ಮಂಗಳವಾರ, ಜನವರಿ 21, 2020
20 °C

ಬೋಧನಾ ವಿಧಾನದಲ್ಲಿ ಬದಲಾವಣೆ ಅಗತ್ಯ: ಕುಲಸಚಿವ ಡಾ.ಟಿ.ಶ್ರೀನಿವಾಸ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ರಾಯಚೂರು: ಜಾಗತಿಕ ಬದಲಾವಣೆಯೊಂದಿಗೆ ಶಿಕ್ಷಕರು ತಮ್ಮ ಬೋಧನಾ ವಿಧಾನದಲ್ಲಿ ಬದಲಾವಣೆ ಮಾಡಿಕೊಳ್ಳಬೇಕು ಎಂದು ನವೋದಯ ಮಹಾವಿದ್ಯಾಲಯದ ಕುಲಸಚಿವ ಡಾ.ಟಿ ಶ್ರೀನಿವಾಸ ಹೇಳಿದರು.

ನಗರದ ನವೋದಯ ವಿದ್ಯಾಲಯದಲ್ಲಿ ನವೋದಯ ಶಿಕ್ಷಣ ಸಂಸ್ಥೆಯ ವತಿಯಿಂದ ಸೋಮವಾರ ಹಮ್ಮಿಕೊಂಡಿದ್ದ ಬಿಇಡಿ ಪ್ರಶಿಕ್ಷಣಾರ್ಥಿಗಳಿಗೆ ಎರಡು ದಿನಗಳ ಕಾರ್ಯಾಗಾರ ಉದ್ಘಾಟಿಸಿ ಮಾತನಾಡಿದರು. 

ಡಾ.ವೆಂಕಟರಾವ್ ಮಾತನಾಡಿ, ವಿದ್ಯಾರ್ಥಿ ಶಿಕ್ಷಕರಿಗೆ ಟಿಇಟಿ ಪರೀಕ್ಷೆಗೆ ಹೇಗೆ ಸಿದ್ಧತೆ ನಡೆಸಬೇಕು ಎನ್ನುವುದರ ಬಗ್ಗೆ ತಿಳಿಸಿದರು.

ವಿಜಯಪುರ ಅಕ್ಕಮಹಾದೇವಿ ಮಹಿಳಾ ವಿಶ್ವವಿದ್ಯಾಲಯ ಶಿಕ್ಷಣ ವಿಭಾಗ ಸಹ ಪ್ರಾದ್ಯಾಪಕ ಡಾ.ಪ್ರಕಾಶ್ ಬಡಿಗೇರ ಮಾತನಾಡಿದರು. ಕಾಲೇಜಿನ ಪ್ರಾಂಶುಪಾಲ ಡಾ.ಉಮಾಕಾಂತ ಜಿ ದೇವರಮನಿ ಅಧ್ಯಕ್ಷತೆ ವಹಿಸಿದ್ದರು.

ಕಾಲೇಜಿನ ಬೋಧಕ ಮತ್ತು ಬೋಧಕೇತರ ಸಿಬ್ಬಂದಿ ಇದ್ದರು.

ಪ್ರತಿಕ್ರಿಯಿಸಿ (+)