ರಾಯಚೂರು: ಎಲ್ಲಾ ಇಲಾಖೆಯ ಅಧಿಕಾರಿಗಳು ಸರ್ಕಾರದ ನಿರ್ದೇಶನದಂತೆ ತಂಬಾಕು ಸೇವನೆಯಿಂದ ಆಗುವ ದುಷ್ಪಾರಿಣಾಗಳ ಬಗ್ಗೆ ಶಾಲಾ, ಕಾಲೇಜು ವಿದ್ಯಾರ್ಥಿಗಳಲ್ಲಿ ಹಾಗೂ ಸಾರ್ವಜನಿಕರಲ್ಲಿ ಅರಿವು ಮೂಡಿಸಬೇಕು ಎಂದು ಹೆಚ್ಚುವರಿ ಜಿಲ್ಲಾಧಿಕಾರಿ ದುರುಗೇಶ ಸೂಚಿಸಿದರು.

ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಬುಧವಾರ ಹಮ್ಮಿಕೊಂಡಿದ್ದ ’ತಂಬಾಕು ನಿಯಂತ್ರಣ ಸಭೆಯ’ ಅಧ್ಯಕ್ಷತೆ ವಹಿಸಿ ಮಾತನಾಡಿದರು.

ಶಾಲೆಗಳು ತಂಬಾಕು ನಿಯಂತ್ರಣದ ಬುನಾದಿಯಾಗಿಬೇಕು. ದುಶ್ಚಟಗಳು ಬೆಳೆಯುವ ಹಂತದಲ್ಲೇ ಅವುಗಳನ್ನು ನಿಯಂತ್ರಿಹಿಸಬೇಕು.18 ವಯಸ್ಸಿನ ನಂತರ ಮಕ್ಕಳಿಗೆ ಬುದ್ಧಿಮಟ್ಟ ಬೆಳೆಯುತ್ತದೆ. ಆದರೆ, ಗ್ರಾಮೀಣ ಪ್ರದೇಶಗಳಲ್ಲಿನ ಮಕ್ಕಳು ಶಾಲೆಯ ಆವರಣದಲ್ಲಿ ಹಾಗೂ ಸುತ್ತಮುತ್ತ ಅಂಗಡಿಗಳಲ್ಲಿ ತಂಬಾಕು ಮಾರಾಟ ಮಾಡುವುದರಿಂದ ಬೇರೆಯವರನ್ನು ನೋಡಿ ತಾವು ಸಹ ತಂಬಾಕು ಸೇವನೆ ಮಾಡುತ್ತಾರೆ. ಇದರ ಬಗ್ಗೆ ತಂಬಾಕು ನಿಯಂತ್ರಣ ಕೋಶದವರು ಯಾವ ರೀತಿ ಕ್ರಮಕೈಗೊಳ್ಳುವಿರಿ ಎಂದು ಅಧಿಕಾರಿಗಳನ್ನು ಪ್ರಶ್ನಿಸಿದರು.

ತಂಬಾಕು ನಿಯಂತ್ರಣ ಮಾಡುವಲ್ಲಿ ಶಿಕ್ಷಣ ಇಲಾಖೆ ಪ್ರಮುಖ ಪಾತ್ರವಹಿಸುತ್ತದೆ. ಈ ಕುರಿತಂತೆ ಶಿಕ್ಷಣ ಇಲಾಖೆಯವರು ಪ್ರಾಥಮಿಕ ಹಂತದಿಂದ ಹಿಡಿದು ಕಾಲೇಜು ಮಟ್ಟದ ವಿದ್ಯಾರ್ಥಿಗಳಲ್ಲಿ ಜಾಗೃತಿ ಮೂಡಿಸುವ ಕಾರ್ಯಕ್ರಮ ಕೈಗೊಳ್ಳಬೇಕು. ಶಿಕ್ಷಕರು ವಿದ್ಯಾರ್ಥಿಗಳಿಗೆ ತಂಬಾಕು ಸೇವನೆ ಬಗ್ಗೆ ಪ್ರಶ್ನೆಗಳನ್ನು ಕೇಳಿ ತಿಂಗಳಿಗೊಮ್ಮೆ ರಸಪ್ರಶ್ನೆ ಮತ್ತು ಪ್ರಬಂಧ ಸ್ಪರ್ಧೆಗಳನ್ನು ಏರ್ಪಡಿಸಬೇಕು. ಅಂದಾಗ ಮಾತ್ರ ಮಕ್ಕಳಲ್ಲಿ ಹೆಚ್ಚು ಜಾಗೃತಿ ಮೂಡಿಸಲು ಸಾಧ್ಯವಾಗುತ್ತದೆ ಎಂದರು.

ಗ್ರಾಮ ಹಾಗೂ ಪಟ್ಟಣ ಪಂಚಾಯಿತಿಗಳಲ್ಲಿ ಕೋಟ್ಪಾ ಕಾಯ್ದೆ ಪ್ರಕಾರ ನಿರ್ದೇಶನ ನೀಡಿ, ಸರ್ಕಾರಿ ಕಾರ್ಯಾಲಯಗಳಲ್ಲಿ ತಂಬಾಕು ಸೇವನೆ ಆಗಲಿ ಅಥವಾ ಮಾರಾಟ ಮಳಿಗೆಗಳು ಇದ್ದಲ್ಲಿ ಈ ಕಾಯ್ದೆಯಡಿ ಪ್ರಕರಣ ದಾಖಲಿಸಿ, ದಂಡ ಹಾಕಿ ಎಂದು ಪೊಲೀಸ್ ಇಲಾಖೆಯ ಅಧಿಕಾರಿಗಳಿಗೆ ತಿಳಿಸಿದರು.

ಎಲ್ಲಾ ಇಲಾಖೆಗಳು ಇದರ ಬಗ್ಗೆ ಜಾಗೃತಿವಹಿಸಿ ಕ್ರೀಯಾಶೀಲರಾಗಿ ಹಾಗೂ ವಾರ್ತಾ ಇಲಾಖೆಯವರು ತಂಬಾಕು ನಿಯಂತ್ರಣ ಬಗ್ಗೆ ಮಾಧ್ಯಮಗಳಲ್ಲಿ ವ್ಯಾಪಕ ಪ್ರಚಾರ ಮಾಡಬೇಕು ಎಂದರು.

ಇದಕ್ಕೆ ಪ್ರತಿಕಿಯಿಸಿದ ಸಂಬಂಧಿಸಿದ ಅಧಿಕಾರಿ, ಈ ವರ್ಷದಲ್ಲಿ ಸುಮಾರು 367 ಶಾಲಾ ಕಾಲೇಜುಗಳಿಗೆ ಭೇಟಿ ನೀಡಿ ತಂಬಾಕು ನಿಯಂತ್ರಣ ಬಗ್ಗೆ ಜಾಗೃತಿ ಕಾರ್ಯಕ್ರಮವನ್ನು ಮಾಡಲಾಗಿದೆ. ಶಾಲೆಗಳಲ್ಲಿ ಶಾಲೆ ತಂಬಾಕು ಸಮಿತಿಯನ್ನು ರಚಿಸಿ ಅವರಿಗೆ ತಿಂಗಳಿಗೊಮ್ಮೆ ತರಬೇತಿ ನೀಡಲಾಗುತ್ತಿದೆ. ಶಾಲಾ ಕಾಂಪೌಂಡ್ಗಳ ಮೇಲೆ ಚಿತ್ರಕಲೆ ಬಿಡಿಸಿ ಶಿಕ್ಷಕರು ಈ ಇದರ ಬಗ್ಗೆ ಮಕ್ಕಳಿಗೆ ತಿಳವಳಿಕೆ ಮೂಡಿಸಲು ಸೂಚಿಸಲಾಗಿದೆ ಎಂದು ಸಭೆಗೆ ಮಾಹಿತಿ ನೀಡಿದರು.

ಅಬಕಾರಿ ಉಪನಿರೀಕ್ಷಕ ಬಸವರಾಜ, ಪ್ರವಾಸೋದ್ಯಮ ಇಲಾಖೆ ನಿರ್ದೇಶಕ ವಿಶ್ವನಾಥ, ಶಿಕ್ಷಣಾಧಿಕಾರಿ ಗೋನಾಳ, ತಂಬಾಕು ನಿಯಂತ್ರಣ ಕೋಶದ ಅಧಿಕಾರಿಗಳು ಸೇರಿದಂತೆ ವಿವಿಧ ಇಲಾಖೆಯ ಅಧಿಕಾರಿಗಳು ಇದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.