ದೇವದುರ್ಗ: ಮುತ್ತಪ್ಪ ರೈ ಪುತ್ರ ರಿಕ್ಕಿ ರೈ ಮೇಲೆ ಗುಂಡಿನ ದಾಳಿ ಖಂಡಿಸಿ, ಆರೋಪಿಗಳನ್ನು ಬಂಧಿಸುವಂತೆ ಒತ್ತಾಯಿಸಿ ಜಯ ಕರ್ನಾಟಕ ಸಂಘಟನೆಯ ಕಾರ್ಯಕರ್ತರು ಬುಧವಾರ ಪಟ್ಟಣದಲ್ಲಿ ಪ್ರತಿಭಟನೆ ನಡೆಸಿದರು.

ತಾಲ್ಲೂಕು ಘಟಕ ಅಧ್ಯಕ್ಷ ಯಲ್ಲಗೌಡ ಇರಬಗೇರಾ ನೇತೃತ್ವದಲ್ಲಿ ಪ್ರತಿಭಟನೆ ನಡೆಸಿದ ಕಾರ್ಯಕರ್ತರು, ಘಟನೆಗೆ ಆಕ್ರೋಶ ವ್ಯಕ್ತಪಡಿಸಿದರು. ತಪ್ಪಿತಸ್ಥರನ್ನು ಬಂಧಿಸುವಂತೆ ತಹಶೀಲ್ದಾರ್ ಚನ್ನಮಲ್ಲಪ್ಪ ಘಂಟಿ ಮೂಲಕ ರಾಜ್ಯ ಸರ್ಕಾರಕ್ಕೆ ಮನವಿ ಸಲ್ಲಿಸಿದರು.

‘ರಿಕ್ಕಿ ರೈ ಹತ್ಯೆಗೆ ಯತ್ನಿಸಿದವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಬೇಕು. ತಪ್ಪಿತಸ್ಥರಿಗೆ ಕಠಿಣ ಶಿಕ್ಷೆ ನೀಡಬೇಕು. ರಿಕ್ಕಿ ರೈಗೆ ಸರ್ಕಾರದಿಂದ ಸೂಕ್ತ ಭದ್ರತೆ ನೀಡಬೇಕು’ ಎಂದು ಒತ್ತಾಯಿಸಿದರು.

‘ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಹದಗೆಟ್ಟಿದೆ. ಜನರು ಭಯಭೀತಿಯಿಂದ ಬದುಕುವ ಪರಿಸ್ಥಿತಿ ಎದುರಾಗಿದೆ. ತಕ್ಷಣವೇ ಕಾನೂನು ಸುವ್ಯವಸ್ಥೆ ಕಾಪಾಡಲು ಗೃಹ ಸಚಿವರು ಕ್ರಮ ವಹಿಸಬೇಕು. ಇಲ್ಲದಿದ್ದರೆ ಮುಂದಿನ ದಿನಗಳಲ್ಲಿ ಉಗ್ರ ಹೋರಾಟ ಮಾಡುತ್ತೇವೆ’ ಎಂದು ಸಂಘಟಕರು ಎಚ್ಚರಿಕೆ ನೀಡಿದರು.

ನಗರ ಘಟಕದ ಅಧ್ಯಕ್ಷ ಅಮರೇಶ ಚೌಹಾಣ್, ಜಾಧವ್, ಸಾಬಗೌಡ, ಮಾಧವರಾವ್ ಉಭಾಳೆ, ಶಿವಕುಮಾರ, ಹನುಮಂತ್ರಾಯ, ಶಂಕರ ಗುತ್ತೆದಾರ, ರಂಗುನಾಯಕ, ಮಲ್ಲಪ್ಪ ಬೇಣಕಲ್, ಯಲ್ಲಗೌಡ ಆಕಳಕುಂಪಿ, ಸುನಿಲ ಕುಮಾರ, ಬಸವರಾಜ ಸುಣ್ಣದಕಲ್ ಸಂಗು ಕಲ್ಲೂರು ಮತ್ತು ಜುಬೇರಾ ಭಾಗವಹಿಸಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.