ಭಾನುವಾರ, 19 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಮಸ್ಕಿ: 231 ಮತಗಟ್ಟೆಗಳಲ್ಲಿ ಮತದಾನಕ್ಕೆ ಸಿದ್ಧತೆ

Published 6 ಮೇ 2024, 13:33 IST
Last Updated 6 ಮೇ 2024, 13:33 IST
ಅಕ್ಷರ ಗಾತ್ರ

ಮಸ್ಕಿ: ಮಂಗಳವಾರ (ಮೇ 7) ನಡೆಯುವ ಕೊಪ್ಪಳ ಲೋಕಸಭಾ ಚುನಾವಣೆಯಲ್ಲಿ ಮಸ್ಕಿ ಕ್ಷೇತ್ರದ 231 ಮತಗಟ್ಟೆಗಳಲ್ಲಿ ಶಾಂತಿಯುತ ಮತದಾನಕ್ಕೆ ಪೊಲೀಸ್ ಇಲಾಖೆ ಬಿಗಿ ಭದ್ರತೆ ಮಾಡಿಕೊಂಡಿದೆ.

ಒಟ್ಟು 231 ಮತಗಟ್ಟೆಗಳಲ್ಲಿ 48 ಮತಗಟ್ಟೆಗಳು ಸೂಕ್ಷ್ಮ ಹಾಗೂ 183 ಮತಗಟ್ಟೆಗಳನ್ನು ಸಾಮಾನ್ಯ ಎಂದು ಗುರುತಿಸಲಾಗಿದೆ. ಸೂಕ್ಷ್ಮ ಮತಗಟ್ಟೆಗೆ ಒಬ್ಬ ಹೆಡ್ ಕಾನ್‌ಸ್ಟೆಬಲ್ ಹಾಗೂ ಹೋಮ್ ಗಾರ್ಡ್, ಸಾಮಾನ್ಯ ಮತಗಟ್ಟೆಗೆ ಒಬ್ಬ ಹೋಮ್ ಗಾರ್ಡ್ ಸೇವೆಯನ್ನು ಒದಗಿಸಲಾಗಿದೆ.

231 ಮತಗಟ್ಟೆಗಳನ್ನು ಒಳಗೊಂಡು 11 ಸೆಕ್ಟರ್‌ಗಳನ್ನು ರಚಿಸಲಾಗಿದೆ. ಒಬ್ಬ ಹೆಡ್ ಕಾನ್‌ಸ್ಟೆಬಲ್ ಸೇರಿ 10 ಸಬ್ ಇನ್ ಸ್ಪೆಕ್ಟರ್‌ಗಳನ್ನು ನಿಯೋಜನೆ ಮಾಡಲಾಗಿದೆ.

ಶಾಂತಿಯುತ ಮತದಾನಕ್ಕೆ ಮುಂದಾಗಿರುವ ಪೊಲೀಸ್ ಇಲಾಖೆ ಒಬ್ಬ ಡಿವೈಎಸ್ಪಿ ಹಾಗೂ ನಾಲ್ಕು ಜನ ಸಿಪಿಐ, 106 ಹೋಮ್ ಗಾರ್ಡ್ ಸೇರಿ 390 ಜನ ಪೊಲೀಸರನ್ನು ಬಳಸಿಕೊಳ್ಳಲಾಗುತ್ತಿದೆ ಎಂದು ಸರ್ಕಲ್ ಇನ್‌ಸ್ಪೆಕ್ಟರ್ ಮಲ್ಲಿಕಾರ್ಜುನ ಇಕ್ಕಳಗಿ ‘ಪ್ರಜಾವಾಣಿ’ ಗೆ ತಿಳಿಸಿದ್ದಾರೆ. ಇದರ ಜೊತೆ 20 ಜನರ ಅರೆ ಸೇನಾ ಪಡೆ ತಂಡ, ಒಂದು ಕೆಎಸ್ಆರ್‌ಪಿ, ಒಂದು ಜಿಲ್ಲಾ ಕಾಯ್ದಿಟ್ಟ ಮೀಸಲು ತುಕಡಿಯನ್ನು ಬಳಕೆ ಮಾಡಿಕೊಳ್ಳಲಾಗುತ್ತಿದೆ ಎಂದು ತಿಳಿಸಿದ್ದಾರೆ.

ಮತದಾನ ಸಂದರ್ಭದಲ್ಲಿ ಅಹಿತಕರ ಘಟನೆಗಳು ನಡೆಯದಂತೆ ಮುಂಜಾಗ್ರತಾ ಕ್ರಮ ಕೈಗೊಳ್ಳಲಾಗಿದೆ. ಸಾರ್ವಜನಿಕರು ಗಾಳಿ ಸುದ್ದಿಗಳಿಗೆ ಕಿವಿಗೊಡದೆ ಶಾಂತಿಯುತ ಮತದಾನಕ್ಕೆ ಸಹಕರಿಸಬೇಕು ಎಂದು ಮನವಿ ಮಾಡಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT