ಮುದಗಲ್: ಅತ್ಯಂತ ಹಳೆಯ ಊರು ಮುದಗಲ್ ಪಟ್ಟಣಕ್ಕೆ 15 ದಿನಗಳಿಗೊಮ್ಮೆ ನೀರು ಸರಬರಾಜು ಆಗುತ್ತಿರುವ ಕಾರಣ ಜನ ನೀರಿಗಾಗಿ ಪರದಾಡುತ್ತಿದ್ದಾರೆ. ಪಟ್ಟಣಕ್ಕೆ ನೀರಿನ ಸೌಲಭ್ಯ ಕಲ್ಪಿಸುವಲ್ಲಿ ಜನಪ್ರತಿನಿಧಿಗಳು ಹಾಗೂ ಅಧಿಕಾರಿಗಳು ವಿಫಲರಾಗಿದ್ದಾರೆ.

ಪಟ್ಟಣವು 32 ಸಾವಿರಕ್ಕೂ ಅಧಿಕ ಜನ ಸಂಖ್ಯೆ ಹೊಂದಿದೆ. ಪಟ್ಟಣಕ್ಕೆ 4 ದಶ ಲಕ್ಷ ಲೀಟರ್ ನೀರಿನ ಅವಶ್ಯಕತೆ ಇದೆ. ಪ್ರಸ್ತುತ 2.7 ದಶಲಕ್ಷ ಲೀಟರ್ ನೀರು ಸರಬರಾಜು ಆಗುತ್ತಿದೆ. ಪಟ್ಟಣದಲ್ಲಿ 153 ಕೊಳವೆಬಾವಿಗಳು ಹಾಗೂ ನಾರಾಯಣಪುರ ಜಲಾಶಯದ ಹಿನ್ನೀರಿನಿಂದ ನೀರು ಸರಬರಾಜು ಮಾಡಲಾಗುತ್ತಿದೆ. ಆದರೂ ಜನಸಂಖ್ಯೆಗೆ ಅನುಗುಣವಾಗಿ ನೀರು ಪೂರೈಕೆಯಾಗುತ್ತಿಲ್ಲ. ಸಮಸ್ಯೆ ಹೆಚ್ಚಾಗಿದೆ.

ಪಟ್ಟಣಕ್ಕೆ ನಿರಂತರ ನೀರು ಸರಬರಾಜು ಯೋಜನೆ ರೂಪಿಸಿ, ₹31.29 ಕೋಟಿ ವೆಚ್ಚದಲ್ಲಿ ಕಾಮಗಾರಿ ಆರಂಭಿಸಲಾಗಿದೆ. ಬಸವಸಾಗರ ಜಲಾಶಯದಿಂದ ಪಟ್ಟಣದವರೆಗೆ 8 ಕಿ.ಮೀ ಪೈಪ್ಲೈನ್ ಅಳವಡಿಸಲಾಗಿದೆ. ಲಭ್ಯವಿದ್ದ ಅನುದಾನದಲ್ಲಿ ಶೇ 25ರಷ್ಟು ಕಾಮಗಾರಿ ಮುಗಿಸಲಾಗಿದೆ. ಉಳಿದ ಕಾಮಗಾರಿ ನನೆಗುದಿಗೆ ಬಿದ್ದಿದೆ.

ಪಟ್ಟಣದ ನಿರಂತರ ಕುಡಿಯುವ ನೀರಿನ ಯೋಜನೆ ಕಾಮಗಾರಿ ನನೆಗುದಿಗೆ ಬಿದ್ದಿದೆ. ಕಾಮಗಾರಿ ಪೂರ್ಣಗೊಳಿಸಲು ₹45 ಕೋಟಿ ಅನುದಾನ ನೀಡುವಂತೆ ಶಾಸಕ ಮಾನಪ್ಪ ವಜ್ಜಲ ನೇತೃತ್ವದಲ್ಲಿ ಪಟ್ಟಣದ ಜನ ಮುಖ್ಯಮಂತ್ರಿ ಬಳಿ ನಿಯೋಗ ಹೋದರೂ ಪ್ರಯೋಜನವಾಗಿಲ್ಲ.

ನೀರು ಸಂಗ್ರಹ ಮಾಡಲು ಟ್ಯಾಂಕ್ಗಳಿಲ್ಲ. ಇದ್ದ ಒಂದೇ ಟ್ಯಾಂಕ್ನಲ್ಲಿ 23 ವಾರ್ಡ್ಗಳಿಗೆ ನೀರು ಸರಬರಾಜು ಮಾಡಬೇಕಾಗಿದೆ. ನಿರಂತರ ಕುಡಿಯುವ ನೀರು ಸರಬರಾಜು ಕಾಮಗಾರಿ ಗುತ್ತಿಗೆ ಪಡೆದ ಹೈದರಾಬಾದ್ ಮೂಲದ ಎ.ಎಸ್.ಆರ್ ಕಂಪನಿ ಕಾಮಗಾರಿ ಅರ್ಧಕ್ಕೆ ನಿಲ್ಲಿಸಿದೆ.

ಆರೋಪ-ಪ್ರತ್ಯಾರೋಪ

ಪಟ್ಟಣಕ್ಕೆ ಕುಡಿಯುವ ನೀರು ತರುವಲ್ಲಿ ವಿಫಲರಾಗಿದ್ದೀರಿ ಎಂದು 2022 ರಲ್ಲಿ, ಆಗಿನ ಶಾಸಕ ಡಿ.ಎಸ್.ಹೂಲಗೇರಿ ಹಾಗೂ ಆಗಿನ ಹಟ್ಟಿ ಕಂಪನಿ ಅಧ್ಯಕ್ಷ ಮಾನಪ್ಪ ವಜ್ಜಲ್ ಅವರ ನಡುವೆ ಸಮುದಾಯ ಆರೋಗ್ಯ ಕೇಂದ್ರದ ಸಿಬ್ಬಂದಿ ವಸತಿಗೃಹ ಉದ್ಘಾಟನೆ ಕಾರ್ಯಕ್ರಮದಲ್ಲಿ ವಾಗ್ವಾದ ನಡೆದಿತ್ತು. ಆರೋಪ- ಪ್ರತ್ಯಾರೋಪಗಳು ನಡೆದು ಇಬ್ಬರ ಬೆಂಬಲಿಗರು ಕೈ-ಕೈ ಮೀಲಾಯಿಸುವ ಹಂತಕ್ಕೆ ಹೋಗಿದ್ದರು.

ಚುನಾವಣೆಯಲ್ಲಿ ನಾನು ಗೆದ್ದು ಬಂದರೆ ನಿರಂತರ ಕುಡಿಯುವ ನೀರಿನ ಕಾಮಗಾರಿ ಮುಗಿಸಿ, ನೀರಿನ ಸೌಲಭ್ಯ ಕಲ್ಪಿಸುತ್ತೇನೆ ಎಂದು ಎಲ್ಲ ಪಕ್ಷದವರೂ ಪ್ರಚಾರ ಮಾಡಿದ್ದರು. ಗೆದ್ದ ನಂತರ ಸೌಲಭ್ಯ ಕಲ್ಪಿಸುವಲ್ಲಿ ವಿಫಲರಾಗಿದ್ದಾರೆ. ಮುದಗಲ್ ಪಟ್ಟಣಕ್ಕೆ ಕುಡಿಯುವ ನೀರಿಗಾಗಿ ಅನುದಾನ ನೀಡಿ ಎಂದು ಶಾಸಕ ಮಾನಪ್ಪ ವಜ್ಜಲ್ ಹಾಗೂ ವಿಧಾನ ಪರಿಷತ್ ಸದಸ್ಯ ಶರಣಗೌಡ ಪಾಟೀಲ ಬಯ್ಯಾಪುರ ಅವರು ಅಧಿವೇಶನದಲ್ಲಿ ಸರ್ಕಾರದ ಗಮನ ಸೆಳೆದರೂ ಪ್ರಯೋಜನವಾಗಿಲ್ಲ.

ಸಮರ್ಪಕ ಕುಡಿಯುವ ನೀರಿನ ಸೌಲಭ್ಯ ಕಲ್ಪಿಸಿ ಕೊಡಿ ಎಂದು ವಿವಿಧ ಕಾಲೊನಿಗಳ ನಿವಾಸಿಗಳು ಚುನಾಯಿತ ಪ್ರತಿನಿಧಿಗಳು ಹಾಗೂ ಪುರಸಭೆ ಅಧಿಕಾರಿಗಳಿಗೆ ಮನವಿ ಮಾಡಿದರೂ ಪ್ರಯೋಜನವಾಗಿಲ್ಲ.
ಬಸವರಾಜ ಬಂಕದಮನಿ, ಪಟ್ಟಣದ ನಿವಾಸಿ

ಮುದಗಲ್ ಪಟ್ಟಣದ ನಿರಂತರ ಕುಡಿಯುವ ನೀರಿನ ಯೋಜನೆಗೆ ಹೆಚ್ಚುವರಿ ಅನುದಾನ ನೀಡಿ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಮನವಿ ಮಾಡಲಾಗಿದೆ.
ಅಶೋಕಗೌಡ ಆದಾಪುರ, ಮಾಜಿ ಅಧ್ಯಕ್ಷ ಪುರಸಭೆ

ಪಟ್ಟಣದ ಜನ ಬ್ಯಾರೆಲ್, ಕೊಡ, ಖಾಲಿ ಡಬ್ಬಾಗಳಲ್ಲಿ ನೀರು ಸಂಗ್ರಹಿಸಿಟ್ಟುಕೊಂಡು ಕುಡಿಯುತ್ತಿದ್ದಾರೆ. ಶುದ್ದ ನೀರು ದೊರೆಯದ ಕಾರಣ ಜನರಲ್ಲಿ ಆರೋಗ್ಯ ಸಮಸ್ಯೆ ಕಾಣಿಸಿಕೊಳ್ಳುತ್ತಿದೆ.
ಕೃಷ್ಣ ಚಲವಾದಿ, ಅಧ್ಯಕ್ಷ, ದಲಿತ ಪ್ಯಾಂಥರ್ಸ್ ಮುದಗಲ್

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.