ ಅಧ್ಯಕ್ಷ ವೈ.ನರೇಂದ್ರನಾಥ ಮನವಿ ಮಾಡಿದರು.

ವಿವಿಧ ಶಿಕ್ಷಣ ಸಂಸ್ಥೆಗಳ ಮುಖ್ಯಸ್ಥರಾದ ಸರಸ್ವತಿ ಪಾಟೀಲ, ಸತ್ಯನಾರಾಯಣ ಶೆಟ್ಟಿ, ವೆಂಕಟೇಶ, ಅನಿಲಕುಮಾರ, ವೀರೇಶ ಅಗ್ನಿ, ಎನ್.ಅಮರೇಶ ಇದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT