ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ರಾಯಚೂರನ್ನು ತೆಲಂಗಾಣಕ್ಕೆ ಸೇರಿಸಿ: ವೈರಲ್‌ ಆಯ್ತು ಶಾಸಕರ ಹೇಳಿಕೆ

Last Updated 13 ಅಕ್ಟೋಬರ್ 2021, 13:13 IST
ಅಕ್ಷರ ಗಾತ್ರ

ರಾಯಚೂರು: ‘ಅಭಿವೃದ್ಧಿ ವಿಷಯದಲ್ಲಿ ರಾಯಚೂರು ಜಿಲ್ಲೆಯನ್ನು ಮೊದಲಿನಿಂದ ಕಡೆಗಣಿಸಲಾಗುತ್ತಿದೆ. ಉತ್ತರ ಕರ್ನಾಟಕವೆಂದರೆ ಬೆಳಗಾವಿ, ಹುಬ್ಬಳ್ಳಿ–ಧಾರವಾಡ ಎಂದು ಪರಿಗಣಿಸಲಾಗಿದೆ. ಕಲ್ಯಾಣ ಕರ್ನಾಟಕವೆಂದರೆ ಬೀದರ್‌, ಕಲಬುರ್ಗಿ ಎರಡೇ ಜಿಲ್ಲೆಗಳು ಕಣ್ಣಿಗೆ ಕಾಣುತ್ತವೆ. ರಾಯಚೂರು ಬೇಡವಾಗಿದ್ದರೆ ತೆಲಂಗಾಣಕ್ಕೆ ಸೇರಿಸಿಬಿಡಿ’ ಎಂದು ರಾಯಚೂರು ನಗರ ಶಾಸಕ ಡಾ.ಶಿವರಾಜ ಪಾಟೀಲ ಅವರು ಸಚಿವ ಪ್ರಭು ಚವಾಣ್‌ ಅವರೆದುರು ಈಚೆಗೆ ಆಕ್ರೋಶ ಹೊರಹಾಕಿದ ವಿಡಿಯೋ ವೈರಲ್‌ ಆಗುತ್ತಿದೆ.

ಪ್ರಗತಿ ಪರಿಶೀಲನೆಗಾಗಿ ಈಚೆಗೆ ನಗರಕ್ಕೆ ಬಂದಿದ್ದ ಸಚಿವರು ಪಕ್ಷದ ಕಚೇರಿಗೆ ತೆರಳಿದ್ದ ವೇಳೆ ಶಾಸಕರು ಭಾಷಣ ಮಾಡುತ್ತಿರುವ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಹಂಚಿಕೆ ಆಗಿದೆ.

ತೆಲಂಗಾಣದ ಪತ್ರಿಕೆಗಳು ಶಾಸಕರ ಹೇಳಿಕೆ ಆಧರಿಸಿ ಸುದ್ದಿಗಳನ್ನು ಪ್ರಕಟಿಸಿದ್ದು, ತೆಲಂಗಾಣಕ್ಕೆ ಸೇರಬೇಕಾದ ಗಡಿ ಪ್ರದೇಶಗಳ ಬಗ್ಗೆ ರಾಜ್ಯ ಸರ್ಕಾರವು ಪ್ರಸ್ತಾಪ ಎತ್ತುವುದಕ್ಕೆ ಇದು ಸಕಾಲ. ರಾಯಚೂರು ತೆಲಂಗಾಣದ ಅಭಿವೃದ್ಧಿಯ ಭಾಗವಾಗಲು ಸಿದ್ಧವಿದೆ ಎಂದು ಬರೆಯಲಾಗಿದೆ.

ಈ ಬಗ್ಗೆ ‘ಪ್ರಜಾವಾಣಿ’ಗೆ ಸ್ಪಷ್ಟನೆ ನೀಡಿದ ಶಾಸಕ ಡಾ.ಶಿವರಾಜ ಪಾಟೀಲ, ‘ನಾನು ಕನ್ನಡ ಕನ್ನಡ ಬಿಟ್ಟು ಎಲ್ಲಿಯೂ ಹೋಗುವುದಿಲ್ಲ. ಅಭಿವೃದ್ಧಿ ಮಾಡಬೇಕು ಎಂದು ಒತ್ತಾಯಿಸುವ ಭರದಲ್ಲಿ ಹಾಗೇ ಹೇಳಿದ್ದೇನೆ. ಕನ್ನಡದಲ್ಲೇ ರಾಯಚೂರು ಎಂದೆಂದಿಗೂ ಇರಬೇಕು ಎಂದು ಬಯಸುತ್ತೇನೆ' ಎಂದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT