ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಶಕ್ತಿನಗರ: ರಾಷ್ಟ್ರೀಯ ಪೋಷಣ್ ಮಾಸಾಚರಣೆ

Last Updated 2 ಸೆಪ್ಟೆಂಬರ್ 2021, 13:18 IST
ಅಕ್ಷರ ಗಾತ್ರ

ಶಕ್ತಿನಗರ: ‘ರಾಷ್ಟ್ರೀಯ ಪೋಷಣ್ ಯೋಜನೆಯಡಿ ಸಿಗುವ ಸೌಲತ್ತುಗಳನ್ನು ಅರ್ಹ ಫಲಾನುಭವಿಗಳು ಸದುಪಯೋಗ ಪಡೆದುಕೊಳ್ಳಬೇಕು‘ ಎಂದು ಅಂಗನವಾಡಿ ಮೇಲ್ವಿಚಾರಕಿ ನಿರ್ಮಲ ಹೇಳಿದರು.

ರಾಯಚೂರು ಜಿಲ್ಲಾ ಪಂಚಾಯಿತಿ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಸಮಗ್ರ ಶಿಶು ಅಭಿವೃದ್ಧಿ ಯೋಜನೆ, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಗ್ರಾಮೀಣ ಅಭಿವೃದ್ಧಿ ಮತ್ತು ಪಂಚಾಯಿತಿ ರಾಜ್ ಇಲಾಖೆ, ಶಿಕ್ಷಣ ಇಲಾಖೆ ಸಹಯೋಗದಲ್ಲಿ ದೇವಸೂಗೂರು ಗ್ರಾಮದಲ್ಲಿ ಗುರುವಾರ ನಡೆದ ರಾಷ್ಟ್ರೀಯ ಮಾಸಾಚರಣೆ ಕಾರ್ಯಕ್ರಮದಲ್ಲಿ ಮಾತನಾಡಿದರು.

ಅಪೌಷ್ಟಿಕತೆಯನ್ನು ಹೋಗಲಾಡಿಸುವುದೇ ಪೋಷಣ್ ಅಭಿಯಾನ ಯೋಜನೆಯ ಉದ್ದೇಶ. ಸರ್ಕಾರದ ಯೋಜನೆಗಳನ್ನು ಪ್ರತಿಯೊಬ್ಬರೂ ಸದ್ಭಳಕೆ ಮಾಡಿಕೊಳ್ಳಬೇಕು ಎಂದರು.

ವೇದಿಕೆಯಲ್ಲಿ ದೇವಸೂಗೂರು ಗ್ರಾಮ ಪಂಚಾಯಿತಿ ಉಪಾಧ್ಯಕ್ಷೆ ಮಹಾದೇವಿ ದೇಸಾಯಿ, ಪಿಡಿಒ ರವಿಕುಮಾರ, ಗ್ರಾಮ ಪಂಚಾಯಿತಿ ಸದಸ್ಯರು, ಅಂಗನವಾಡಿ ಕಾರ್ಯಕರ್ತೆರು, ಆಶಾ ಕಾರ್ಯಕರ್ತೆಯರು, ಸ್ತ್ರೀ ಶಕ್ತಿ ಸಂಘದ ಸದಸ್ಯರು ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT