ಮುದಗಲ್: ಸಮೀಪದ ಛತರ, ನಾಗಲಾಪುರ, ವ್ಯಾಕರನಾಳ ಹಾಗೂ ಬೆಳ್ಳಿಹಾಳ ಗ್ರಾಮಗಳಲ್ಲಿ 2025-26ನೇ ಸಾಲಿನ ಕೆಕೆಆರ್ಡಿಬಿ ಅನುದಾನದಲ್ಲಿ ಸಿಸಿ ರಸ್ತೆ ಕಾಮಗಾರಿಗಳಿಗೆ ಭಾನುವಾರ ಲಿಂಗಸುಗೂರು ಶಾಸಕ ಮಾನಪ್ಪ ಡಿ.ವಜ್ಜಲ ಚಾಲನೆ ನೀಡಿದರು.

ವ್ಯಾಕರನಾಳ ಗ್ರಾಮದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ‘ಪ್ರತಿ ಗ್ರಾಮಕ್ಕೆ ತಲಾ ₹50 ಲಕ್ಷ ಮೊತ್ತದ ಸಿಸಿ ರಸ್ತೆ ಕಾಮಗಾರಿಗೆ ಚಾಲನೆ ನೀಡಲಾಗಿದೆ. ಅಭಿವೃದ್ಧಿ ಕಾಮಗಾರಿಗಳು ನಡೆಯುವ ವೇಳೆ ಸಾರ್ವಜನಿಕರಿಗೆ ಮತ್ತು ಸ್ಥಳೀಯ ನಿವಾಸಿಗಳಿಗೆ ಸಮಸ್ಯೆಯಾಗದಂತೆ ಕಾಮಗಾರಿ ಪೂರ್ಣಗೊಳಿಸಬೇಕು ಎಂದರು.

ಕುಡಿಯುವ ನೀರಿನ ಸಮಸ್ಯೆ ಬಗೆಹರಿಸಿ: ಮುದಗಲ್ ಸಮೀಪದ ನಾಗಲಾಪುರ ಗ್ರಾ.ಪಂ ವ್ಯಾಪ್ತಿಯಲ್ಲಿ ಬರುವ ವ್ಯಾಕರನಾಳ ಗ್ರಾಮದಲ್ಲಿ ಕುಡಿಯುವ ನೀರಿನ ಸಮಸ್ಯೆ ಪರಿಹಾರ ಮಾಡಬೇಕು ಎಂದು ಗ್ರಾಮಸ್ಥರು ಶಾಸಕರಿಗೆ ಮನವಿ ಮಾಡಿದರು.

ಕಳೆದ ವರ್ಷ ಗ್ರಾಮದಿಂದ ಅಂಕಲಿಮಠಕ್ಕೆ ಸಂಪರ್ಕ ಕಲ್ಪಿಸುವ ಮುಖ್ಯ ರಸ್ತೆಯಲ್ಲಿ ಕೊಳವೆ ಬಾವಿ ಕೊರಿಸಲಾಗಿದೆ. ಇದಕ್ಕೆ ವಿದ್ಯುತ್ ಸಂಪರ್ಕ ಕಲ್ಪಿಸಿಲ್ಲ. ಇದರಿಂದ ನೀರಿನ ತೊಂದರೆ ಅನುಭವಿಸುವಂತಾಗಿದೆ ಎಂದು ಶಾಸಕರ ಮುಂದೆ ಆಳಲು ತೋಡಿಕೊಂಡರು.

ಅಧಿಕಾರಿಗಳಿಗಳೊಂದಿಗೆ ಚರ್ಚಿಸಿ ಸಮಸ್ಯೆ ಬಗೆಹರಿಸುವ ಭರವಸೆ ನೀಡಿದರು.

ಗಿರಿಮಲ್ಲನಗೌಡ, ಲಿಂಗಸುಗೂರು ಬಿಜೆಪಿ ಮಂಡಲ ಅಧ್ಯಕ್ಷ ನಾಗಭೂಷಣ ಕರಿಯಪ್ಪ ಯಾದವ, ನಾಗರಾಜ ತಳವಾರ, ಚಂದಾವಲಿ ಸಾಬ ಮುದಗಲ್, ಲಿಂಗಣ್ಣ ದೇವಿಕೇರಿ, ಬಾಲಚಂದ್ರ ಕಂದಗಲ್, ನಬೀಸಾಬ, ಶಂಕ್ರಪ್ಪ ತುರುವಿಹಾಳ, ಬಸವರಾಜ ಮಡಿವಾಳರ ಸೇರಿದಂತೆ ಹಲವರು ಹಾಜರಿದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260508-32-980480792

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.