ಸೋಮವಾರ, ಮೇ 23, 2022
21 °C

ಗ್ರಾಪಂ ಅಧ್ಯಕ್ಷರಿಗೆ ಕಾರು ಸೌಲಭ್ಯಕ್ಕೆ ಸಿಎಂಗೆ ಸಲಹೆ: ನಳಿನ್ ಕುಮಾರ್ ಕಟೀಲ್

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಸಿರವಾರ (ರಾಯಚೂರು): ‘ಬೇರೆ ಸ್ಥಳೀಯ ಸಂಸ್ಥೆಗಳ ಅಧ್ಯಕ್ಷರಿಗೆ ನೀಡುವ ಸೌಲಭ್ಯದ ರೀತಿಯಲ್ಲೇ ಗ್ರಾಮ ಪಂಚಾಯಿತಿ ಅಧ್ಯಕ್ಷರಿಗೂ ಕಾರುಗಳನ್ನು ನೀಡಬೇಕು. ಪ್ರತಿಯೊಬ್ಬ ಸದಸ್ಯರಿಗೂ ₹10 ಸಾವಿರ ಗೌರವಧನ ಕೊಟ್ಟು ಸ್ವಾಭಿಮಾನ ಹೆಚ್ಚಿಸಬೇಕು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರಿಗೆ ಸಲಹೆ ನೀಡಿದ್ದೇನೆ’ ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಹೇಳಿದರು.

ಸಿರವಾರ ಪಟ್ಟಣದಲ್ಲಿ ಶುಕ್ರವಾರ ಆಯೋಜಿಸಿದ್ದ ಜನಸ್ವರಾಜ್‌ ಸಮಾವೇಶ ಉದ್ಘಾಟಿಸಿ ಮಾತನಾಡಿದರು.

‘ಮುಖ್ಯಮಂತ್ರಿ ಈಗಾಗಲೇ ರಾಜ್ಯದ 750 ಗ್ರಾಮಗಳನ್ನು ಅಮೃತ ಯೋಜನೆಯಡಿ ಅಭಿವೃದ್ಧಿ ಮಾಡುತ್ತಿದ್ದಾರೆ. ಮುಂಬರುವ ಬಜೆಟ್‌ನಲ್ಲಿ ರಾಜ್ಯದ ಎಲ್ಲ 5,500 ಗ್ರಾಮಗಳಿಗೂ ಅಮೃತ‌ಯೋಜನೆ ವಿಸ್ತರಿಸುವುದಕ್ಕೆ ಕೋರಲಾಗಿದೆ. ಗ್ರಾಮ ಪಂಚಾಯಿತಿಗಳನ್ನು ಕೇರಳ ಮಾದರಿಯಲ್ಲಿ ಅಭಿವೃದ್ಧಿ ಮಾಡುವುದಕ್ಕೆ ಬಿಜೆಪಿ ಯೋಜಿಸಿದೆ’ ಎಂದು ತಿಳಿಸಿದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು