ರಾಯಚೂರು: ರಾಷ್ಟ್ರೀಯ ಡೆಂಗಿ ದಿನಾಚರಣೆ ಪ್ರಯುಕ್ತ ನಗರ ಸೇರಿದಂತೆ ಜಿಲ್ಲೆಯ ವಿವಿಧೆಡೆ ಶುಕ್ರವಾರ ಡೆಂಗಿ ಜನಜಾಗೃತಿ ರ್ಯಾಲಿ ನಡೆಯಿತು.

ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಜಿಲ್ಲಾ ರೋಗವಾಹಕ ಆಶ್ರೀತ ರೋಗಗಳ ನಿಯಂತ್ರಣ ವಿಭಾಗ ವತಿಯಿಂದ ನಗರದಲ್ಲಿ ಆಯೋಜಿಸಿದ್ದ
ರ್ಯಾಲಿಗೆ ಪ್ರಭಾರಿ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಡಾ.ಗಣೇಶ ಚಾಲನೆ ನೀಡಿದರು.

‘ಡೆಂಗಿ ರೋಗ ನಿಯಂತ್ರಣಕ್ಕಾಗಿ ಸೊಳ್ಳೆ ಉತ್ಪತ್ತಿ ತಾಣಗಳ ನಿರ್ಮೂಲನೆ ಮಾಡಬೇಕು. ಸೊಳ್ಳೆ ಕಡಿತದಿಂದ ರಕ್ಷಣೆ ಪಡೆಯಬೇಕು. ಪರಿಶೀಲನೆ, ಸ್ವಚ್ಚಗೊಳಿಸಿ, ಮುಚ್ಚಿಡಿ ಎಂಬ ಧ್ಯೇಯ ವಾಕ್ಯದೊಂದಿಗೆ ರಾಷ್ಟ್ರೀಯ ಡೆಂಗಿ ದಿನ ಆಚರಿಸಲಾಗುತ್ತಿದೆ. ಸೊಳ್ಳೆಗಳ ನಿಯಂತ್ರಣವೊಂದೇ ಡೆಂಗೆ ರೋಗದ ಹತೋಟಿಗೆ ಮುಖ್ಯ ವಿಧಾನ’ ಎಂದು ತಿಳಿಸಿದರು.

ರ್ಯಾಲಿಯಲ್ಲಿ ಡೆಂಗಿ, ಚಿಕುನ್ಗುನ್ಯ ಅರಿವು ಮೂಡಿಸುವ ಫಲಕಗಳು ಗಮನ ಸೆಳೆದವು.

ಸೊಳ್ಳೆ ಜನಿತ ರೋಗಗಳಾದ ಚಿಕುನ್ ಗುನ್ಯ, ಆನೆ ಕಾಲು ರೋಗ, ಮಲೇರಿಯಾ ರೋಗಗಳನ್ನು ನಿಯಂತ್ರಿಸಬಹುದು ಎನ್ನುವ ಮಾಹಿತಿಯನ್ನು ಧ್ವನಿವರ್ಧಕಗಳ ಮೂಲಕ ನೀಡಲಾಯಿತು.

ರಾಷ್ಟ್ರೀಯ ಡೆಂಗಿ ದಿನಾಚರಣೆಯ ಅಂಗವಾಗಿ ಆಯೋಜಿಸಿದ್ದ ಜಾಥಾವು ಬೆಳಿಗ್ಗೆ ನಗರದ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿಗಳ ಕಚೇರಿ ಆವರಣದಿಂದ ಪ್ರಾರಂಭವಾಗಿ ಭಗತ್ಸಿಂಗ್ ವೃತ್ತದ ಮಾರ್ಗವಾಗಿ ತೀನ್ಕಂದಿಲ್, ಉಸ್ಮಾನಿಯಾ ತರಕಾರಿ ಮಾರುಕಟ್ಟೆ ಮೂಲಕ ಮಹಾವಿರ ವೃತ್ತದವರೆಗೆ ಬಂದು ಮುಕ್ತಾಯಗೊಂಡಿತು.

ಜಿಲ್ಲಾ ಆರ್.ಸಿ.ಎಚ್ ಅಧಿಕಾರಿ ಡಾ.ನಂದಿತಾ, ಜಿಲ್ಲಾ ವಿಬಿಡಿಸಿ ಅಧಿಕಾರಿ ಡಾ.ಚಂದ್ರಶೇಖರಯ್ಯ, ಜಿಲ್ಲಾ ಕ್ಷಯರೋಗ ನಿಯಂತ್ರಣಾಧಿಕಾರಿ ಡಾ.ಎಂ.ಡಿ.ಶಾಕೀರ್, ಮನೋರೊಗ ತಜ್ಞ ಡಾ.ಮನೊಹರ್ ಪತ್ತಾರ್, ಸಂಧ್ಯಾ ನಾಯಕ, ವಿವಿಧ ಪ್ರಾಥಮಿಕ ಆರೋಗ್ಯ ಕೇಂದ್ರದ ವೈದ್ಯಾಧಿಕಾರಿಗಳು, ಸಿಬ್ಬಂದಿ ಪಾಲ್ಗೊಂಡಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.