ಭಾನುವಾರ, ಜನವರಿ 17, 2021
22 °C

ಮಡಿವಾಳ ಮಾಚಿದೇವ ಅಭಿವೃದ್ಧಿ ನಿಗಮದ ಅಧ್ಯಕ್ಷರಾಗಿ ಎನ್.ಶಂಕ್ರಪ್ಪ ನೇಮಕ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ರಾಯಚೂರು: ಬಿಜೆಪಿ ಹಿರಿಯ ಮುಖಂಡ ಎನ್.ಶಂಕ್ರಪ್ಪ ಅವರನ್ನು ಮಡಿವಾಳ ಮಾಚಿದೇವ ಅಭಿವೃದ್ಧಿ ನಿಗಮದ ಅಧ್ಯಕ್ಷರನ್ನಾಗಿ ಸರ್ಕಾರ ನೇಮಕ ಮಾಡಿದೆ.

ಕೇಂದ್ರ ಸರ್ಕಾರ ಸ್ವಾಮ್ಯದ ಭಾರತೀಯ ಉಕ್ಕು ಪ್ರಾಧಿಕಾರ ನಿಗಮ (ಸೇಲ್)ಕ್ಕೆ ಒಂದೂವರೆ ವರ್ಷದಿಂದ ನಿರ್ದೇಶಕರೂ ಆಗಿದ್ದಾರೆ. 2011ರಲ್ಲಿ ವಿಧಾನ ಪರಿಷತ್ ಸದಸ್ಯ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿ ಡಿ.ವಿ. ಸದಾನಂದಗೌಡ ಅವರಿಗೆ ಬಿಟ್ಟುಕೊಟ್ಟಿದ್ದರು. ಪಕ್ಷದ ಸಂಘಟನೆಯಲ್ಲಿ ಸಕ್ರಿಯವಾಗಿ ತೊಡಗಿಸಿಕೊಂಡು ಬಂದಿದ್ದಾರೆ.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಈ ವಿಭಾಗದಿಂದ ಇನ್ನಷ್ಟು