ಶುಕ್ರವಾರ, 29 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಮಸ್ಕಿ: ನೀಟ್ ಪರೀಕ್ಷೆ ರಾಜ್ಯಕ್ಕೆ ಪ್ರಥಮ

Last Updated 6 ಫೆಬ್ರುವರಿ 2022, 4:12 IST
ಅಕ್ಷರ ಗಾತ್ರ

ಮಸ್ಕಿ: ಮೆಡಿಕಲ್ ವಿಭಾಗದ ನೀಟ್ ಸೂಪರ್ ಸ್ಪೆಷಾಲಿಟಿ ಪರೀಕ್ಷೆಯಲ್ಲಿ ತಾಲ್ಲೂಕಿನ ಬಳಗಾನೂರು ಗ್ರಾಮದ ಮುಕ್ತುಮ್ ನಾಯ್ಕ ರಾಜ್ಯಕ್ಕೆ ಪ್ರಥಮ ಸ್ಥಾನ ಹಾಗೂ ರಾಷ್ಟ್ರಮಟ್ಟದಲ್ಲಿ ಮೂರನೇ ಸ್ಥಾನ ಪಡೆದುಕೊಂಡಿದ್ದಾರೆ. ಫೆಬ್ರುವರಿ 3 ರಂದು ಫಲಿತಾಂಶ ಪ್ರಕಟಗೊಂಡಿದೆ.

ಜನವರಿಯಲ್ಲಿ ನಡೆದ ಮೆಡಿಕಲ್ ನೀಟ್ ಸ್ಪೆಷಾಲಿಟಿ ಪರೀಕ್ಷೆಯ ಎಂಸಿಎಚ್‌ ಗ್ಯಾಸ್ಟ್ರೋ ಎಂಟ್ರಾಲಜಿ ವಿಷಯದಲ್ಲಿ ಈ ಸಾಧನೆ ಮಾಡಿದ್ದಾರೆ.

ಬಳಗಾನೂರು ಗ್ರಾಮದ ಮೋಯಿನ್ ಸಾಬ ನಾಯ್ಕ ಅವರ ಪುತ್ರರಾಗಿರುವ ಡಾ.ಮುಕ್ತುಮ್ ನಾಯ್ಕ 2019-20 ರಲ್ಲಿ ಅಂಡಮಾನ್ ಮತ್ತು ನಿಕೋಬಾರ್ ದ್ವೀಪಗಳಲ್ಲಿ ಆದಿವಾಸಿಗಳ ಸೇವೆಯಲ್ಲಿ ತೊಡಗಿಸಿಕೊಳ್ಳುವ ಜೊತೆಗೆ ನೀಟ್ ಪರೀಕ್ಷೆಬರೆದಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT