ಮುದಗಲ್: ಅಂಕಲಗಿ ಮಠದ ನಿರುಪಾದೀಶ್ವರ ಜಾತ್ರೆ ರಥೋತ್ಸವಕ್ಕೆ ಬರುವ ಲಕ್ಷಾಂತರ ಭಕ್ತರಿಗೆ ಮೂಲ ಸೌಕರ್ಯಗಳನ್ನು ಕಲ್ಪಿಸಲು ಭಕ್ತರು ಮುಂದಾಗಬೇಕು ಎಂದು ಮಠಾಧ್ಯಕ್ಷ ವೀರಭದ್ರ ಸ್ವಾಮೀಜಿ ಹೇಳಿದರು.

ಮೇ 11 ರಂದು ನಡೆಯುವ ನಿರುಪಾದೇಶ್ವರ ರಥೋತ್ಸವ ಹಾಗೂ ಸಾಮೂಹಿಕ ವಿವಾಹಗಳ ಪ್ರಯುಕ್ತ ಅಂಕಲಿಮಠದಲ್ಲಿ ಶುಕ್ರವಾರ ನಡೆದ ಪೂರ್ವಭಾವಿ ಸಭೆಯನ್ನು ಉದ್ದೇಶಿಸಿ ಮಾತನಾಡಿದರು.

‘ಸುತ್ತಲಿನ ಗ್ರಾಮೀಣ ಪ್ರದೇಶಗಳ ಭಕ್ತರು ನೆರೆಯ ಜಿಲ್ಲೆ, ತಾಲ್ಲೂಕುಗಳಿಂದ ಆಗಮಿಸುವ ಭಕ್ತರಿಗೆ ಕುಡಿಯುವ ನೀರಿನ ಸೌಲಭ್ಯ, ತ್ಯಾಜ್ಯ ವಿಲೇವಾರಿ, ಶೌಚಾಲಯ ಸೇರಿದಂತೆ ಇತರೆ ಕಾರ್ಯಗಳಿಗೆ ತೊಂದರೆಯಾಗದಂತೆ ಕಾರ್ಯಪ್ರವೃತ್ತರಾಗಬೇಕು’ ಎಂದರು.

ಮೇ 8ರಂದು ಕತೃ ಗದ್ದುಗೆಗೆ ರುದ್ರಾಭಿಷೇಕ ನಂತರ ಜಂಗಮ ವಟುಗಳಿಗೆ ಅಯ್ಯಾಚಾರ ಮಾಡಲಾಗುವುದು. ಮೇ 9 ರಂದು ಶಿವಭಜನೆ ಪ್ರಾರಂಭವಾಗುವುದು. ಸಂಜೆ 4 ಗಂಟೆಗೆ ಸಂಗೀತ ಮತ್ತು ಸಾಂಸ್ಕೃತಿಕ ಕಾರ್ಯಕ್ರಮಗಳು ಜರುಗಲಿವೆ. ಮೇ 10 ರಂದು ಬೆಳಗಿನ ಜಾವ ಶಿವಭಜನೆ ಸಮಾಪ್ತಿಯಾಗುತ್ತದೆ. ಸಕಲ ವಾದ್ಯ ಮೇಳದೊಂದಿಗೆ ಪಲ್ಲಕ್ಕಿ ಉತ್ಸವ ಮತ್ತು ಉಚ್ಚಾಯ ಜರುಗುತ್ತದೆ. ಮಧ್ಯಾಹ್ನ ಪೂಜೆ ನಂತರ ಪ್ರಸಾದ ನಡೆಯುತ್ತಿದೆ. ಧರ್ಮಸಭೆ ಹಾಗೂ ಸಾಮೂಹಿಕ ವಿವಾಹಗಳು ಜರುತ್ತದೆ. ಸಂಜೆ 5 ಗಂಟೆಗೆ ರಥೋತ್ಸವ ಜರುಗುತ್ತದೆ. ಭಕ್ತರು ಆಗಮಿಸಿ ದೇವರ ಕೃಪೆಗೆ ಪಾತ್ರರಾಗಬೇಕೆಂದರು.

ಕಿರಿಯ ಶ್ರೀ ಫಕಿರೇಶ್ವರ ಸ್ವಾಮೀಜಿ, ಪಂಚಮಸಾಲಿ ಸಮಾಜದ ಜಿಲ್ಲಾಧ್ಯಕ್ಷ ಮಹಾಂತೇಶ ಪಾಟೀಲ, ನಾಗನಗೌಡ ತುರಡಗಿ, ರುದ್ರಗೌಡ ತುರಡಗಿ, ಗುರುನಗೌಡ ಅಡವಿಬಾವಿ, ರಿಯಾಜ್ ಪಾಶ ಜಂಬಾಳಿ, ಹನುಮಂತ ಇದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260503-32-593345408

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.