ಬುಧವಾರ, ಏಪ್ರಿಲ್ 1, 2020
19 °C

ಮೋದಿ ವಿರುದ್ಧ ಮಾತನಾಡಿದರೆ ಗೌರಿ ಗತಿ: ಶ್ರೀ ಸಿದ್ಧಲಿಂಗ ಸ್ವಾಮೀಜಿ ಎಚ್ಚರಿಕೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ರಾಯಚೂರು: ‘ಪ್ರಧಾನಿ ನರೇಂದ್ರ ಮೋದಿ ಮತ್ತು ಅಮಿತ್‌ ಶಾ ವಿರುದ್ಧ ಮಾತನಾಡುವವರಿಗೆ ಗೌರಿ ಲಂಕೇಶ್‌ಗೆ ಆದ ಗತಿಯೇ ಆಗುತ್ತದೆ’ ಎಂದು ಶ್ರೀರಾಮ ಸೇನೆಯ ರಾಜ್ಯ ಘಟಕದ ಅಧ್ಯಕ್ಷ ಆಂದೋಲಾದ ಸಿದ್ಧಲಿಂಗ ಸ್ವಾಮೀಜಿ ಅವರು ಮಾಡಿದ್ದಾರೆ ಎನ್ನಲಾದ ಭಾಷಣದ ವಿಡಿಯೊ ತುಣುಕು ವೈರಲ್‌ ಆಗಿದೆ.

ತಾಲ್ಲೂಕಿನ ಶಕ್ತಿನಗರದಲ್ಲಿ ಭಾರತ ಯುವ ವಿವೇಕ ಸಂಘದಿಂದ ಈಚೆಗೆ ಆಯೋಜಿಸಿದ್ದ ಸಮಾರಂಭದಲ್ಲಿ ಅವರು ಭಾಷಣ ಮಾಡಿದ್ದರು. ಶ್ರೀರಾಮ ಸೇನೆಯ ಮುಖ್ಯಸ್ಥ ಪ್ರಮೋದ್‌ ಮುತಾಲಿಕ್‌ ಸಹ ಈ ಸಮಾರಂಭದಲ್ಲಿ ಮಾತನಾಡಿದ್ದರು.

‘ಪ್ರಮೋದ್‌ ಮುತಾಲಿಕ್‌ ಹಾಗೂ ಸಿದ್ಧಲಿಂಗ ಸ್ವಾಮೀಜಿ ಕೋಮುಭಾವನೆ ಕೆರಳಿಸುವ ಕೆಲಸ ಮಾಡುತ್ತಿದ್ದು, ಅವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಬೇಕು’ ಎಂದು ಮುಸ್ಲಿಂ ಸಮಾಜದ ಮುಖಂಡರು ಶಕ್ತಿನಗರ ಠಾಣೆಗೆ ದೂರು ಸಲ್ಲಿಸಿದ್ದರು.

ಆದರೆ, ದೂರು ನೀಡಿದರೂ ಪೊಲೀಸರು ಎಫ್‌ಐಆರ್‌ ದಾಖಲಿಸಿಲ್ಲ.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಪ್ರತಿಕ್ರಿಯಿಸಿ (+)

ಈ ವಿಭಾಗದಿಂದ ಇನ್ನಷ್ಟು