ಸೋಮವಾರ, 24 ಜೂನ್ 2024
×
ADVERTISEMENT
ಈ ಕ್ಷಣ :
ADVERTISEMENT

ಸಿಂಧನೂರು | ಈಶಾನ್ಯ ಪದವೀಧರ ಕ್ಷೇತ್ರದ ಚುನಾವಣೆ: ಶೇ 67.64 ರಷ್ಟು ಮತದಾನ  

Published 3 ಜೂನ್ 2024, 15:28 IST
Last Updated 3 ಜೂನ್ 2024, 15:28 IST
ಅಕ್ಷರ ಗಾತ್ರ

ಸಿಂಧನೂರು: ಕರ್ನಾಟಕ ರಾಜ್ಯ ಈಶಾನ್ಯ ಪದವೀಧರ ಕ್ಷೇತ್ರಕ್ಕೆ ಸೋಮವಾರ ನಡೆದ ಚುನಾವಣೆಯಲ್ಲಿ ತಾಲ್ಲೂಕಿನಲ್ಲಿ ಶೇ 67.64ರಷ್ಟು ಮತದಾನವಾಗಿದೆ.

ನಗರದ ಮಿನಿವಿಧಾನಸೌಧದ ನ್ಯಾಯಾಲಯ ಸಭಾಂಗಣ, ಸಿಬ್ಬಂದಿ ಕೊಠಡಿ ಸಂಖ್ಯೆ-3, ತಾಲ್ಲೂಕು ಪಂಚಾಯಿತಿ ಕಚೇರಿ, ತುರ್ವಿಹಾಳ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಮತ್ತು ಜವಳಗೇರಾ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಮತದಾನ ಕೇಂದ್ರಗಳಲ್ಲಿ ಬೆಳಿಗ್ಗೆ 8 ರಿಂದ ಸಂಜೆ 4 ಗಂಟೆಯವರೆಗೆ ಪದವೀಧರರು ಮತ ಚಲಾಯಿಸಿದರು.

ವಿಧಾನ ಪರಿಷತ್ ಮಾಜಿ ಸದಸ್ಯ ಶರಣಪ್ಪ ಮಟ್ಟೂರು, ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಬಸವರಾಜ ಪಾಟೀಲ ಇಟಗಿ, ಮಾಜಿ ಶಾಸಕ ಕೆ.ವಿರೂಪಾಕ್ಷಪ್ಪ, ಆರ್‌ಡಿಸಿಸಿ ಬ್ಯಾಂಕ್ ಮಾಜಿ ಅಧ್ಯಕ್ಷ ಪಂಪನಗೌಡ ಬಾದರ್ಲಿ, ಬಿಜೆಪಿ ಮುಖಂಡ ಕೆ.ಕರಿಯಪ್ಪ, ಮತ್ತಿತರ ಮುಖಂಡರು ಹಾಗೂ ಅಧಿಕಾರಿಗಳು ಮತಗಟ್ಟೆ ಕೇಂದ್ರಗಳಿಗೆ ಭೇಟಿ ನೀಡಿ ಮತದಾನ ಪ್ರಕಿಯೆ ವೀಕ್ಷಿಸಿದರು.

ಸಿಂಧನೂರಿನ ಮಿನಿವಿಧಾನಸೌಧ ಮತಗಟ್ಟೆ ಕೇಂದ್ರಕ್ಕೆ ಜಿಲ್ಲಾ ಕಾಂಗ್ರೆಸ್‌ ಅಧ್ಯಕ್ಷ ಬಸವರಾಜ ಪಾಟೀಲ ಇಟಗಿ ಭೇಟಿ ನೀಡಿ ಕಾರ್ಯಕರ್ತರಿಂದ ಮಾಹಿತಿ ಪಡೆದರು
ಸಿಂಧನೂರಿನ ಮಿನಿವಿಧಾನಸೌಧ ಮತಗಟ್ಟೆ ಕೇಂದ್ರಕ್ಕೆ ಜಿಲ್ಲಾ ಕಾಂಗ್ರೆಸ್‌ ಅಧ್ಯಕ್ಷ ಬಸವರಾಜ ಪಾಟೀಲ ಇಟಗಿ ಭೇಟಿ ನೀಡಿ ಕಾರ್ಯಕರ್ತರಿಂದ ಮಾಹಿತಿ ಪಡೆದರು

ಮತದಾನದ ವಿವರ: ತಾಲ್ಲೂಕಿನಲ್ಲಿರುವ ಒಟ್ಟು 4089 ಮತದಾರರಲ್ಲಿ 2001 ಪುರುಷರು, 765 ಮಹಿಳೆಯರು ಸೇರಿ 2766 ಪದವೀಧರರು ಮತ ಚಲಾಯಿಸಿದ್ದಾರೆ. ಶೇ 67.64ರಷ್ಟು ಮತದಾನವಾಗಿದೆ. ಐದು ಮತಗಟ್ಟೆಗಳಲ್ಲೂ ಶಾಂತಿಯುತ ಮತದಾನವಾಗಿದ್ದು, ಅಹಿತಕರ ಘಟನೆ ನಡೆದಿಲ್ಲ ಎಂದು ತಹಶೀಲ್ದಾರ್ ಅರುಣ್ ಎಚ್.ದೇಸಾಯಿ ತಿಳಿಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT