ಶುಕ್ರವಾರ, ಅಕ್ಟೋಬರ್ 22, 2021
21 °C

ಶಾಲಾ ಆವರಣ ಸ್ವಚ್ಛತೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಮಸ್ಕಿ: ಪಟ್ಟಣದ ಸೋಮನಾಥ ನಗರದ ಸರ್ಕಾರಿ ಪ್ರಾಥಮಿಕ ಶಾಲಾ ಆವರಣದಲ್ಲಿ ಮಳೆ ನೀರು ನಿಂತು ಪಾಚಿಗಟ್ಟಿದ್ದ ಸ್ಥಳವನ್ನು ಪುರಸಭೆ ಸಿಬ್ಬಂದಿ ಸ್ವಚ್ಛ ಮಾಡಿದರು. ಸೋಮವಾರ ಬೆಳಿಗ್ಗೆ ನೀರು ತೆರವು ಮಾಡಲಾಯಿತು.

ಶಾಲಾ ಆವರಣದ ತಗ್ಗು ಪ್ರದೇಶಗಳಲ್ಲಿ ಮಳೆ ನೀರು ಸಂಗ್ರಹವಾಗಿತ್ತು. ಇಡೀ ಆವರಣ ಪಾಚಿಗಟ್ಟಿ ಸೊಳ್ಳೆಗಳ ಉತ್ಪತ್ತಿ ತಾಣವಾಗಿತ್ತು. ಈ ಕುರಿತು ‘ಪ್ರಜಾವಾಣಿ’ ಯ ಸೋಮವಾರದ ಸಂಚಿಕೆಯಲ್ಲಿ ವರದಿ ಪ್ರಕಟವಾಗಿತ್ತು. ಆದ್ದರಿಂದ ತಹಶೀಲ್ದಾರ್ ಕವಿತಾ.ಆರ್ ಅವರು ಸ್ವಚ್ಛ ಮಾಡಿಸುವಂತೆ ಪುರಸಭೆ ಅಧಿಕಾರಿಗಳಿಗೆ ಸೂಚಿಸಿದ್ದರು. ಎಚ್ಚೆತ್ತ ಅಧಿಕಾರಿಗಳು ಸಿಬ್ಬಂದಿಯಿಂದ ಆವರಣ ಸ್ವಚ್ಛ ಮಾಡಿಸಿದರು.

 

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.