ಮುದಗಲ್: ಈ ವರ್ಷ ಬಿಸಿಲಿನ ತೀವ್ರತೆ ಹೆಚ್ಚುತ್ತಿದ್ದು, ವಾತಾವರಣದಲ್ಲಿಗಾಳಿ ಕಡಿಮೆಯಾಗಿ ಸೆಕೆ ಅತಿಯಾದ ಕಾರಣ ಜನ-ಜಾನುವಾರು ಪರದಾಡುವಂತಾಗಿದೆ.

ತಾಪಮಾನ ಏರಿಕೆಯಾಗಿದ್ದರಿಂದ ಕೊಳವೆ ಬಾವಿಗಳಲ್ಲಿ ಅಂತರ್ಜಲ ಮಟ್ಟ ಕುಸಿದಿದೆ. ಸಮೀಪದ ಕನ್ನಾಪುರಹಟ್ಟಿ, ಉಪ್ಪಾರ ನಂದಿಹಾಳ, ಉಳಿಮೇಶ್ವರ, ಭೋಗಾಪುರ ಸೇರಿ ಇನ್ನಿತರ ಗ್ರಾಮಗಳ ಕೆರೆಗಳಲ್ಲಿ ನೀರಿನ ಪ್ರಮಾಣ ಇಳಿಕೆಯಾಗಿದೆ. ತಿಂಗಳಿಂದ ಬಿಸಿಲಿನ ಝಳ ತೀವ್ರವಾಗಿದೆ.

ಬೆಳಿಗ್ಗೆ 8 ಕ್ಕೆ ನಿಗಿ ನಿಗಿಯಾಗುವ ಸೂರ್ಯನ ಪ್ರಖರತೆ ಸಂಜೆ 6 ಗಂಟೆಯಾದರೂ ಇಳಿಮುಖವಾಗುತ್ತಿಲ್ಲ. ಈ ವರ್ಷದ ಮುಂಗಾರು ಹಾಗೂ ಹಿಂಗಾರು ಹಂಗಾಮಿನಲ್ಲಿ ವಾಡಿಕೆಗಿಂತ ಹೆಚ್ಚು ಮಳೆ ಸುರಿದರೂ ಬಿಸಿಲಿನ ತಾಪ ಹೆಚ್ಚಾಗಿದೆ. ಚಳಿಗಾಲದಲ್ಲೂ ಚಳಿ ಹೆಚ್ಚಾಗಿ ಇರಲಿಲ್ಲ. ಏಪ್ರಿಲ್ ತಿಂಗಳಲ್ಲಿ ಸರಾಸರಿ ಗರಿಷ್ಠ ಉಷ್ಣಾಂಶ 40 ಡಿಗ್ರಿ ದಾಖಲಾಗಿದೆ. ಜನ ಮಧ್ಯಾಹ್ನ ಮನೆಯಿಂದ ಹೊರಬರಲು ಹಿಂದೇಟು ಹಾಕುವ ಸ್ಥಿತಿ ಎದುರಾಗಿದೆ. ರಾತ್ರಿ ಹಾಗೂ ಬೆಳಿಗ್ಗೆ ತಾಪಮಾನ ಕೊಂಚ ಇಳಿಕೆಯಾದರೂ ಮಧ್ಯಾಹ್ನದ ಬಿಸಿಲು ನೆತ್ತಿ ಸುಡುತ್ತಿದೆ.

ರಾಂಪುರ ಏತ ನೀರಾವರಿ ಕಾಲುವೆ ವ್ಯಾಪ್ತಿಯ ರೈತರು ಭತ್ತ ಕಟಾವು ಮಾಡುತ್ತಿದ್ದಾರೆ. ಬಿಸಿಲಿನ ಬೇಗೆಗೆ ಗಳಿಗೆಗೊಮ್ಮೆ ನೀರು ಕುಡಿಯುತ್ತಿದ್ದಾರೆ. ಭತ್ತ ತಿರುವಿ ಹಾಕುವ ಕೂಲಿಕಾರರು ಬಿಸಿಲಿನ ತಾಪಮಾನಕ್ಕೆ ನಲುಗುವಂತಾಗಿದೆ.

ಬೀದಿಬದಿ ವ್ಯಾಪಾರಿಗಳು, ವೃದ್ಧರು ಸೇರಿ ಹಲವರಿಗೆ ಬಿಸಿಲಿನ ಬೇಗೆ ತಟ್ಟಿದೆ. ದಿಢೀರ್ ತಾಪಮಾನ ಏರಿಕೆಯಿಂದ ಜನರು ಫ್ಯಾನ್ ಹಾಗೂ ಹವಾನಿಯಂತ್ರಿತ (ಎ.ಸಿ) ವ್ಯವಸ್ಥೆಯ ಮೊರೆ ಹೋಗುವಂತಾಗಿದೆ. ಪಟ್ಟಣದ ಮುಖ್ಯ ರಸ್ತೆ ಸೇರಿ ಒಳಭಾಗದ ರಸ್ತೆಯಲ್ಲಿದ್ದ ಮರಗಳನ್ನು ರಸ್ತೆ ವಿಸ್ತರಣೆ ನೆಪದಲ್ಲಿ ಕಡಿದ ಪರಿಣಾಮ ರಸ್ತೆಯಲ್ಲಿ ನೆರಳು ಇಲ್ಲದಾಗಿದೆ. ತಾಪಮಾನದಿಂದ ಪಾರಾಗಲು ಜನರು ತಂಪು ಪಾನೀಯಗಳ ಮೊರೆ ಹೋಗುತ್ತಿದ್ದಾರೆ. ಎಳನೀರು, ಮಜ್ಜಿಗೆ, ಹಣ್ಣಿನ ಜ್ಯೂಸ್ ಸೇವಿಸುತ್ತಿದ್ದಾರೆ.

ಮೇಯಲು ಅಡವಿಗೆ ಹೋದ ಜಾನುವಾರುಗಳು ಕುಡಿಯಲು ನೀರಿಲ್ಲದ ಕಾರಣ ತೊಂದರೆ ಅನುಭವಿಸುತ್ತಿವೆ. ಗ್ರಾಮೀಣ ಪ್ರದೇಶದಲ್ಲಿ ಜನರು ತಾಪ ತಾಳದೆ ಮರದ ನೆರಳಿನಲ್ಲಿ ಕುಳಿತು ಹುಲಿಮನೆ, ಚಕ್ಕರ್ ಆಟವಾಡುತ್ತಿದ್ದಾರೆ. ಸಮೀಪದ ಕೃಷ್ಣಾ ನದಿಯಲ್ಲಿ ನೀರಿನ ಪ್ರಮಾಣ ಹೆಚ್ಚಿದ್ದರೂ ಜಾನುವಾರುಗಳಿಗೆ ಕುಡಿಯಲು ರಾಂಪುರ ಏತ ನೀರಾವರಿ ಕಾಲುವೆಗೆ ನೀರು ಹರಿಸಬೇಕು’ ಎಂದು ರೈತ ಶಿವರಾಜ ಒತ್ತಾಯಿಸಿದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260501-32-1539881952

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.