ಮಾನ್ವಿ: ಪಟ್ಟಣ ಸೇರಿದಂತೆ ತಾಲ್ಲೂಕಿನ ಎಲ್ಲಾ ಹೋಬಳಿ ಕೇಂದ್ರಗಳಲ್ಲಿ ಜಿಲ್ಲಾಡಳಿತವು ಕೂಡಲೇ ಭತ್ತ ಹಾಗೂ ಜೋಳ ಖರೀದಿ ಕೇಂದ್ರಗಳನ್ನು ಆರಂಭಿಸಬೇಕು ಎಂದು ಶಾಸಕ ರಾಜಾ ವೆಂಕಟಪ್ಪ ನಾಯಕ ಒತ್ತಾಯಿಸಿದ್ದಾರೆ.

ಶನಿವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ‘ತಾಲ್ಲೂಕಿನಲ್ಲಿ ಸುಮಾರು 40ಸಾವಿರ ಹೆಕ್ಟೇರ್ ಪ್ರದೇಶದಲ್ಲಿ ಭತ್ತ ನಾಟಿ ಮಾಡಿದ್ದು,ಅಂದಾಜು 2.3 ಲಕ್ಷ ಟನ್ ಉತ್ಪಾದನೆಯಾಗಲಿದೆ. ಸರ್ಕಾರ ಕೂಡಲೇ ಭತ್ತ ಖರೀದಿ ಕೇಂದ್ರ ಆರಂಭಿಸಬೇಕು.

ಜೊತೆಗೆ ‘ಎ’ ಗ್ರೇಡ್ ಭತ್ತಕ್ಕೆ ಪ್ರತಿ ಕ್ವಿಂಟಾಲ್‌ಗೆ ₹ 2 ಸಾವಿರ ಹಾಗೂ ಸಾಮಾನ್ಯ ಭತ್ತ ಪ್ರತಿ ಕ್ವಿಂಟಾಲ್‌ಗೆ ₹ 1,980 ನಿಗದಿಗೊಳಿಸಿ ಖರೀದಿಸಬೇಕು’ ಎಂದು ಒತ್ತಾಯಿಸಿದರು.

‘ತಾಲ್ಲೂಕಿನಲ್ಲಿ ಒಟ್ಟು 17ಸಾವಿರ ಹೆಕ್ಟೇರ್ ಪ್ರದೇಶದಲ್ಲಿ ಜೋಳ ಬೆಳೆಯಲಾಗಿದ್ದು, ಪ್ರತಿ ಕ್ವಿಂಟಾಲ್‌ಗೆ ₹ 3ಸಾವಿರ ನಿಗದಿ ಮಾಡಿ ಖರೀದಿ ಕೇಂದ್ರಗಳ ಮೂಲಕ ಸರ್ಕಾರ ಖರೀದಿ ಮಾಡಬೇಕು’ ಎಂದು ಒತ್ತಾಯಿಸಿದರು.

ಜೆಡಿಎಸ್ ಪಕ್ಷದ ಮುಖಂಡರಾದ ಬಿ.ನಾಗರಾಜ ಹಾಗೂ ನಾರಾಯಣರಾವ್ ದೇಸಾಯಿ ಇದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.