ಮುದಗಲ್: ಸಮೀಪದ ಜನತಾಪುರ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಗೆ ಮಕ್ಕಳನ್ನು ಒಂದನೇ ತರಗತಿಗೆ ದಾಖಲಿಸಲು ಶಾಲೆ ಮಕ್ಕಳು ಗ್ರಾಮದ ವಿವಿಧ ಕಾಲೊನಿಗಳಲ್ಲಿ ಸಂಚರಿಸಿ ವಿಶೇಷ ದಾಖಲಾತಿ ಜಾಗೃತಿ ಅಭಿಯಾನ ನಡೆಸಿದರು.

ಗ್ರಾಮದ ಪ್ರಮುಖ ಸ್ಥಳಗಳಲ್ಲಿ ಶೈಕ್ಷಣಿಕ ಸೌಲಭ್ಯಗಳ ಭಿತ್ತಿ ಪತ್ರ ಅಂಟಿಸಿ, ಗ್ರಾಮಸ್ಥರಲ್ಲಿ ಸರ್ಕಾರಿ ಶಾಲೆಗಳ ಬಗ್ಗೆ ಜಾಗೃತಿ ಮೂಡಿಸಿದರು. ಶಿಕ್ಷಕ ಮೌನೇಶ ಮಾತನಾಡಿ, ‘ಸರ್ಕಾರಿ ಶಾಲೆಗಳಲ್ಲಿ ಉತ್ತಮ ಗುಣಮಟ್ಟದ ಶಿಕ್ಷಣ ನೀಡುತ್ತಿದ್ದೇವೆ. ಬೆಂಗಳೂರಿನ ಅನೇಕ ಸಂಘ ಸಂಸ್ಥೆಗಳು ನಮ್ಮ ಶಾಲೆಗೆ ಶೈಕ್ಷಣಿಕ ಕೊಡುಗೆಗಳನ್ನು ನೀಡಿವೆ. ಮಕ್ಕಳು ಇದರ ಸದುಪಯೋಗ ಪಡೆದುಕೊಂಡು ಗುಣಮಟ್ಟದ ಶಿಕ್ಷಣ ಪಡೆಯಬೇಕು’ ಎಂದರು.

ಎಸ್.ಡಿಎಂ.ಸಿ ಅಧ್ಯಕ್ಷ ಅಮರೇಗೌಡ ಪಾಟೀಲ, ಶಿಕ್ಷಕರಾದ ರವಿಕುಮಾರ, ಜ್ಯೋತಿ, ಕುಮಾರಿ ಗೀತಾ, ವಿದ್ಯಾರ್ಥಿಗಳು ಭಾಗವಹಿಸಿದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260410-32-1206316223

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.