ಬುಧವಾರ, ಆಗಸ್ಟ್ 17, 2022
26 °C
ಎನ್‌ಇಕೆಆರ್‌ಟಿಸಿ ರಾಯಚೂರು ವಿಭಾಗದ ನೌಕರರಿಂದ ಪ್ರತಿಭಟನೆ

ಸರ್ಕಾರಿ ಸಾರಿಗೆ ಸ್ಥಗಿತದಿಂದ ಪರದಾಟ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ರಾಯಚೂರು: ಸರ್ಕಾರಿ ನೌಕರರೆಂದು ಪರಿಗಣಿಸುವುದು ಸೇರಿದಂತೆ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ಈಶಾನ್ಯ ರಸ್ತೆ ಸಾರಿಗೆ ನಿಗಮ (ಎನ್‌ಇಕೆಆರ್‌ಟಿಸಿ) ನೌಕರರು ಶುಕ್ರವಾರ ಬಸ್‌ಗಳ ಸಂಚಾರ ಸೇವೆಯನ್ನು ದಿಢೀರ್‌ ಸ್ಥಗಿತಗೊಳಿಸಿ ಪ್ರತಿಭಟನೆ ಆರಂಭಿಸಿದ್ದರಿಂದ. ಪ್ರಯಾಣಿಕರು ಪರದಾಡುವಂತಾಗಿದೆ.

ನಗರದ ಕೇಂದ್ರ ಬಸ್ ನಿಲ್ದಾಣದಲ್ಲಿ ಜಮಾಯಿಸಿದ್ದ ಬಸ್‌ ಚಾಲಕರು ಮತ್ತು ನಿರ್ವಾಹಕರು. ನ್ಯಾಯಕ್ಕಾಗಿ ಒತ್ತಾಯಿಸಿ ಘೋಷಣೆಗಳನ್ನು ಕೂಗಿದರು. ಹಲವು ವರ್ಷಗಳಿಂದ ರಾಜ್ಯ ಸರ್ಕಾರವು ಸಾರಿಗೆ ನೌಕರರ ಬೇಡಿಕೆಗಳಿಗೆ ಸ್ಪಂದಿಸುತ್ತಿಲ್ಲ. ಇದರಿಂದ ನೌಕರರೆಲ್ಲ ಅತಂತ್ರ ಸ್ಥಿತಿಯಲ್ಲಿ ಕೆಲಸ ಮಾಡುವಂತಾಗಿದೆ. ಕೂಡಲೇ ಸರ್ಕಾರವು ಬೇಡಿಕೆಗಳಿಗೆ ಸ್ಪಂದಿಸಬೇಕು ಎಂದು ಒತ್ತಾಯಿಸಿದರು.

‘ಸಾರ್ವಜನಿಕರಿಗೆ ತೊಂದರೆ ಕೊಡಬೇಕು ಎನ್ನುವ ಉದ್ದೇಶದಿಂದ ಪ್ರತಿಭಟನೆ ಆರಂಭಿಸಿಲ್ಲ. ಸಾರಿಗೆ ಸಚಿವರು ಸಮರ್ಪಕವಾಗಿ ಸ್ಪಂದಿಸಿಲ್ಲ. ಸರ್ಕಾರಿ ನೌಕರರೆಂದು ಪರಿಗಣಿಸಿದರೆ ಕೂಡಲೇ ಪ್ರತಿಭಟನೆ ಕೈಬಿಡಲಾಗುವುದು’ ಎಂದು ಬಸ್‌ ಮಹಿಳಾ ನಿರ್ವಾಹಕರು ಅಳಲು ತೋಡಿಕೊಂಡರು.

ಪ್ರಯಾಣಿಕರ ಪರದಾಟ: ಪ್ರತಿಭಟನೆ ಪೂರ್ವ ಮಾಹಿತಿಯಿಲ್ಲದೆ ಬಸ್ ನಿಲ್ದಾಣದತ್ತ ಬಂದಿದ್ದ ಪ್ರಯಾಣಿಕರು ಪರದಾಡುವ ಸ್ಥಿತಿ ಉದ್ಭವವಾಗಿತ್ತು. ಸಿಂಧನೂರು, ಕೊಪ್ಪಳ, ಕರ್ನೂಲ್, ಹೈದರಾಬಾದ್ ಸೇರಿದಂತೆ ವಿವಿಧೆಡೆ ತೆರಳಬೇಕಾಗಿರುವ ಪ್ರಯಾಣಿಕರು ಬಸ್ ಗಾಗಿ ಕಾಯುತ್ತಾ ಕುಳಿತ್ತಿದ್ದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.