ಸೋಮವಾರ, 17 ಜೂನ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಜಾಲಹಳ್ಳಿ | ಈಶಾನ್ಯ ಪದವೀಧರ ಕ್ಷೇತ್ರದ ಚುನಾವಣೆ: ಶೇ 76.33ರಷ್ಟು ಮತದಾನ

Published 3 ಜೂನ್ 2024, 15:26 IST
Last Updated 3 ಜೂನ್ 2024, 15:26 IST
ಅಕ್ಷರ ಗಾತ್ರ

ಜಾಲಹಳ್ಳಿ: ಈಶಾನ್ಯ ಪದವೀಧರ ಕ್ಷೇತ್ರದ ಚುನಾವಣೆ ಹಿನ್ನೆಲೆಯಲ್ಲಿ ಪಟ್ಟಣದ ಗ್ರಾಮ ಪಂಚಾಯಿತಿ ಕಚೇರಿಯಲ್ಲಿ ಸ್ಥಾಪಿಸಿರುವ ಮತಗಟ್ಟೆಯಲ್ಲಿ ಸೋಮವಾರ ಮತದಾನ ನಡೆಯಿತು.

384 ಪುರುಷ, 102 ಮಹಿಳೆಯರು ಸೇರಿ ಒಟ್ಟು 486 ಮತದಾರರಿದ್ದು, 299 ಪುರುಷರು ಹಾಗೂ 72 ಮಹಿಳಾ ಮತದಾರರು ಮತ ಚಲಾಯಿಸಿದ್ದಾರೆ. ಒಟ್ಟು 371 ಮತದಾರರು ತಮ್ಮ ಹಕ್ಕು ಚಲಾಯಿಸಿದ್ದಾರೆ. ಶೇ 76.33ರಷ್ಟು ಮತದಾನವಾಗಿದೆ ಎಂದು ಚುನಾವಣಾಧಿಕಾರಿ ವಿಕಾಸಕುಮಾರ ಕೊಳೂರು ತಿಳಿಸಿದ್ದಾರೆ.

ಜಾಲಹಳ್ಳಿ ಹೋಬಳಿ ವ್ಯಾಪ್ತಿಗೆ ಬರುವ ಸುಮಾರು 20 ಕಿ.ಮೀ ದೂರದ ಗಲಗ ಗ್ರಾಮದ ಪದವೀಧರರು ಜಾಲಹಳ್ಳಿಗೆ ಬಂದು ಮತಚಲಾಯಿಸಲು ತೊಂದರೆ ಪಡಬೇಕಾಗಿತು. ಪಟ್ಟಣದಲ್ಲಿ ಕಾಂಗ್ರೆಸ್ ಹಾಗೂ ಬಿಜೆಪಿ ಕಾರ್ಯಕರ್ತರು ಪ್ರತ್ಯೇಕ ಟೆಂಟ್ ಹಾಕಿಕೊಂಡು ಮತದಾರರಿಗೆ ಮಾಹಿತಿ ನೀಡಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT