ಸೋಮವಾರ, ಸೆಪ್ಟೆಂಬರ್ 28, 2020
23 °C

ಹಟ್ಟಿ ಚಿನ್ನದಗಣಿ: ಚರಂಡಿ ಸ್ವಚ್ಛತೆಗೆ ನಿರ್ಲಕ್ಷ, ನಿವಾಸಿಗಳ ಆಕ್ರೋಶ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಹಟ್ಟಿ ಚಿನ್ನದಗಣಿ: ಯಲಗಟ್ಟಾ ಗ್ರಾಮದಲ್ಲಿ ಸ್ವಚ್ಛತೆ ಎಂಬುವುದೇ ಮಾಯವಾಗಿದೆ. ಇದರಿಂದ ಸಾರ್ವಜನಿಕರು ಸಾಂಕ್ರಾಮಿಕ ಕಾಯಿಲೆಗಳಿಗೆ ತುತ್ತಾಗುತ್ತಿದ್ದು, ಇಲ್ಲಿನ ಸದಸ್ಯರಾಗಲಿ ಅಧಿಕಾರಿಗಳಾಗಲಿ ಕಾಳಜಿ ವಹಿಸುತ್ತಿಲ್ಲ ಎಂದು ಗ್ರಾಮಸ್ಧರು ಆರೋಪಿಸಿದ್ದಾರೆ.

ಯಲಗಟ್ಟಾ ಗ್ರಾಮದ ದಲಿತ ಕಾಲೊನಿಯಲ್ಲಿ ಚರಂಡಿ ನೀರು ರಸ್ತೆ ಹರಿಯುತ್ತಿದ್ದು ಚರಂಡಿ ಸ್ವಚ್ಛತೆ ಮಾಡಿಸಿ ಎಂದು ಅಧಿಕಾರಿಗಳಿಗೆ ಜನಪ್ರತಿನಿಧಿಗಳಿಗೆ ತಿಳಿಸಿದರು. ಕ್ರಮ ಜರುಗಿಸುತ್ತಿಲ್ಲ ಎಂದು ಗ್ರಾಮಸ್ಧರಾದ ರಾಜು, ಅಣ್ಣಯ್ಯ ಆರೋಪ ಮಾಡಿದ್ದಾರೆ. ಯಲಗಟ್ಟಾ ಗ್ರಾಮ ಪಂಚಾಯಿತಿ ಪಿಡಿಒ ಹಾಗೂ ಜನಪ್ರತಿನಿಧಿಗಳ ನಿರ್ಲಕ್ಷದಿಂದ ಗ್ರಾಮದಲ್ಲಿ ಸ್ಚಚ್ಛತೆ ಎಂಬುವುದೇ ಕಾಣುತ್ತಿಲ್ಲ. ಎತ್ತ ನೋಡಿದರೂ ಚರಂಡಿ ನೀರು ರಸ್ತೆ ಮೇಲೆ ಹರಿಯುತ್ತದೆ ಕೋಳಚೆ ನೀರು ನಿಂತು ಸೊಳ್ಳೆಗಳಿಗೆ ಆಹ್ವಾನ ನೀಡುತ್ತಿದ್ದು ಇಲ್ಲಿನ ಜನ ರೋಗ ಹರಡುವ ಭೀತಿಯಲ್ಲಿ ಕಾಲ ಕಳೆಯುದ್ದಾರೆ ಎಂದು ಇಲ್ಲಿನ ಜನ ಅಳಲನ್ನು ತೊರಿಕೊಂಡಿದ್ದಾರೆ.

ಮಳೆ ಬಂದು ಚರಂಡಿ ನೀರು ರಸ್ತೆ ಮೇಲೆ ಹರಿಯುತ್ತಿವೆ. ಇದರಿಂದ ರಸ್ತೆಗಳು ಹದಗೆಟ್ಟು ಹೋಗಿವೆ. ಸ್ವಚ್ಛಗೊಳಿಸುವಂತೆ ವಾರ್ಡ್ ಸದಸ್ಯರಿಗೆ ಮನವಿ ಮಾಡಿದರೂ ತಲೆಕೆಡಿಸಿಕೊಳ್ಳುತ್ತಿಲ್ಲ. ಸಂಬಂದಪಟ್ಟ ಅಧಿಕಾರಿಗಳು ಇತ್ತ ಕಡೆ ಗಮನಹರಿಸಿ ಸಮಸ್ಯೆ ಬಗೆಹರಿಸದಿದ್ದರೆ ಪ್ರತಿಭಟನೆ ಮಾಡುವದಾಗಿ ಆದಪ್ಪ ಯಂಕಪ್ಪ ವೆಂಕಟೇಶ, ಯಲ್ಲಪ್ಪ ಎಚ್ಚರಿಕೆ ನೀಡಿದ್ದಾರೆ.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಈ ವಿಭಾಗದಿಂದ ಇನ್ನಷ್ಟು