ಮುದಗಲ್: ಬಿಸಿಲಿನ ತಾಪ ಹೆಚ್ಚಾಗುತ್ತಿದ್ದು, ಕುಡಿಯುವ ಹಾಗೂ ಕೃಷಿ ಕಾರ್ಯಕ್ಕೆ ನೀರಿನ ಅಗತ್ಯತೆ ತೀವ್ರಗೊಳ್ಳುತ್ತಿದೆ. ಇಂಥ ಸಂದರ್ಭದಲ್ಲಿ ಪದೇ ಪದೇ ವಿದ್ಯುತ್ ವ್ಯತ್ಯಯದಿಂದಾಗಿ ದೇಸಾಯಿ ಭೋಗಾಪುರ ಮತ್ತು ಗೌಡರ ಹಟ್ಟಿ ಕಸ್ತೂರಿ ತಾಂಡಾ, ಪಾಪಣ್ಣ ತಾಂಡಾ, ದಾದೂಡಿ ತಾಂಡಾ, ಕಿರಣ ತಾಂಡಾದ ಜನರಿಗೆ ಸಾಕಷ್ಟು ತೊಂದರೆ ಉಂಟಾಗಿದೆ.

ರಾತ್ರಿ ವೇಳೆ ಬೆಳಕು, ಗಾಳಿ ಇಲ್ಲದೇ ಜನರು ನರಕಯಾತನೆ ಅನುಭವಿಸುತ್ತಿದ್ದಾರೆ. ಕುಡಿಯುವ ನೀರಿಗೆ ಪರಿತಪಿಸಬೇಕಾದ ಪರಿಸ್ಥಿತಿ ನಿರ್ಮಾಣವಾಗಿದೆ. ಈ ಗ್ರಾಮಗಳಿಗೆ ಲಿಂಗಸುಗೂರು ತಾಲ್ಲೂಕಿನ ನಾಗಲಾಪುರ 33 ಕೆ.ವಿ ಸ್ಟೇಷನ್ನಿಂದ ವಿದ್ಯುತ್ ಸರಬರಾಜು ಆಗುತ್ತಿದೆ.

ನಿರ್ವಹಣಾ ಕಾರ್ಯವನ್ನು ಮಸ್ಕಿ ತಾಲ್ಲೂಕಿನ ಮೆದಿಕಿನಾಳ ಸೆಕ್ಷನ್ನವರು ಮಾಡುತ್ತಾರೆ. ಸಮಸ್ಯೆ ಉಂಟಾದರೆ, ಮಸ್ಕಿ ತಾಲ್ಲೂಕಿನ ಲೈನ್ಮ್ಯಾನ್ ಅವರಿಗೆ ಮಾತನಾಡಬೇಕು. ಎರಡೂ ತಾಲ್ಲೂಕುಗಳ ಜೆಸ್ಕಾಂ ಸಿಬ್ಬಂದಿಯ ಸಮನ್ವಯ ಕೊರತೆಯಿಂದಾಗಿ ಇಲ್ಲಿ ಪದೇ ಪದೇ ವಿದ್ಯುತ್ ಕಡಿತವಾಗುತ್ತದೆ.

ವಾರದಿಂದ ಸಮರ್ಪಕ ವಿದ್ಯುತ್ ನೀಡುತ್ತಿಲ್ಲ. ವಿದ್ಯುತ್ ಇಲ್ಲದ ಕಾರಣ ಹಿಟ್ಟಿನ ಗಿರಣಿ ಆರಂಭವಾಗಿಲ್ಲ. ವಿದ್ಯುತ್ ಸಮಸ್ಯೆಯಿಂದ ಹೊಟ್ಟೆಗೆ ಹಿಟ್ಟಿಲ್ಲ. ಮೊಬೈಲ್ ಚಾರ್ಜ್ ಮಾಡಲೂ ಆಗುತ್ತಿಲ್ಲ. ಕುಡಿಯುವ ನೀರಿಗೆ ಹಾಹಾ ಕಾರದ ಪರಿಸ್ಥಿತಿ ನಿರ್ಮಾಣವಾಗಿದೆ. ವಿಪರೀತ ಉಷ್ಣಾಂಶದಿಂದ ರಾತ್ರಿ ವೇಳೆ ಬಾಣಂತಿಯರು, ಗರ್ಭಿಣಿಯರು, ಮಕ್ಕಳು, ವೃದ್ಧರು, ಮಹಿಳೆಯರು ಮನೆಯೊಳಗೆ ಹೋಗಲು ಹಿಂದೇಟು ಹಾಕುತ್ತಿದ್ದಾರೆ. ಮನೆಯ ಹೊರಗಡೆ ಉಳಿದುಕೊಳ್ಳಬೇಕೆಂದರೆ ಕತ್ತಲು ಕಾಟ. ಇದರಿಂದ ಜನ ಹೈರಾಣಾಗಿದ್ದಾರೆ.

ವಿದ್ಯುತ್ ಸಮಸ್ಯೆ ಪರಿಹಾರ ಮಾಡಿಕೊಡಿ ಎಂದು ಸಂಬಂಧಿಸಿದ ಅಧಿಕಾರಿಗಳಿಗೆ ಸಾಕಷ್ಟು ಬಾರಿ ಮನವಿ ಮಾಡಿದರೂ ಪ್ರಯೋಜನವಾಗಿಲ್ಲ. ವರ್ಗಾವಣೆಯಾಗಿ ಬಂದ ನೂತನ ಲೈನ್ಮ್ಯಾನ್ಗೆ ಇಲ್ಲಿನ ವಿದ್ಯುತ್ ಸಮಸ್ಯೆ ಅರ್ಥವಾಗುತ್ತಿಲ್ಲ. ಹಾಗಾಗಿ ಸಂಬಂಧಿಸಿದ ಅಧಿಕಾರಿಗಳು ಹಾಗೂ ಜನಪ್ರತಿನಿಧಿಗಳು ಸಮಸ್ಯೆಗೆ ಸ್ಪಂದಿಸಬೇಕು ಎಂದು ಗ್ರಾಮಸ್ಥರು ಆಗ್ರಹಿಸಿದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260521-32-1238324718

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.