ಮಂಗಳವಾರ, 23 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ನೀರಮಾನ್ವಿ: ಮತ್ತೆ ಚಿರತೆ ಪ್ರತ್ಯಕ್ಷ

Last Updated 30 ಜೂನ್ 2022, 13:50 IST
ಅಕ್ಷರ ಗಾತ್ರ

ಮಾನ್ವಿ: ತಾಲ್ಲೂಕಿನ ನೀರಮಾನ್ವಿ ಗ್ರಾಮದಲ್ಲಿ ಗುರುವಾರ ಬೆಳಿಗ್ಗೆ ಚಿರತೆ ಪ್ರತ್ಯಕ್ಷವಾಗಿದೆ. ಅರಣ್ಯ ಇಲಾಖೆಯ ಸಿಬ್ಬಂದಿ ಚಿರತೆಯ ಶೋಧ ಕಾರ್ಯಾಚರಣೆ ಕೈಗೊಂಡಿದ್ದ ಸಂದರ್ಭದಲ್ಲಿ ಗ್ರಾಮದ ಬೆಟ್ಟದಲ್ಲಿ ಚಿರತೆ ಇರುವುದು ದೃಢಪಟ್ಟಿದೆ.

ಆರು ತಿಂಗಳ ಹಿಂದೆ ಗ್ರಾಮದ ಬೆಟ್ಟದಲ್ಲಿ ಚಿರತೆ ಕಂಡ ಬಗ್ಗೆ ಗ್ರಾಮಸ್ಥರು ಅರಣ್ಯ ಇಲಾಖೆಯ ಅಧಿಕಾರಿಗಳಿಗೆ ದೂರು ನೀಡಿದ್ದರು. ಬೆಟ್ಟದಲ್ಲಿ ಚಿರತೆಯ ಹೆಜ್ಜೆ ಗುರುತುಗಳು ಪತ್ತೆಯಾಗಿದ್ದವು. ಬೆಟ್ಟದಲ್ಲಿ ಎರಡು ಚಿರತೆಗಳು ವಾಸಿಸುತ್ತಿವೆ ಎನ್ನುವ ಊಹಾಪೋಹಗಳು ಹಬ್ಬಿದ್ದವು.

ಅರಣ್ಯ ಇಲಾಖೆಯ ಅಧಿಕಾರಿ ರಾಜೇಶ ನಾಯಕ ಮತ್ತು ಸಿಬ್ಬಂದಿ ಚಿರತೆಯನ್ನು ಸೆರೆ ಹಿಡಿಯಲು ನಿರಂತರ ಪ್ರಯತ್ನ ನಡೆಸಿದ್ದರೂ, ಅವರಿಗೆ ಚಿರತೆ ಪ್ರತ್ಯಕ್ಷವಾಗಿ ಕಂಡಿರಲಿಲ್ಲ. ಆದರೂ ಶೋಧ ಕಾರ್ಯಾಚರಣೆ ಮುಂದುವರಿಸಿದ್ದರು.

ಇದೇ ಮೊದಲ ಬಾರಿಗೆ ಚಿರತೆ ಅರಣ್ಯ ಇಲಾಖೆಯ ಸಿಬ್ಬಂದಿಯ ಕಣ್ಣಿಗೆ ಬಿದ್ದಿದೆ. ಈ ಕುರಿತು ಅರಣ್ಯ ಇಲಾಖೆಯ ಮೇಲಧಿಕಾರಿಗಳ ಗಮನಕ್ಕೆ ತಂದಿದ್ದು ಚಿರತೆಯನ್ನು ಸೆರೆ ಹಿಡಿಯಲು ಕಾರ್ಯಾಚರಣೆ ಚುರುಕುಗೊಳಿಸಲಾಗಿದೆ.

ಸ್ಥಳೀಯ ವನ್ಯಜೀವಿ ತಜ್ಞ ಸಲಾವುದ್ದೀನ್, ಹಿರಿಯ ಛಾಯಾಗ್ರಾಹಕ ಜಗನ್ನಾಥ ಚೌದರಿ ಮತ್ತಿತರರು ವಲಯ ಅರಣ್ಯಾಧಿಕಾರಿ ರಾಜೇಶ ನಾಯಕ ಜತೆಗೂಡಿ ಬೆಟ್ಟದಲ್ಲಿ ಚಿರತೆಯ ವಾಸಸ್ಥಳದ ಶೋಧ ಕಾರ್ಯ ನಡೆಸಿದರು.

ಈ ಸಂದರ್ಭದಲ್ಲಿ ಛಾಯಾಗ್ರಹಕ ಜಗನ್ನಾಥ ಚೌದರಿ ಅವರು ಬೆಟ್ಟದ ತುದಿಯಲ್ಲಿ ಚಿರತೆ ಇರುವ ದೃಶ್ಯವನ್ನು ತಮ್ಮ ಕ್ಯಾಮೆರಾದಲ್ಲಿ ಸೆರೆ ಹಿಡಿದಿದ್ದಾರೆ. ಬೆಟ್ಟದಲ್ಲಿ ಚಿರತೆ ಇರುವ ಸುದ್ದಿ ಹರಡುತ್ತಲೇ ಗ್ರಾಮಸ್ಥರು ಆತಂಕಗೊಂಡಿದ್ದಾರೆ.

ವಲಯ ಅರಣ್ಯಾಧಿಕಾರಿ ರಾಜೇಶ ನಾಯಕ ಮಾತನಾಡಿ, ‘ನೀರಮಾನ್ವಿ ಗ್ರಾಮದ ಬೆಟ್ಟದಲ್ಲಿ ಚಿರತೆ ಇರುವುದು ದೃಢಪಟ್ಟಿದೆ. ಈ ಕುರಿತು ಮೇಲಧಿಕಾರಿಗಳ ಗಮನಕ್ಕೆ ತರಲಾಗಿದೆ. ಚಿರತೆ ಸೆರೆ ಹಿಡಿಯಲು ಅಗತ್ಯ ಸಿದ್ಧತೆ ಕೈಗೊಳ್ಳಲಾಗುವುದು. ಗ್ರಾಮಸ್ಥರು ಬೆಟ್ಟದ ಕಡೆಗೆ ತೆರಳದಂತೆ ತಡೆಯಲು ಗ್ರಾಮ ಪಂಚಾಯಿತಿ ವತಿಯಿಂದ ಡಂಗುರ ಸಾರಿ ಜಾಗೃತಿ ಮೂಡಿಸಲಾಗಿದೆ’ ಎಂದು ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT