ಶನಿವಾರ, 13 ಜುಲೈ 2024
×
ADVERTISEMENT
ಈ ಕ್ಷಣ :
ADVERTISEMENT

ಮಸ್ಕಿ: ಶಾಸಕರ ನೂತನ ಕಚೇರಿ ಕಾರ್ಯಾರಂಭ

Published 24 ಜೂನ್ 2024, 15:27 IST
Last Updated 24 ಜೂನ್ 2024, 15:27 IST
ಅಕ್ಷರ ಗಾತ್ರ

ಮಸ್ಕಿ: ಪಟ್ಟಣದ ಬಸವೇಶ್ವರ ನಗರದಲ್ಲಿ ನಿರ್ಮಿಸಲಾಗಿರುವ ಶಾಸಕರ ನೂತನ ಸರ್ಕಾರಿ ಕಚೇರಿ ಸೋಮವಾರದಿಂದ ಅಧಿಕೃತವಾಗಿ ಕಾರ್ಯಾರಂಭ ನಡೆಸಿತು.

ಬೆಳಿಗ್ಗೆ ಶಾಸಕ ಆರ್. ಬಸನಗೌಡ ತುರುವಿಹಾಳ ನೂತನ ಕಚೇರಿಗೆ ಆಗಮಿಸಿ ಸಾರ್ವಜನಿಕರಿಂದ ಕುಂದು ಕೊರತೆಗಳ ಅಹವಾಲು ಸ್ವೀಕರಿಸಿ ಸಂಬಂಧ ಪಟ್ಟ ಇಲಾಖೆ ಅಧಿಕಾರಿಗಳಿಗೆ ಮೊಬೈಲ್ ಕರೆ ಮಾಡಿ ಸಮಸ್ಯೆ ಪರಿಹಾರಕ್ಕೆ ಸೂಚಿಸುವ ಮೂಲಕ ನೂತನ ಕಚೇರಿಯಲ್ಲಿ ಕಾರ್ಯಾರಂಭ ಮಾಡಿದರು.

ಈ ಮೊದಲು ಪುರಸಭೆ ಪಕ್ಕದಲ್ಲಿನ ಕಟ್ಟಡದಲ್ಲಿ ಶಾಸಕರ ಸರ್ಕಾರಿ ಕಚೇರಿ ಆರಂಭಿಸಲಾಗಿತ್ತು. ಜನಸಂದಣಿ ಹೆಚ್ಚಳ ಹಾಗೂ ವಾಹನ ದಟ್ಟಣೆಯಿಂದ ಸಾರ್ವಜನಿಕರಿಗೆ ತೊಂದರೆಯಾಗುತ್ತಿರುವ ಕಾರಣ 2018-19 ಸಾಲಿನ ಪುರಸಭೆಯ ಎಸ್‌ಎಫ್‌ಸಿಯ ₹50 ಲಕ್ಷ ವೆಚ್ಚದಲ್ಲಿ ಬಸವೇಶ್ವರ ನಗರದಲ್ಲಿ ನೂತನ ಕಚೇರಿಯನ್ನು ನಿರ್ಮಿಸಲಾಗಿತ್ತು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT