ಶನಿವಾರ, 27 ಜುಲೈ 2024
×
ADVERTISEMENT
ಈ ಕ್ಷಣ :
ADVERTISEMENT

ರಾಯಚೂರು: ಎಚ್.ಆಂಜನೇಯಗೆ ಪರಿಷತ್ ಸ್ಥಾನ ನೀಡಲು ಮನವಿ

Published 27 ಮೇ 2024, 14:15 IST
Last Updated 27 ಮೇ 2024, 14:15 IST
ಅಕ್ಷರ ಗಾತ್ರ

ರಾಯಚೂರು: ‘ಜೂನ್ 17ರಂದು 11 ವಿಧಾನ ಪರಿಷತ್ ಸದಸ್ಯರು ನಿವೃತ್ತಿ ಹೊಂದಲಿರುವ ಹಿನ್ನೆಲೆಯಲ್ಲಿ ಶೋಷಿತ ಸಮುದಾಯದ ಧ್ವನಿಯಾಗಿರುವ ಮಾಜಿ ಸಚಿವ ಎಚ್.ಆಂಜನೇಯ ಅವರಿಗೆ ವಿಧಾನ ಪರಿಷತ್ ಸ್ಥಾನ ನೀಡಬೇಕು’ ಎಂದು ದಲಿತ ಸೇನೆ ತಾಲ್ಲೂಕು ಘಟಕದ ಅಧ್ಯಕ್ಷ ಆಂಜನೇಯ ಮನವಿ ಮಾಡಿದರು.

ಜೂನ್ 13ರಂದು ನಡೆಯಲಿರುವ ವಿಧಾನ ಪರಿಷತ್ ಚುನಾವಣೆಯಲ್ಲಿ ಎಚ್.ಆಂಜನೇಯ ಅವರನ್ನು ವಿಧಾನ ಪರಿಷತ್ ಸದಸ್ಯರನ್ನಾಗಿ ಆಯ್ಕೆ ಮಾಡಬೇಕು ಎಂದು ನಗರದಲ್ಲಿ ಸೋಮವಾರ ಮಾಧ್ಯಮಗೋಷ್ಠಿಯಲ್ಲಿ ಆಗ್ರಹಿಸಿದರು.

‘ಆಂಜನೇಯ ಸಚಿವರಾಗಿದ್ದ ಅವಧಿಯಲ್ಲಿ ಮಾಜಿ ದೇವದಾಸಿಯರಿಗೆ ಮಾಸಾಶನ, ಅವರ ಮಕ್ಕಳ ಮದುವೆಗೆ ಪ್ರೋತ್ಸಾಹ ಧನ, ಹೆಚ್ಚಿನ ವಿದ್ಯಾಭ್ಯಾಸ ಮಾಡಲು ವಿದೇಶಕ್ಕೆ ಹೋಗಲು ಪ್ರೋತ್ಸಾಹ ಧನ ಸೇರಿ ಅನೇಕ ಐತಿಹಾಸಿಕ ಯೋಜನೆ ಜಾರಿಗೆ ತಂದಿದ್ದಾರೆ’ ಎಂದು ತಿಳಿಸಿದರು.

ಮೊರಾರ್ಜಿ ದೇಸಾಯಿ, ಕಿತ್ತೂರು ರಾಣಿ ಚೆನ್ನಮ್ಮ ವಸತಿ ಶಾಲೆಗಳು ಪ್ರತಿ ಗ್ರಾಮಗಳಲ್ಲಿ ಸಮುದಾಯ ಭವನಗಳ ನಿರ್ಮಾಣ, ಅಭಿವೃದ್ಧಿ ನಿಗಮಗಳಿಗೆ ಸಾವಿರಾರು ಕೋಟಿ ಅನುದಾನ ನೀಡಿದ್ದಾರೆ. ಹೀಗಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪ ಮುಖ್ಯಮಂತ್ರಿ ಡಿ.ಕೆ.ಶಿವುಕುಮಾರ್ ಅವರು ಆಂಜನೇಯ ಅವರನ್ನು ಪರಿಷತ್ ಸದಸ್ಯರನ್ನಾಗಿ ಮಾಡಬೇಕು ಎಂದು ಒತ್ತಾಯಿಸಿದರು.

‌‌ಮುಖಂಡರಾದ ಎಂ.ಸತೀಶಕುಮಾರ, ಎಂ.ಕೃಷ್ಣ, ಆನಂದ ಏಗನೂರು ಹಾಗೂ ಭೀಮರಾಯ ಉಪಸ್ಥಿತರಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT