ಮಸ್ಕಿ: ‘ಮುಂಬರುವ ಜಿಲ್ಲಾ ಹಾಗೂ ತಾಲ್ಲೂಕು ಪಂಚಾಯಿತಿ ಹಾಗೂ ನಗರ ಸ್ಥಳೀಯ ಸಂಸ್ಥೆಗಳ ಚುನಾವಣೆ ಜೊತೆಗೆ 2023 ರಲ್ಲಿ ನಡೆಯುವ ವಿಧಾನಸಭಾ ಚುನಾವಣೆಯನ್ನು ದೃಷ್ಟಿಯಲ್ಲಿ ಇಟ್ಟುಕೊಂಡು ಕ್ಷೇತ್ರದಲ್ಲಿ ಪಕ್ಷ ಸಂಘಟನೆಗೆ ಹೆಚ್ಚು ಆದ್ಯತೆ ನೀಡಲಾಗಿದೆ’ ಎಂದು ಪಕ್ಷದ ಬಳ್ಳಾರಿ ವಿಭಾಗದ ಪ್ರಭಾರಿ ಸಿದ್ದೇಶ ಯಾದವ್ ತಿಳಿಸಿದರು.

ಪಟ್ಟಣದ ಬಸವೇಶ್ವರ ನಗರದ ಬಿಜೆಪಿ ಕಚೇರಿಯಲ್ಲಿ ಬುಧವಾರ ನಡೆದ ಮಸ್ಕಿ ಮಂಡಲ ಕಾರ್ಯಕಾರಿ ಸಮಿತಿ ಸಭೆ ಉದ್ಘಾಟಿಸಿ ಮಾತನಾಡಿದ ಅವರು, ‘ಉಪ ಚುನಾವಣೆಯಲ್ಲಿ ಪಕ್ಷ ಸೋತಿರಬಹುದು. ಆದರೆ, ಪಕ್ಷದ ಪದಾಧಿಕಾರಿಗಳು ಸೋಲಿನ ಕಹಿಯನ್ನು ಮರೆತು ಈಗಿನಿಂದಲೇ ಪಕ್ಷದ ಸಂಘಟನೆಯಲ್ಲಿ ತೊಡಗಬೇಕು‘ ಎಂದರು.

ರಾಜ್ಯದಲ್ಲಿ ನೂತನ ಮುಖ್ಯಮಂತ್ರಿಯಾಗಿ ಬಸವರಾಜ ಬೊಮ್ಮಾಯಿ ಇಂದು ಪ್ರಮಾಣ ವಚನ ಸ್ವೀಕರಿಸಿದ್ದಾರೆ. ಅವರು ಉತ್ತಮ ಆಡಳಿತ ನೀಡಲಿದ್ದಾರೆ. ರಾಜ್ಯದಲ್ಲಿ ಹಾಗೂ ಕೇಂದ್ರದಲ್ಲಿ ಬಿಜೆಪಿ ಸರ್ಕಾರ ಇರುವ ಕಾರಣ ಅಭಿವೃದ್ಧಿ ಕೆಲಸಗಳು ವೇಗ ಪಡೆಯಲಿವೆ ಎಂದರು.

ಪಕ್ಷದ ಜಿಲ್ಲಾ ಘಟಕದ ಉಪಾಧ್ಯಕ್ಷ ಅಪ್ಪಾಜಿಗೌಡ ಪಾಟೀಲ, ಜಿಲ್ಲಾ ಘಟಕದ ಪ್ರಧಾನ ಕಾರ್ಯದರ್ಶಿ ಪ್ರಾಣೇಶ ದೇಶಪಾಂಡೆ, ಮಂಡಲ ಅಧ್ಯಕ್ಷ ಶಿವಪುತ್ರಪ್ಪ ಅರಳಹಳ್ಳಿ, ಎಸ್‌ಸಿ ಮೋರ್ಚಾದ ಜಿಲ್ಲಾ ಘಟಕದ ಅಧ್ಯಕ್ಷ ಶರಣಬಸವ ವಕೀಲ, ಮಂಡಲ ಕಾರ್ಯದರ್ಶಿಗಳಾದ ಶರಣಯ್ಯ ಸೊಪ್ಪಿಮಠ, ಮಲ್ಲು ಯಾದವ್, ಯುವ ಮೋರ್ಚಾ ರಾಜ್ಯ ಕಾರ್ಯದರ್ಶಿ ಅಮರೇಶ ರೈತನಗರ, ಮಹಿಳಾ ಕಾರ್ಯದರ್ಶಿ ಶಾರದಾ ರಾಠೋಡ ಸೇರಿದಂತೆ ಪಕ್ಷದ ಪದಾಧಿಕಾರಿಗಳು ಇದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.