ಶುಕ್ರವಾರ, 24 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಸಂಗಣ್ಣ ಕರಡಿ ಕಾಂಗ್ರೆಸ್ ಸೇರಿದ್ದರಿಂದ ನಷ್ಟವಿಲ್ಲ: ಜನಾರ್ಧನ ರೆಡ್ಡಿ

Published 18 ಏಪ್ರಿಲ್ 2024, 16:26 IST
Last Updated 18 ಏಪ್ರಿಲ್ 2024, 16:26 IST
ಅಕ್ಷರ ಗಾತ್ರ

ರಾಯಚೂರು: ‘ಕೊಪ್ಪಳದ ಹಾಲಿ ಸಂಸದ ಸಂಗಣ್ಣ ಕರಡಿ ಕಾಂಗ್ರೆಸ್ ಸೇರಿರುವುದರಿಂದ ಬಿಜೆಪಿಗೆ ಯಾವುದೇ ನಷ್ಟವಿಲ್ಲ. ಅವರ ಕುಟುಂಬ ಸದಸ್ಯರು, ಅವರ ನೂರು ಜನ ಆತ್ಮೀಯರು ಪಕ್ಷ ತೊರೆದ ಮಾತ್ರಕ್ಕೆ ಏನೂ ಆಗುವುದಿಲ್ಲ. ಕೊಪ್ಪಳದಲ್ಲಿ ಬಿಜೆಪಿ ಗೆಲ್ಲುವುದು ಶತಸಿದ್ಧ’ ಎಂದು ಗಂಗಾವತಿ ಶಾಸಕ ಗಾಲಿ ಜನಾರ್ಧನ ರೆಡ್ಡಿ ತಿಳಿಸಿದರು. 

‘ದೇಶದಲ್ಲಿ ಎನ್‌ಡಿಎ ಸರ್ಕಾರ ಪುನಃ ಅಧಿಕಾರಕ್ಕೆ ಬರಲಿದೆ,ಸಂಸ್ಕಾರವಿಲ್ಲದೇ ಮಾತನಾಡುವ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ, ಕನ್ನಡ ಮತ್ತು ಸಂಸ್ಕೃತಿ ಸಚಿವ ಶಿವರಾಜ್ ತಂಗಡಗಿ ಅವರ ಹೇಳಿಕೆಗಳು ಅವರಿಗೆ ಮುಳುವಾಗಲಿದೆ’ ಎಂದು ಗುರುವಾರ ಮಾಧ್ಯಮ ಪ್ರತಿನಿಧಿಗಳಿಗೆ ಪ್ರತಿಕ್ರಿಯಿಸಿದರು. 

‘ದೇವೇಗೌಡರು ಪ್ರಧಾನಮಂತ್ರಿ ನರೇಂದ್ರ ಮೋದಿಯವರನ್ನು ಬರಮಾಡಿಕೊಂಡ ರೀತಿ, ಅವರ ಬಗ್ಗೆ ಮಾತನಾಡಿದ ರೀತಿ ಇಡೀ ದೇಶದ ಗೌರವ ಹೆಚ್ಚುವಂತೆ ಮಾಡಿದೆ. ಆದರೆ, ಅವರ ಬಗ್ಗೆ ಡಿ.ಕೆ.ಶಿವಕುಮಾರ, ಶಿವರಾಜ್ ತಂಗಡಗಿ ಪ್ರಧಾನಿಯವರಿಗೆ ಕಪಾಳಮೋಕ್ಷ ಮಾಡಿ ಎಂದು ಹೇಳುವ ಮೂಲಕ ನಗೆಪಾಟಲಿಗೆ ಈಡಾಗಿದ್ದಾರೆ. ಕಾಂಗ್ರೆಸ್‍ನಲ್ಲಿ ಸಂಸ್ಕೃತಿಯೇ ಇಲ್ಲ‘ ಎಂದು ಟೀಕಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT