ಸೋಮವಾರ, 22 ಜುಲೈ 2024
×
ADVERTISEMENT
ಈ ಕ್ಷಣ :
ADVERTISEMENT

ರಾಯಚೂರು ನೂತನ ಜಿಲ್ಲಾಧಿಕಾರಿಯಾಗಿ ನಿತೀಶ್ ಕೆ. ವರ್ಗಾವಣೆ

Published 5 ಜುಲೈ 2024, 4:03 IST
Last Updated 5 ಜುಲೈ 2024, 4:03 IST
ಅಕ್ಷರ ಗಾತ್ರ

ರಾಯಚೂರು: ಜಿಲ್ಲಾಧಿಕಾರಿ ಹಣಕಾಸು ಇಲಾಖೆಯ (ಬಜೆಟ್ ಮತ್ತು ಸಂಪನ್ಮೂಲಗಳು) ಜಂಟಿ ಕಾರ್ಯದರ್ಶಿಯಾದ ನಿತೀಶ್ ಕೆ. ಅವರನ್ನು ವರ್ಗಾವಣೆ ಮಾಡಿ ರಾಯಚೂರು ನೂತನ ಜಿಲ್ಲಾಧಿಕಾರಿಯನ್ನಾಗಿ ನೇಮಕ ಮಾಡಲಾಗಿದೆ.

ನಿತೀಶ್‌ ಅವರು 2015ರ ತಂಡದ ಐಎಎಸ್‌ ಅಧಿಕಾರಿಯಾಗಿದ್ದಾರೆ.

ಜಿಲ್ಲಾಧಿಕಾರಿ ಚಂದ್ರಶೇಖರ ನಾಯಕ ಅವರನ್ನು ರಾಜ್ಯ ಸರ್ಕಾರ ವರ್ಗಾವಣೆ ಮಾಡಿದೆ. ಅವರನ್ನು ವಾಣಿಜ್ಯ ತೆರಿಗೆ ಇಲಾಖೆಯ ಹೆಚ್ವುವರಿ ಆಯುಕ್ತರನ್ನಾಗಿ ನೇಮಕ ಮಾಡಿ ಆದೇಶ ಹೊರಡಿಸಿದೆ.

ಚಂದ್ರಶೇಖರ ನಾಯಕ ಮೂರು ವರ್ಷಗಳಿಂದ ಜಿಲ್ಲಾಧಿಕಾರಿಯಾಗಿದ್ದರು. ಮೂರು ದಿನಗಳ ಅವಧಿಯಲ್ಲಿ ರಾಜ್ಯ ಸರ್ಕಾರ ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ ಇಬ್ಬರನ್ನೂ ವರ್ಗಾವಣೆ ಮಾಡಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT