ಭಾನುವಾರ, 5 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕಲ್ಲಡ್ಕ ಪ್ರಭಾಕರ್ ವಿರುದ್ಧ ಕ್ರಮಕ್ಕೆ ಒತ್ತಾಯ: ಸರ್ಕಾರಕ್ಕೆ ಮನವಿಪತ್ರ ಸಲ್ಲಿಕೆ

Published 26 ಡಿಸೆಂಬರ್ 2023, 16:10 IST
Last Updated 26 ಡಿಸೆಂಬರ್ 2023, 16:10 IST
ಅಕ್ಷರ ಗಾತ್ರ

ರಾಯಚೂರು: ಮುಸ್ಲಿಂ ಮಹಿಳೆಯರ ಬಗ್ಗೆ ತುಚ್ಯವಾಗಿ, ಅವಹೇಳನಕಾರಿ ಹೇಳಿಕೆ ನೀಡಿದ ಬಿಜೆಪಿ ಮುಖಂಡ ಕಲ್ಲಡ್ಕ ಪ್ರಭಾಕರ್ ಭಟ್ ವಿರುದ್ಧ ಕ್ರಿಮಿನಲ್ ಪ್ರಕರಣ ದಾಖಲಿಸಿ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಮುಸ್ಲಿಂ ಮುಖಂಡರು ಒತ್ತಾಯಿಸಿದ್ದಾರೆ.

ಡಿಸೆಂಬರ್ 24ರಂದು ಮಂಡ್ಯ ಜಿಲ್ಲೆಯ ಶ್ರೀರಂಗಪಟ್ಟಣ ನಗರದಲ್ಲಿ ಹನುಮಮಾಲಾ ವಿಸರ್ಜನೆ ಮತ್ತು ಸಂಕೀರ್ತನಾ ಯಾತ್ರೆಯ ಅಂಗವಾಗಿ ನಡೆದ ಸಭೆಯಲ್ಲಿ ಕಲ್ಲಡ್ಕ ಪ್ರಭಾಕರ್ ಭಟ್  ಮುಸ್ಲಿಂ ಮಹಿಳೆಯರ ಬಗ್ಗೆ ಕೀಳಾಗಿ ಮಾತನಾಡಿದ್ದಾನೆ., ಇವರ ಭಾಷಣ ರಾಜ್ಯದ ಎಲ್ಲ ದೃಶ್ಯ ಮಾಧ್ಯಮದಲ್ಲಿ ಪ್ರಸಾರವಾಗಿದೆ ಹಾಗೂ ಮುದ್ರಣ ಮಾಧ್ಯಮದಲ್ಲಿ ಪ್ರಕಟವಾಗಿದೆ. ಇದರಿಂದ ಸಮಾಜದ ಮಹಿಳೆಯರಿಗೆ ಮತ್ತು ಇಡೀ ಸಮಾಜಕ್ಕೆ ಮಾಡಿದ ಅವಮಾನವಾಗಿದೆ ಎಂದು ದೂರಿದ್ದಾರೆ.

ಮಹಿಳೆಯರ ಘನತೆಗೆ ಧಕ್ಕೆ ಉಂಟು ಮಾಡಿ ಧರ್ಮಗಳ ನಡುವೆ ವೈಷಮ್ಯ ಉಂಟು ಮಾಡಿ, ದೊಂಬಿ,  ಗಲಭೆಗಳನ್ನುಂಟು ಮಾಡುವ ಉದ್ದೇಶದಿಂದ ಮಾತನಾಡಿದ್ದಾರೆ. ಕೂಡಲೇ ಪ್ರಭಾಕರ್ ಭಟ್ ಹಾಗೂ ಸಂಘಟಕರ ವಿರುದ್ಧ ಕ್ರಿಮಿನಲ್ ಮುಖದ್ದಮೆ ದಾಖಲಿಸಬೇಕು ಎಂದು ಮನವಿ ಮಾಡಿದ್ದಾರೆ.

ದೇಶದಲ್ಲಿ ದ್ವೇಷ ಭಾಷಣ ಮಾಡುವ ಯಾವುದೇ ವ್ಯಕ್ತಿ ಅಥವಾ ಸಂಘಟನೆಗಳ ವಿರುದ್ಧ ಪೊಲಿಸರು ಸ್ವಯಂಪ್ರೇರಿತ ದೂರು ದಾಖಲಿಸಿಕೊಂಡು ಕ್ರಮ ಜರುಗಿಸಬೇಕು ಎಂದು ರಾಜ್ಯ ಸರ್ಕಾರಗಳಿಗೆ ಸೂಚನೆ ನೀಡಿದರೂ ಇದುವರೆಗೆ ಪೊಲೀಸರು ದೂರು ದಾಖಲಿಸಿಕೊಂಡಿಲ್ಲ ಎಂದು ದೂರಿದ್ದಾರೆ.

ಮುಸ್ಲಿಮ ಮುಖಂಡರು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ನಿಖಿಲ್ ಬಿ ಅವರ ಮೂಲಕ ರಾಜ್ಯ ಸರ್ಕಾರಕ್ಕೆ ಮನವಿ ಸಲ್ಲಿಸಿದರು.

ಮುಖಂಡರಾದ ರಜಾಕ್ ಉಸ್ತಾದ್, ಎಂ.ಎ ರಹೀಂ ಖುರೇಷಿ, ಮೊಹಮ್ಮದ್ ಅಜೀಜ್, ಸೈಯದ್ ಅಮೀನುಲ್ ಹುಸೇನ್, ಸೈಯದ್ ಖೈಸರ್ ಹುಸೇನಿ ಉಪಸ್ಥಿತರಿದ್ದರು.


ಸಿಪಿಐಎಂ ಖಂಡನೆ:

ಮುಸ್ಲಿಂ ಮಹಿಳೆಯರನ್ನು ನಿಂದಿಸಿದ ಹಾಗೂ ಸೌಹಾರ್ಧತೆಗೆ ಭಂಗ ಉಂಟು ಮಾಡುವ  ಪ್ರಚೋದನಾಕಾರಿ ಹೇಳಿಕೆ ನೀಡಿದ ಕಲ್ಲಡ್ಕ ಪ್ರಭಾಕರ್ ಭಟ್ ನನ್ನು ಕೂಡಲೇ ಬಂಧಿಸಬೇಕು ಎಂದು ಭಾರತ ಕಮ್ಯೂನಿಸ್ಟ್ ಪಕ್ಷ (ಮಾರ್ಕ್ಸ್ ವಾದಿ) ಜಿಲ್ಲಾ ಘಟಕದ ಕಾರ್ಯದರ್ಶಿ ಕೆ.ಜಿ ವೀರೇಶ ಒತ್ತಾಯಿಸಿದ್ದಾರೆ.

ಶ್ರೀ ರಂಗಪಟ್ಟಣದ ಸಮಾವೇಶದಲ್ಲಿ  ಬಿಜೆಪಿ ಮುಖಂಡ ಕಲ್ಲಡ್ಕ ಪ್ರಭಾಕರ್ ಭಟ್ ಅವಹೇಳನಕಾರಿ ಹೇಳಿಕೆ ನೀಡಿದ್ದು ಕೀಳುಮಟ್ವವನ್ನು ತೋರಿಸುತ್ತದೆ. ದಕ್ಷಿಣ ಕರ್ನಾಟಕದ ಮತ್ತು ಮೈಸೂರು ಭಾಗದಲ್ಲಿನ ಶಾಂತಿಯ ವಾತಾವರಣವನ್ನು ಕದಡಲು ವಹಿಸುತ್ತಿರುವ ಕೋಮುವಾದಿಗಳ ಸಂಚಿನ ಮುಂದುವರಿಕೆಯ ಭಾಗವಾಗಿದೆ ಎಂಬುವುದನ್ನು ಎಲ್ಲ ಪ್ರಗತಿಪರರು ಹಾಗೂ ಪ್ರಜಾಪ್ರಭುತ್ವವಾದಿಗಳು ಗಮನಿಸಬೇಕು ಎಂದು ಪತ್ರಿಕಾ ಹೇಳಿಕೆಯಲ್ಲಿ ಮನವಿ ಮಾಡಿದ್ದಾರೆ.

ರಾಜ್ಯದ ಸೌಹಾರ್ಧತೆಗೆ ಧಕ್ಕೆ ತರುತ್ತಿರುವ ಮತ್ತು ಅಲ್ಪಸಂಖ್ಯಾತರನ್ನು ನಿಂದಿಸುತ್ತಿರುವ ಪ್ರಕರಣಗಳನ್ನು ಗಂಭೀರವಾಗಿ ಪರಿಗಣಿಸದ ರಾಜ್ಯ ಸರ್ಕಾರದ ನಡೆ ನಾಚಿಕೆಗೇಡಿನ ಸಂಗತಿ. ಸರ್ಕಾರದ ಮೌನ, ಆರೋಪಿಗಳಿಗೆ ಸಮ್ಮತಿಯಂತಿದೆ. ಕೂಡಲೇ ಸುಮೊಟೋ ಕೇಸ್ ದಾಖಲಿಸಬೇಕು ಎಂದು ಒತ್ತಾಯಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT