ಬುಧವಾರ, ಸೆಪ್ಟೆಂಬರ್ 18, 2019
25 °C

ಜಿಲ್ಲಾಧಿಕಾರಿಯಾಗಿ ಆರ್‌.ವೆಂಕಟೇಶಕುಮಾರ್‌

Published:
Updated:
Prajavani

ರಾಯಚೂರು: ಜಿಲ್ಲೆಯ ನೂತನ ಜಿಲ್ಲಾಧಿಕಾರಿಯಾಗಿ ಆರ್‌.ವೆಂಕಟೇಶಕುಮಾರ್‌ ಅವರು ಶನಿವಾರ ಅಧಿಕಾರ ವಹಿಸಿಕೊಂಡರು.

ಇದೇ ವೇಳೆ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಜಿಲ್ಲೆಯ ಸಮಗ್ರ ಅಭಿವೃದ್ಧಿಗಾಗಿ ಪ್ರಾಮಾಣಿಕವಾಗಿ ಕೆಲಸ ಮಾಡಲಾಗುವುದು. ಎಲ್ಲ ಅಧಿಕಾರಿಗಳ ಮತ್ತು ಜನಪ್ರತಿನಿಧಿಗಳ ಸಹಕಾರ ಇರಬೇಕು ಎಂದು ಕೋರಿದರು.

ಸದ್ಯ ಜಿಲ್ಲೆಯಲ್ಲಿ ಕೃಷ್ಣಾ ಮತ್ತು ತುಂಗಭದ್ರಾ ನದಿಯಲ್ಲಿ ಪ್ರವಾಹ ಇರುವುದರಿಂದ ಅದರ ನಿರ್ವಹಣೆಗೆ ಸೂಕ್ತ ಕ್ರಮ ಜರುಗಿಸಲು ಆದ್ಯತೆ ವಹಿಸುತ್ತೇನೆ. ಪ್ರವಾಹ ಸಂತ್ರಸ್ತರಿಗೆ ಪರಿಹಾರ ಕಲ್ಪಿಸುವ ಕೆಲಸ ಮುಂದುವರಿಸಲಾಗುವುದು ಎಂದು ತಿಳಿಸಿದರು.

ರಾಯಚೂರಿಗೆ ಬರುವ ಮೊದಲು ವೆಂಕಟೇಶಕುಮಾರ್‌ ಅವರು ಕಲಬುರ್ಗಿ ಜಿಲ್ಲಾಧಿಕಾರಿಯಾಗಿದ್ದರು. ರಾಯಚೂರು ಜಿಲ್ಲಾಧಿಕಾರಿಯಾಗಿದ್ದ ಬಿ.ಶರತ್‌ ಅವರು ಕಲಬುರ್ಗಿಗೆ ವರ್ಗಾವಣೆ ಮಾಡಲಾಗಿದೆ.

Post Comments (+)