ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಜಿಲ್ಲೆಯಲ್ಲಿ ಏಡ್ಸ್ ಜಾಗೃತಿ ಮೂಡಿಸಿ

ವಿಶ್ವ ಏಡ್ಸ್ ದಿನಾಚರಣೆ: ನ್ಯಾ. ಬೈಲೂರು ಶಂಕರರಾಮ ಸಲಹೆ
Last Updated 2 ಡಿಸೆಂಬರ್ 2019, 16:03 IST
ಅಕ್ಷರ ಗಾತ್ರ

ರಾಯಚೂರು: ಏಡ್ಸ್‌ನಲ್ಲಿ ರಾಯಚೂರು ಜಿಲ್ಲೆ ನಾಲ್ಕನೇ ಸ್ಥಾನದಲ್ಲಿರುವುದು ಅತ್ಯಂತ ನೋವಿನ ಸಂಗತಿ. ಈ ಬಗ್ಗೆ ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸಿ, ಅದನ್ನು ನಿರ್ಮೂಲನೆ ಮಾಡಬೇಕು ಎಂದು ಜಿಲ್ಲಾ ಪ್ರಧಾನ ಮತ್ತು ಸತ್ರ ನ್ಯಾಯಾಧೀಶ ಬೈಲೂರು ಶಂಕರರಾಮ ಹೇಳಿದರು.

ನಗರದ ಜಿಲ್ಲಾಧಿಕಾರಿ ಕಚೇರಿ ಆವರಣದಲ್ಲಿ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಸೇರಿದಂತೆ ಹಲವು ಸಂಘ ಸಂಸ್ಥೆಗಳಿಂದ ವಿಶ್ವ ಏಡ್ಸ್ ದಿನಾಚರಣೆ ಅಂಗವಾಗಿ ಸೋಮವಾರ ಹಮ್ಮಿಕೊಂಡಿದ್ದ ಜಾಗೃತಿ ಜಾಥಾಗೆ ಚಾಲನೆ ನೀಡಿ ಮಾತನಾಡಿದರು.

ಜಿಲ್ಲೆಯಲ್ಲಿ ಏಡ್ಸ್ ರೋಗವನ್ನು ಸಂಪೂರ್ಣ ನಿಯಂತ್ರಿಸಲು ಜನರಲ್ಲಿ ಅರಿವು ಮೂಡಿಸುವುದು ಅತಿ ಅವಶ್ಯಕ. ಏಡ್ಸ್‌ ರೋಗದಲ್ಲಿ ಜಿಲ್ಲೆ ರಾಜ್ಯದಲ್ಲಿಯೇ ನಾಲ್ಕನೇ ಸ್ಥಾನದಲ್ಲಿದೆ. ಅಲ್ಲಿಂದ ಶೂನ್ಯಕ್ಕೆ ತರಲು ಜನರಲ್ಲಿ ಹೆಚ್ಚು ಜಾಗೃತಿ ಮೂಡಿಸುವ ಕೆಲಸ ಆಗಬೇಕಿದೆ ಎಂದರು.

ಆಧುನಿಕ ಜಗತ್ತಿನಲ್ಲಿ ಹಲವರು ಏಡ್ಸ್ ಸೊಂಕಿಗೆ ಬಲಿಯಾಗುತ್ತಿರುವುದನ್ನು ಅನೇಕ ಅಂಕಿ ಸಂಖೈಗಳಿಂದ ತಿಳಿದುಕೊಳ್ಳಬಹುದು. ಅಸುರಕ್ಷಿತ ಲೈಂಗಿಕ ಕ್ರಿಯೆಯಿಂದ ಏಡ್ಸ್ ಹರುಡುವ ಲಕ್ಷಣಗಳಿವೆ. ಏಡ್ಸ್ ಬಗ್ಗೆ ಜನರಲ್ಲಿ ಜಾಗೃತಿ ಮೂಡಿಸಿದ ಮಾತ್ರ ಇದನ್ನು ನಿಯಂತ್ರಿಸಲು ಸಾಧ್ಯ ಎಂದು ತಿಳಿಸಿದರು.

ಜಿಲ್ಲಾಧಿಕಾರಿ ಕಚೇರಿಯಿಂದ ಜಾಥಾ ಆರಂಭವಾಗಿ ನಗರದ ವಿವಿಧ ವೃತ್ತಗಳ ಮೂಲಕ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಕಚೇರಿಗೆ ತಲುಪಿತು. ಜಾಥಾ ಜನಜಾಗೃತಿ ಘೋಷಣೆಗಳನ್ನು ಕೂಗಲಾಯಿತು.

ಹೆಚ್ಚುವರಿ ಜಿಲ್ಲಾಧಿಕಾರಿ ದುರುಗೇಶ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ.ಸಿ.ಬಿ. ವೇದಮೂರ್ತಿ, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಎಂ.ಸಿ. ನಾಡಗೌಡ, ಜಿಲ್ಲಾ ಆರೋಗ್ಯ ಅಧಿಕಾರಿ ಡಾ.ರಾಮಕೃಷ್ಣ, ಡಾ.ಬಸವರಾಜ್ ಪೀರಾಪುರ, ಡಾ.ವಿಜಯಶಂಕರ, ಡಾ.ಸುರೇಂದ್ರ ಬಾಬು, ಡಾ.ನಾಗರಾಜ, ಡಾ.ವಿಜಯಾ ಕೆ, ಡಾ. ಲಕ್ಷ್ಮೀಭಾಯಿ, ಡಾ.ಗಣೇಶ, ಡಾ.ಎಂ.ಎನ್.ನಂದಿತಾ ಡಾ.ಜಯಂತಿ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT