ಶುಕ್ರವಾರ, ಆಗಸ್ಟ್ 14, 2020
27 °C

ವಾಸವಿ ವೃತ್ತ ನಿರ್ಮಾಣಕ್ಕೆ ಭೂಮಿಪೂಜೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ರಾಯಚೂರು: ಇಲ್ಲಿನ ವಾಸವಿ ನಗರ ಮಾರ್ಗದಲ್ಲಿ ವಾಸವಿ ವೃತ್ತ ನಿರ್ಮಾಣಕ್ಕೆ ಶಾಸಕ ಡಾ.ಶಿವರಾಜ ಪಾಟೀಲ ಗುರುವಾರ ಭೂಮಿಪೂಜೆ ನೆರವೇರಿಸಿದರು.

ಆನಂತರ ಮಾತನಾಡಿದ ಅವರು, ವೃತ್ತ ನಿರ್ಮಾಣ ಮಾಡಬೇಕು ಎನ್ನುವುದು ಆರ್ಯವೈಶ್ಯ ಸಮಾಜದ ಬಹುದಿನಗಳ ಬೇಡಿಕೆಯಾಗಿತ್ತು. ₹23 ಲಕ್ಷ ವೆಚ್ಚದಲ್ಲಿ ವೃತ್ತ ನಿರ್ಮಾಣವಾಗಲಿದೆ. ವಿನ್ಯಾಸದಲ್ಲಿ ತೋರಿಸಿದ ರೀತಿಯಲ್ಲಿಯೇ ಕಾಮಗಾರಿ ಪೂರ್ಣಗೊಳಿಸಬೇಕು ಎಂದು ಗುತ್ತಿಗೆದಾರರಿಗೆ ತಿಳಿಸಿದರು.

ಮಾದರಿ ವೃತ್ತ ನಿರ್ಮಾಣವಾಗಬೇಕು. ಅನುದಾನ ಅಗತ್ಯಬಿದ್ದರೆ ಮತ್ತೆ ₹10 ಲಕ್ಷ ಒದಗಿಸಲಾಗುವುದು. ವಾಸವಿ ನಗರ ಮಾರ್ಗದ ರಸ್ತೆಗಳ ನಿರ್ಮಾಣಕ್ಕೂ ಒತ್ತು ನೀಡಲಾಗುವುದು ಎಂದರು.

ಸಂಸದ ರಾಜಾ ಅಮರೇಶ್ವರ ನಾಯಕ, ರಾಜ್ಯಸಭಾ ಸದಸ್ಯ ಅಶೋಕ ಗಸ್ತಿ, ಸೇಲ್‌ ನಿರ್ದೇಶಕ ಎನ್‌.ಶಂಕ್ರಪ್ಪ, ಜಿಲ್ಲಾ ಬಿಜೆಪಿ ಅಧ್ಯಕ್ಷ ರಮಾನಂದ ಯಾದವ್‌, ಆರ್‌ಡಿಎ ಅಧ್ಯಕ್ಷ ವೈ.ಗೋಪಾಲರೆಡ್ಡಿ, ಜಿಲ್ಲಾ ವಕ್ಫ್‌ ಬೋರ್ಡ್‌ ಅಧ್ಯಕ್ಷ ಮುಕ್ತಿಯಾರ್‌, ನಗರಸಭೆ ಸದಸ್ಯ ಇ.ಶಶಿರಾಜ, ನಗರ ಬಿಜೆಪಿ ಅಧ್ಯಕ್ಷ ಬಿ.ಗೋವಿಂದ ಮುಖಂಡರಾದ ಎ.ಪಾಪಾರೆಡ್ಡಿ, ರವೀಂದ್ರ ಜಲ್ದಾರ್‌, ಯು.ದೊಡ್ಡಮಲ್ಲೇಶಪ್ಪ. ಎನ್‌.ಶ್ರೀನಿವಾಸರೆಡ್ಡಿ, ಆರ್ಯವೈಶ್ಯ ಸಮಾಜದ ಮುಖಂಡರಾದ ಕೊಂಡಾ ಕೃಷ್ಣಮೂರ್ತಿ, ಕುಂಟ್ನಾಳ ವೆಂಕಟೇಶ, ಸಾವಿತ್ರಿ ಪುರುಷೋತ್ತಮ ಇದ್ದರು.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಈ ವಿಭಾಗದಿಂದ ಇನ್ನಷ್ಟು