ಶನಿವಾರ, ಸೆಪ್ಟೆಂಬರ್ 25, 2021
29 °C

ಕೃಷಿ ಸ್ನಾತಕ ಪದವಿ ಪ್ರವೇಶಕ್ಕೆ ಹೊಸ ಮಾರ್ಗಸೂಚಿ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ರಾಯಚೂರು: ಕೃಷಿ ಸ್ನಾತಕ ಪದವಿ ಪ್ರವೇಶಕ್ಕೆ ಹೊಸದಾಗಿ ಮಾರ್ಗಸೂಚಿ ನೀಡಲಾಗಿದ್ದು, ಪ್ರವೇಶಕ್ಕಾಗಿ ಈ ಮೊದಲು ನಡೆಯುತ್ತಿದ್ದ ಪ್ರಾಯೋಗಿಕ ಪರೀಕ್ಷೆ ರದ್ದುಗೊಳಿಸಲಾಗಿದೆ.

ಕೃಷಿಕರು ಮತ್ತು ಕೃಷಿ ಕಾರ್ಮಿಕರ ಕೋಟಾದಡಿ ಪ್ರವೇಶ ಬಯಸುವವರು ಮೂಲ ದಾಖಲಾತಿಗಳನ್ನು ಸ್ಕ್ಯಾನಿಂಗ್‌ ಮಾಡಿ ವಿಶ್ವವಿದ್ಯಾಲಯದ ವೆಬ್‌ಸೈಟ್‌ಗೆ ಅಪ್‌ಲೋಡ್‌ ಮಾಡಬೇಕಾಗುತ್ತದೆ. ದಾಖಲಾತಿಗಳನ್ನು ಪರಿಶೀಲಿಸಿ ಅಂಕಗಳ ಅರ್ಹತೆಯನ್ನು ಆಧರಿಸಿ ಪಟ್ಟಿಯೊಂದನ್ನು ವಿಶ್ವವಿದ್ಯಾಲಯವು ಸಿದ್ಧಪಡಿಸುತ್ತದೆ. ಆನಂತರ ಕರ್ನಾಟಕ ಪರೀಕ್ಷಾ ಪ್ರಾಧಿಕಾರಕ್ಕೆ ಪಟ್ಟಿ ರವಾನಿಸಲಾಗುತ್ತದೆ. ಅಂತಿಮ ಪಟ್ಟಿಯನ್ನು ಪ್ರಾಧಿಕಾರ ಪ್ರಕಟಿಸುತ್ತದೆ.

‘ಕೃಷಿ ಸ್ನಾತಕ ಪದವಿ ಪ್ರವೇಶಕ್ಕೆ ಪ್ರಾಯೋಗಿಕ ಪರೀಕ್ಷೆ ರದ್ದಾಗಿದ್ದು, ಸರ್ಕಾರವು ನೀಡಿರುವ ಹೊಸ ಮಾರ್ಗಸೂಚಿ ಅನುಸರಿಸಲಾಗುವುದು’ ಎಂದು ರಾಯಚೂರು ಕೃಷಿ ವಿಜ್ಞಾನಗಳ ವಿಶ್ವವಿದ್ಯಾಲಯದ ಕುಲಪತಿ ಡಾ.ಕೆ.ಎನ್‌.ಕಟ್ಟಿಮನಿ ತಿಳಿಸಿದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು